bad cholesterol symptoms: ದೇಹದಲ್ಲಿ ಕೊಲೆಸ್ಟ್ರಾಲ್ ಹೆಚ್ಚಳವು ಗಂಭೀರ ಸ್ಥಿತಿಯಾಗಿದೆ. ಸಮಯಕ್ಕೆ ಸರಿಯಾಗಿ ಕಾಳಜಿ ವಹಿಸದಿದ್ದರೆ, ಹೃದಯಾಘಾತ ಮತ್ತು ಪಾರ್ಶ್ವವಾಯುಗಳಂತಹ ಮಾರಣಾಂತಿಕ ಪರಿಸ್ಥಿತಿಗಳ ಅಪಾಯವು ವಕ್ಕರಿಸಿಕೊಳ್ಳಬಹುದು. ಅನಾರೋಗ್ಯಕರ ಆಹಾರ ಮತ್ತು ಕೆಟ್ಟ ಜೀವನಶೈಲಿಯು ಕೊಲೆಸ್ಟ್ರಾಲ್ ಅನ್ನು ಹೆಚ್ಚಿಸಲು ಪ್ರಮುಖ ಕಾರಣಗಳಲ್ಲಿ ಒಂದಾಗಿದೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ.
ಇತ್ತೀಚಿನ ದಿನಗಳಲ್ಲಿ ಹೃದಯಾಘಾತ ಮತ್ತು ಪಾರ್ಶ್ವವಾಯು ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಪರಿಸ್ಥಿತಿಯನ್ನು ಸಮಯಕ್ಕೆ ನಿಯಂತ್ರಿಸುವುದು ಬಹಳ ಮುಖ್ಯ, ಕೊಲೆಸ್ಟ್ರಾಲ್ ಹೆಚ್ಚಾದಾಗ, ವ್ಯಕ್ತಿಯ ದೇಹದಲ್ಲಿ ವಿಶೇಷವಾಗಿ ಮುಖದ ಮೇಲೆ ಕೆಲವು ಲಕ್ಷಣಗಳು ಕಾಣಿಸಿಕೊಳ್ಳಲು ಪ್ರಾರಂಭಿಸುತ್ತವೆ. ಅಂತಹ ಕೆಲವು ರೋಗಲಕ್ಷಣಗಳ ಬಗ್ಗೆ ನಿಮಗೆ ಹೇಳುತ್ತಿದ್ದೇವೆ.
ಇದನ್ನೂ ಓದಿ: ನಿತ್ಯ ಈ ಹೂವನ್ನು ಸೇವಿಸಿದರೆ ಕೊಲೆಸ್ಟ್ರಾಲ್ ಸಂಪೂರ್ಣ ನಿಯಂತ್ರಣಕ್ಕೆ ಬರುವುದು ! ಅಪ್ಪಿ ತಪ್ಪಿಯೂ ಏರುವುದಿಲ್ಲ ಬ್ಲಡ್ ಶುಗರ್
ಕೊಲೆಸ್ಟ್ರಾಲ್ ಎಂದರೇನು?
ಕೊಲೆಸ್ಟ್ರಾಲ್’ನಲ್ಲಿ ಎರಡು ವಿಧಗಳಿವೆ. ಮೊದಲನೆಯದು ಎಲ್ ಡಿ ಎಲ್ ಕೊಲೆಸ್ಟ್ರಾಲ್ ಮತ್ತು ಎರಡನೆಯದು ಎಚ್ ಡಿ ಎಲ್ ಕೊಲೆಸ್ಟ್ರಾಲ್. ಎಲ್ ಡಿ ಎಲ್ ಕೊಲೆಸ್ಟ್ರಾಲ್ ಅನ್ನು ದೇಹಕ್ಕೆ ಕೊಳಕು ಮತ್ತು ಹಾನಿಕಾರಕವೆಂದು ಪರಿಗಣಿಸಲಾಗುತ್ತದೆ. ಆದರೆ ಎಚ್ ಡಿ ಎಲ್ ಕೊಲೆಸ್ಟ್ರಾಲ್ ಉತ್ತಮ ಮತ್ತು ದೇಹದ ಅನೇಕ ಕಾರ್ಯನಿರ್ವಹಣೆಯಲ್ಲಿ ಸಹಾಯಕವಾಗಿದೆ.
