ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (MUDA)ದಲ್ಲಿ ನಡೆದಿರುವ ಹಗರಣದ ಸಂಬಂಧ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ವಿಪಕ್ಷ ನಾಯಕ ಆರ್.ಅಶೋಕ್ ಅವರು ಸಿದ್ದರಾಮಯ್ಯರಿಗೆ “ಗೋಲ್ಮಾಲ್ ಸಿಎಂ’ ಟೀಕಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯರಿಗೆ 7 ಪ್ರಶ್ನೆ ಕೇಳಿದ್ದು, ʼಗೋಲ್ಮಾಲ್ ಸಿಎಂ-400 ಕೋಟಿ ರೂಪಾಯಿ ಗುಳುಂʼ ಎಂದು ವ್ಯಂಗ್ಯವಾಡಿದ್ದಾರೆ. ʼವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂ. ದಲಿತರ ಹಣವನ್ನು ಗುಳುಂ ಮಾಡಿರುವ 'ಸಿದ್ಧ'ಹಸ್ತರು ಈಗ ಮೈಸೂರಿನ ಮುಡಾದಲ್ಲಿ ₹4,000 ಕೋಟಿ ಗುಳುಂ ಮಾಡುವ ಮೂಲಕ ಮತ್ತೊಮ್ಮೆ ತಮ್ಮ 'ಕೈ'ಚಳಕ ಪ್ರದರ್ಶನ ಮಾಡಿದ್ದಾರೆʼ ಎಂದು ಕುಟುಕಿದ್ದಾರೆ.
ಇದನ್ನೂ ಓದಿ: ಕನ್ವರ್ಷನ್ ಮಾಫಿಯದ ಕೈಗೊಂಬೆಯಾಗಿ ಅಥವಾ ಡಿಎನ್ಎ ಕಾರಣಕ್ಕೆ ರಾಹುಲ್ ಹೇಳಿಕೆ?-ಸಿ.ಟಿ.ರವಿ
ಸಿದ್ದರಾಮಯ್ಯರಿಗೆ ಆರ್.ಅಶೋಕ್ ಕೇಳಿದ 7 ಪ್ರಶ್ನೆಗಳು
ಗೋಲ್ಮಾಲ್ ಸಿಎಂ
₹4,000 ಕೋಟಿ ಗುಳುಂವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂಪಾಯಿ ದಲಿತರ ಹಣವನ್ನ ಗುಳುಂ ಮಾಡಿರುವ 'ಸಿದ್ಧ'ಹಸ್ತರು ಈಗ ಮೈಸೂರಿನ ಮುಡಾದಲ್ಲಿ ₹4,000 ಕೋಟಿ ಗುಳುಂ ಮಾಡುವ ಮೂಲಕ ಮತ್ತೊಮ್ಮೆ ತಮ್ಮ 'ಕೈ'ಚಳಕ ಪ್ರದರ್ಶನ ಮಾಡಿದ್ದಾರೆ.
ಗೋಲ್ಮಾಲ್ ಸಿಎಂ @siddaramaiah ನವರೇ, ಈ ಪ್ರಶ್ನೆಗಳಿಗೆ ನಿಮ್ಮ ಬಳಿ… pic.twitter.com/rhtvPuzkLW
— R. Ashoka (ಮೋದಿ ಅವರ ಕುಟುಂಬ) (@RAshokaBJP) July 2, 2024
ಗೋಲ್ಮಾಲ್ ಸಿಎಂ ಸಿದ್ದರಾಮಯ್ಯನವರೇ, ಈ ಪ್ರಶ್ನೆಗಳಿಗೆ ನಿಮ್ಮ ಬಳಿ ಉತ್ತರವಿದೆಯೇ? ಎಂದು ವಿಪಕ್ಷ ನಾಯಕ ಆರ್.ಅಶೋಕ್ ಪ್ರಶ್ನಿಸಿದ್ದಾರೆ.
