ಬೆಂಗಳೂರು: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಂಡ್ಯದಲ್ಲಿ ಡಿಸೆಂಬರ್ 20, 21, 22 ರಂದು ನಡೆಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಿಳಿಸಿದರು. ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಸಾಹಿತ್ಯ ಸಮ್ಮೇಳನದ ಪೂರ್ವಭಾವಿಯಾಗಿ ಕನ್ನಡ ಸಾಹಿತ್ಯ ಪರಿಷತ್ತು, ಮಂಡ್ಯ ಜಿಲ್ಲಾಡಳಿತ, ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರೊಂದಿಗೆ ಸಭೆ ನಡೆಸಿದ ನಂತರ ಮಾಧ್ಯಮದವರಿಗೆ ಮಾಹಿತಿ ನೀಡಿದರು.
ಈ ಹಿಂದೆ ಜೂನ್ ತಿಂಗಳಲ್ಲಿ ಸಮ್ಮೇಳನ ಆಯೋಜಿಸಲು ತೀರ್ಮಾನಿಸಲಾಗಿತ್ತು. ಆದರೆ ಚುನಾವಣಾ ನೀತಿ ಸಂಹಿತೆಯ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು. ಇದೀಗ ಡಿಸೆಂಬರ್ ತಿಂಗಳಲ್ಲಿ ಸಮ್ಮೇಳನ ನಡೆಸಲು ನಿರ್ಧರಿಸಲಾಗಿದೆ. ರಾಜ್ಯದ, ಹೊರರಾಜ್ಯ ಹಾಗೂ ವಿದೇಶದ ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಈ ಸಮ್ಮೇಳನದಲ್ಲಿ ಭಾಗವಹಿಸುವಂತೆ ಮನವಿ ಮಾಡುವುದಾಗಿ ತಿಳಿಸಿದರು.
ಇದನ್ನೂ ಓದಿ: ಪೆಟ್ರೋಲ್- ಡೀಸೆಲ್ ಬೆಲೆ ಏರಿಕೆಯ ಭಂಡತನದ ನಿರ್ಧಾರ ಕೈ ಬಿಡಿ- ಬಿ ವೈ ವಿಜಯೇಂದ್ರ
ಸರ್ಕಾರ ಜಿಲ್ಲಾಡಳಿತ, ಸಾಹಿತ್ಯ ಪರಿಷತ್ತಿಗೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದ ಮುಖ್ಯಮಂತ್ರಿಗಳು, ಸಾಹಿತ್ಯ ಸಮ್ಮೇಳನ ಅಧ್ಯಕ್ಷರ ಆಯ್ಕೆಯಾದ ಕೂಡಲೇ ಮಾಹಿತಿ ನೀಡಲಾಗುವುದು. ಜಿಲ್ಲಾಡಳಿತ, ಸಾಹಿತ್ಯ ಪರಿಷತ್ತಿನವರು ಸಾಹಿತಿಗಳ ಪಟ್ಟಿ ಒದಗಿಸಿದ ನಂತರ ಸರ್ಕಾರದೊಂದಿಗೆ ಚರ್ಚಿಸಿ ಅಂತಿಮಗೊಳಿಸಲು ತೀರ್ಮಾನಿಸಲಾಯಿತು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಮಂಡ್ಯದಲ್ಲಿ 48 ನೇ ಸಾಹಿತ್ಯ ಸಮ್ಮೇಳನ 1974 ರಲ್ಲಿ ಜಯದೇವಿ ತಾಯಿ ಲಿಗಾಡೆ ಅವರ ಅಧ್ಯಕ್ಷತೆಯಲ್ಲಿ, 63 ನೇ ಸಾಹಿತ್ಯ ಸಮ್ಮೇಳನ 1994 ರಲ್ಲಿ ಡಾ. ಚದುರಂಗ ಅವರ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿತ್ತು. ಇದೀಗ ಮೂರನೇ ಬಾರಿ ಸಮ್ಮೇಳನ ಆಯೋಜಿಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದರು.
ಎಲ್ಲರೂ ಸೇರಿ ಸಮ್ಮೇಳನವನ್ನು ಯಶಸ್ವಿಯಾಗಿ ಅಯೋಜಿಸುವ ವಿಶ್ವಾಸ ನನಗಿದೆ ಎಂದು ತಿಳಿಸಿದರು.
ಹಾಲಿನ ದರ ಏರಿಕೆ ಕುರಿತು ಯಾವುದೇ ಮಾಹಿತಿ ಇಲ್ಲ. ದರ ಏರಿಕೆ ಕುರಿತು ಕೆ.ಎಂ.ಎಫ್. ತೀರ್ಮಾನಿಸುತ್ತದೆ. ನೆರೆಯ ರಾಜ್ಯಗಳ ದರಕ್ಕೆ ಅನುಗುಣವಾಗಿ ಏರಿಕೆ ಮಾಡಲು ತೀರ್ಮಾನಿಸಿರಬಹುದು. ಈ ಬಗ್ಗೆ ಕೂಡಲೇ ಮಾಹಿತಿ ಪಡೆಯುವುದಾಗಿ ತಿಳಿಸಿದರು.
ಇದನ್ನೂ ಓದಿ: ದಲಿತ ಉದ್ಯಮಿಗಳ ಸಮಸ್ಯೆ ಇತ್ಯರ್ಥಕ್ಕೆ ಉನ್ನತ ಮಟ್ಟದ ಸಮಿತಿ: ಸಚಿವ ಎಂ ಬಿ ಪಾಟೀಲ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.