ದಿನಭವಿಷ್ಯ 09-07-2024: ಇಂದು ಸಿದ್ಧಿಯೋಗದಿಂದ ಈ ರಾಶಿಯವರ ಇಷ್ಟಾರ್ಥ ಸಿದ್ಧಿ

Today Horoscope 09th July 2024: ಇಂದು ಮಂಗಳವಾರ ಸಿದ್ಧಿಯೋಗ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿಯವರ ರಾಶಿಫಲ ಹೇಗಿದೆ ತಿಳಿಯಿರಿ. 

Written by - Yashaswini V | Last Updated : Jul 9, 2024, 07:41 AM IST
  • ಮೇಷ ರಾಶಿಯವರು ಉದ್ಯೋಗದಲ್ಲಿ ಮೇಲಾಧಿಕಾರಿಗಳ ಮೆಚ್ಚುಗೆಗೆ ಪಾತ್ರರಾಗುವಿರಿ.
  • ಮಿಥುನ ರಾಶಿಯವರಿಗೆ ಪ್ರೀತಿ ಜೀವನದಲ್ಲಿ ಕುಳಿತು ಮಾತನಾಡುವುದರಿಂದ ಭಿನ್ನಾಭಿಪ್ರಾಯ ಕೊನೆಗೊಳ್ಳಲಿದೆ.
  • ಮಕರ ರಾಶಿಯ ಕ್ರೀಡಾ ಕ್ಷೇತ್ರದಲ್ಲಿರುವವರು ಇಂದು ಶುಭ ಸುದ್ದಿಯನ್ನು ಕೇಳಬಹುದು.
ದಿನಭವಿಷ್ಯ 09-07-2024:  ಇಂದು ಸಿದ್ಧಿಯೋಗದಿಂದ ಈ ರಾಶಿಯವರ ಇಷ್ಟಾರ್ಥ ಸಿದ್ಧಿ  title=

Mangalvara Dina Bhavishya In Kannada: ಶ್ರೀ ಶಾಲಿವಾಹನ ಶಕೆ 1946, ಕ್ರೋಧಿ ನಾಮ ಸಂವತ್ಸರ, ದಕ್ಷಿಣಾಯನ ಗ್ರೀಷ್ಮ ಋತು, ಆಷಾಢ ಮಾಸ ಶುಕ್ಲ ಪಕ್ಷ, ತೃತೀಯ ತಿಥಿಯ ಈ ದಿನ ಮಂಗಳವಾರ ಆಶ್ಲೇಷಾ ನಕ್ಷತ್ರ, ಸಿದ್ಧಿ ಯೋಗ ಇರಲಿದೆ. ಇಂದು ಯಾವ ರಾಶಿಯವರಿಗೆ ಹೇಗಿದೆ ತಿಳಿಯಿರಿ. 

ಮೇಷ ರಾಶಿಯವರ ಭವಿಷ್ಯ (Aries Horoscope):  
ನಿಮ್ಮ ಪ್ರಿಯವಾದ ವಸ್ತುಗಳು ಕಳುವಾಗುವ ಸಂಭವವಿರುವುದರಿಂದ ಜಾಗರೂಕರಾಗಿರಿ. ಕುಟುಂಬದ ಸದಸ್ಯರ ಮಾತನ್ನು ಗೌರವಿಸಿ ನಡೆದರೆ ಯಶಸ್ಸು ಖಂಡಿತ ಸಿಗಲಿದೆ. ಉದ್ಯೋಗದಲ್ಲಿ ಮೇಲಾಧಿಕಾರಿಗಳ ಮೆಚ್ಚುಗೆಗೆ ಪಾತ್ರರಾಗುವಿರಿ. 

ವೃಷಭ ರಾಶಿಯವರ ಭವಿಷ್ಯ (Taurus Horoscope):  
ಇಂದು ನಿಮಗೆ ಅದೃಷ್ಟದ ದಿನ. ಭೂಮಿ, ವಾಹನ, ಮನೆ ಖರೀದಿಸಲು ಯೋಚಿಸುತ್ತಿದ್ದರೆ ಈ ನಿಟ್ಟಿನಲ್ಲಿ  ಮನೆಯ ಹಿರಿಯರ ಸಲಹೆ ಮೇರೆಗೆ ಕಾರ್ಯನಿರ್ವಹಿಸಿ. ದಿಢೀರ್ ಧನಲಾಭವು ನಿಮ್ಮ ಮನೋಲ್ಲಾಸವನ್ನು ಹೆಚ್ಚಿಸಲಿದೆ. 