ಹೆಚ್ಚು ಎಣ್ಣೆಯುಕ್ತ ಮತ್ತು ಅನಾರೋಗ್ಯಕರ ಆಹಾರವನ್ನು ಸೇವಿಸುವುದರಿಂದ, ಎಲ್ ಡಿ ಎಲ್ ಕೊಲೆಸ್ಟ್ರಾಲ್ ದೇಹದಲ್ಲಿ ಹೆಚ್ಚಾಗಲು ಪ್ರಾರಂಭಿಸುತ್ತದೆ. ಕ್ರಮೇಣ ಇದು ರಕ್ತನಾಳಗಳ ಆಂತರಿಕ ಭಾಗಗಳಲ್ಲಿ ರಕ್ತ ಪರಿಚಲನೆಯ ಮೇಲೆ ಪರಿಣಾಮ ಬೀರಲು ಪ್ರಾರಂಭಿಸುತ್ತದೆ. ಹೃದಯಾಘಾತ, ಪಾರ್ಶ್ವವಾಯುಗಳಿಗೆ ಕಾರಣವಾಗುತ್ತದೆ.
ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಳದಿಂದಾಗಿ ಕಣ್ಣುರೆಪ್ಪೆಗಳ ಮೇಲೆ ದದ್ದುಗಳು ಅಥವಾ ಸಣ್ಣ ಮೊಡವೆಗಳು ಕಾಣಿಸಿಕೊಳ್ಳುತ್ತವೆ. ಇಂತಹ ರೋಗಲಕ್ಷಣಗಳು ಕಂಡುಬಂದರೆ ತಕ್ಷಣವೇ ಎಚ್ಚೆತ್ತುಕೊಳ್ಳಿ. ನಿದ್ರೆಯ ಕೊರತೆ ಅಥವಾ ಅತಿಯಾದ ಆಯಾಸದಿಂದ, ಮುಖವು ಸ್ವಲ್ಪ ಊದಿಕೊಂಡಂತಾಗುತ್ತದೆ. ಆದರೆ ಈ ಊತ ದಿನಕಳೆದಂತೆ ಹೆಚ್ಚಾಗುತ್ತಾ ಹೋದಲ್ಲಿ, ಜೊತೆಗೆ ಚರ್ಮವು ಶುಷ್ಕ ಮತ್ತು ಹಳದಿಯಾಗಿ ಕಂಡುಬಂದರೆ, ಇದು ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಳದ ಕಾರಣವೂ ಆಗಿರಬಹುದು.
ಇದನ್ನೂ ಓದಿ: Health Benefits Of Papaya Seeds: ಪಪ್ಪಾಯಿ ಬೀಜಗಳ ಅದ್ಭುತ ಆರೋಗ್ಯ ಪ್ರಯೋಜನಗಳು
ಸೂಚನೆ: ಸಲಹೆ ಸೇರಿದಂತೆ ಈ ವಿಷಯವು ಸಾಮಾನ್ಯ ಮಾಹಿತಿಯನ್ನು ಮಾತ್ರ ಒದಗಿಸುತ್ತದೆ. ಇದು ಅರ್ಹ ವೈದ್ಯಕೀಯ ಅಭಿಪ್ರಾಯಕ್ಕೆ ಯಾವುದೇ ರೀತಿಯಲ್ಲಿ ಪರ್ಯಾಯವಾಗಿಲ್ಲ. ಹೆಚ್ಚಿನ ಮಾಹಿತಿಗಾಗಿ ಯಾವಾಗಲೂ ತಜ್ಞ ಅಥವಾ ನಿಮ್ಮ ವೈದ್ಯರನ್ನು ಸಂಪರ್ಕಿಸಿ. ಈ ಮಾಹಿತಿಯ ಹೊಣೆಯನ್ನು Zee Kannada News ಖಚಿತಪಡಿಸಿಕೊಳ್ಳುವುದಿಲ್ಲ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