1) ಗೋಲ್ಮಾಲ್ ಸಿಎಂ ಸಿದ್ದರಾಮಯ್ಯನವರೇ, ತಮ್ಮ ಧರ್ಮ ಪತ್ನಿ ಅವರ ಹೆಸರಿನಲ್ಲೂ ನಿಯಮ ಬಾಹಿರವಾಗಿ ನಿವೇಶನ ವರ್ಗಾವಣೆ ಆಗಿರುವ ಸುದ್ದಿ ಹೊರಬಂದಿದೆಯಲ್ಲ ಇದನ್ನ ಹೇಗೆ ಸಮರ್ಥನೆ ಮಾಡಿಕೊಳ್ಳುತ್ತೀರಿ?
2) ಆರೋಪ ಕೇಳಿಬಂದಿರುವ ಮುಡಾ ಅಧಿಕಾರಿಗಳನ್ನ ಅಮಾನತು ಮಾಡದೆ, ಕೇವಲ ವರ್ಗಾವಣೆ ಮಾಡಿ ಕೈತೊಳೆದುಕೊಂಡಿದ್ದೀರಲ್ಲ, ಯಾರನ್ನು ರಕ್ಷಣೆ ಮಾಡಲು ಹೊರಟಿದ್ದೀರಿ?
3) 4,000 ಕೋಟಿ ರೂ. ಮೌಲ್ಯದ ಈ ಬ್ರಹ್ಮಾಂಡ ಭ್ರಷ್ಟಾಚಾರ ಪ್ರಕರಣವನ್ನು ಅಸಲಿಗೆ ಸಿಬಿಐಗೆ ವಹಿಸಬೇಕು ಅಥವಾ ನಿವೃತ್ತ ನ್ಯಾಯಮೂರ್ತಿ ನೇತೃತ್ವದ ತನಿಖಾ ಆಯೋಗಕ್ಕೆ ನೀಡಬೇಕು. ಅದು ಬಿಟ್ಟು ತನಿಖೆಗೆ ಇಬ್ಬರು ಐಎಎಸ್ ಅಧಿಕಾರಿಗಳನ್ನ ನೇಮಿಸಿ ಪ್ರಕರಣವನ್ನ ಮುಚ್ಚಿಹಾಕಲು ಹೊರಟಿದ್ದೀರಲ್ಲ ಈ ಹಗರಣದಲ್ಲಿ ತಮ್ಮ ಪಾಲೆಷ್ಟು?
4) 50:50 ಅನುಪಾತ ಹಂಚಿಕೆಗೆ ಅನುಮತಿ ನೀಡಿದ್ದು ಯಾರು?
5) ಪರ್ಯಾಯ ನಿವೇಶನ ನೀಡುವಾಗ ಅದೇ ಬಡಾವಣೆ ಬಿಟ್ಟು ಲಾಭದ ಬಡಾವಣೆಗಳಲ್ಲಿ ಅವಕಾಶಕ್ಕೆ ಶಿಫಾರಸ್ಸು ಮಾಡಿದ್ದು ಯಾರು?
6) ಸಚಿವ ಸಂಪುಟದ ಅನುಮತಿ ಪಡೆಯದೆ ಮನಸ್ಸಿಗೆ ಬಂದಂತೆ ನಿವೇಶನ ನೀಡಲು ಅನುಮತಿ ನೀಡಿದ್ದು ಯಾರು?
7) ನಿಮ್ಮ ತವರು ಜಿಲ್ಲೆಯಲ್ಲಿ, ಸ್ವಂತ ಊರಿನಲ್ಲಿ, ತಮ್ಮ ಆಪ್ತ ಸಚಿವರ ಇಲಾಖೆಯಲ್ಲಿ, ಇಂಥದ್ದೊಂದು ಬೃಹತ್ ಹಗರಣ ತಮ್ಮ ಗಮನಕ್ಕೆ ಬಾರದೆ, ತಮ್ಮ ಕೈವಾಡವಿಲ್ಲದೆ ನಡೆಯಲು ಸಾಧ್ಯವೇ?
ಇದನ್ನೂ ಓದಿ: ದಿನಕ್ಕೆ 1 ಕೋಟಿ ಲೀಟರ್ ಹಾಲು ಉತ್ಪಾದನೆ; KMF ಇತಿಹಾಸದಲ್ಲೇ ಇದೊಂದು ಮೈಲಿಗಲ್ಲು ಎಂದ ಸಿಎಂ ಸಿದ್ದರಾಮಯ್ಯ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.