ಮಿಥುನ ರಾಶಿಯವರ ಭವಿಷ್ಯ (Gemini Horoscope):   
ಇಂದು ಧನಾತ್ಮಕ ಫಲಗಳನ್ನು ನಿರೀಕ್ಷಿಸಬಹುದು. ಅರೆಕಾಲಿನ ಉದ್ಯೋಗಕ್ಕಾಗಿ ಪ್ರಯತ್ನಿಸುತ್ತಿರುವವರಿಗೆ ಉತ್ತಮ ದಿನ. ವ್ಯಾಪಾರ ವರ್ಗದವರು ಹೊಸತರಲ್ಲಿ ಹೂಡಿಕೆ ಮಾಡುವುದನ್ನು ತಪ್ಪಿಸಿ. ಪ್ರೀತಿ ಜೀವನದಲ್ಲಿ ಕುಳಿತು ಮಾತನಾಡುವುದರಿಂದ ಭಿನ್ನಾಭಿಪ್ರಾಯ ಕೊನೆಗೊಳ್ಳಲಿದೆ. 

ಕರ್ಕಾಟಕ ರಾಶಿಯವರ ಭವಿಷ್ಯ (Cancer Horoscope): 
ಮಿಶ್ರ ಫಲಗಳಿಂದ ಕೂಡಿದ ದಿನ ಇದಾಗಿದೆ. ಕುಟುಂಬ ಜೀವನದಲ್ಲಿ ಸಮನ್ವಯ ಕಾಪಾಡಿಕೊಳ್ಳಲು ಕಾರ್ಯೋನ್ಮುಖರಾಗುವುದು ಒಳಿತು. ಕೆಲಸಕ್ಕೆ ಸಂಬಂಧಿಸಿದಂತೆ ಸಣ್ಣ ಪ್ರವಾಸವನ್ನು ಕೈಗೊಳ್ಳಬೇಕಾಗಬಹುದು. ಇದು ಲಾಭದಾಯಕವಾಗಿರಲಿದೆ. 

ಇದನ್ನೂ ಓದಿ- Shukra Gochar: ತಿಂಗಳಾಂತ್ಯದವರೆಗೆ ಈ ರಾಶಿಯವರಿಗೆ ರಾಜ ವೈಭೋಗ, ಸಂಪತ್ತಿಗಿಲ್ಲ ಕೊರತೆ

ಸಿಂಹ ರಾಶಿಯವರ ಭವಿಷ್ಯ (Leo Horoscope):  
ಈ ದಿನ ನಿಮಗೆ ಅಷ್ಟು ಉತ್ತಮವಾಗಿಲ್ಲ. ಹಾಗಾಗಿ, ಯಾವುದೇ ರೀತಿಯ ಭಾವನಾತ್ಮಕ ನಿರ್ಧಾರಗಳನ್ನು ಕೈಗೊಳ್ಳುವುದನ್ನು ತಪ್ಪಿಸಿ. ಇಲ್ಲವೇ ಬೇರೆಯವರು ನಿಮ್ಮ ಈ ಅಭ್ಯಾಸವನ್ನು ದುರುಪಯೋಗಪಡಿಸಿಕೊಳ್ಳಬಹುದು. ಆಸ್ತಿಯಲ್ಲಿ ಹೂಡಿಕೆ ಮಾಡಲು ಉತ್ತಮ ದಿನ. 

ಕನ್ಯಾ ರಾಶಿಯವರ ಭವಿಷ್ಯ (Virgo Horoscope): 
ಇಂದು ಸವಾಲುಗಳಿಂದ ತುಂಬಿದ ದಿನ. ನಿಮ್ಮ ಕೆಲಸದಲ್ಲಿ ಹೊಸ ಪ್ರಾಜೆಕ್ಟ್ ಪಡೆದಿದ್ದರೆ ಇದಕ್ಕಾಗಿ ಹೆಚ್ಚಿನ ಸಮಯ ವಿನಿಯೋಗಿಸಬೇಕಾಗುತ್ತದೆ. ವಿದ್ಯಾರ್ಥಿಗಳು ನಿಮ್ಮ ವಿದ್ಯಾಭ್ಯಾಸದ ಕಡೆಗೆ ಹೆಚ್ಚಿನ ಗಮನಹರಿಸಿ. 

ತುಲಾ ರಾಶಿಯವರ ಭವಿಷ್ಯ (Libra Horoscope): 
ಶಕ್ತಿಯುತವಾದ ದಿನ. ವಾಪರ ವರ್ಗದವರು ಹೊಸ ಯೋಜನೆಯಲ್ಲಿ ಕೆಲಸ ಮಾಡಲು ಶುಭ ಸಮಯ. ನಿಮ್ಮ ಹಣಕಾಸಿನ ಸ್ಥಿತಿಯ ಬಗ್ಗೆ ಚಿಂತಿಸುವುದನ್ನು ತಪ್ಪಿಸಿ. ದಿನಗಳೆದಂತೆ ಎಲ್ಲವೂ ಸರಿಹೋಗಲಿದೆ. ಕುಟುಂಬದಲ್ಲಿ ಮಂಗಳಕರ ಘಟನೆಗಳು ನಡೆಯುವ ಸಂಭವವಿದೆ. 

ವೃಶ್ಚಿಕ ರಾಶಿಯವರ ಭವಿಷ್ಯ (Scorpio Horoscope):  
ಇಂದು ವಿಶೇಷವಾದ ದಿನವನ್ನು ಅನುಭವಿಸುವಿರಿ. ವೃತ್ತಿ ಸಂಬಂಧಿತ ನಿರ್ಧಾರಗಳನ್ನು ಕೈಗೊಳ್ಳಲು ಸೂಕ್ತ ಸಮಯ. ಹೊಸ ವ್ಯವಹಾರಕ್ಕೆ ಸಂಬಂಧಿಸಿದಂತೆ ನಿಮ್ಮ ಬಹುದಿನಗಳ ಕನಸು ನನಸಾಗಲಿದೆ. ಆದರೆ, ಬೇರೆಯವರನ್ನು ಕುರುಡಾಗಿ ನಂಬುವುದನ್ನು ತಪ್ಪಿಸಿ. 

ಇದನ್ನೂ ಓದಿ- Shani Vakri: ಮುಂದಿನ 137 ದಿನಗಳವರೆಗೆ ಈ ರಾಶಿಯವರಿಗೆ ಶನಿ ಕೃಪೆ, ಹೆಚ್ಚಾಗಲಿದೆ ಬ್ಯಾಂಕ್ ಬ್ಯಾಲೆನ್ಸ್

ಧನು ರಾಶಿಯವರ ಭವಿಷ್ಯ (Sagittarius Horoscope):  
ಇಂದು ನಿಮಗೆ ಅಷ್ಟು ಶುಭಕರವಾಗಿಲ್ಲ. ಹಾಗಾಗಿ, ಯಾವುದೇ ವಿಚಾರದಲ್ಲಿ ಭಾವನಾತ್ಮಕ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಅಷ್ಟು ಸೂಕ್ತವಲ್ಲ. ಕುಟುಂಬದಲ್ಲಿನ ದೀರ್ಘಕಾಲದ ಭಿನ್ನಾಭಿಪ್ರಾಯಗಳನ್ನು ತಪ್ಪಿಸಲು ಸೌಮ್ಯ ಮಾತುಕತೆಗೆ ಪ್ರಯತ್ನಿಸಿ. 

ಮಕರ ರಾಶಿಯವರ ಭವಿಷ್ಯ (Capricorn Horoscope):  
ಇಂದು ನಿಮಗೆ ಅದೃಷ್ಟದ ದಿನ. ಹೊಸ ವಾಹನ, ಭೂಮಿ ಖರೀದಿಸಲು ಬಯಸುವವರು ಈ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬಹುದು. ಕುಟುಂಬ ಸದಸ್ಯರ ಜೊತೆಗೆ ಉತ್ತಮ ಸಮಯವನ್ನು ಕಳೆಯುವಿರಿ. ಕ್ರೀಡಾ ಕ್ಷೇತ್ರದಲ್ಲಿರುವವರು ಇಂದು ಶುಭ ಸುದ್ದಿಯನ್ನು ಕೇಳಬಹುದು. 

ಕುಂಭ ರಾಶಿಯವರ ಭವಿಷ್ಯ (Aquarius Horoscope):  
ಈ ದಿನ ಸಾಮಾಜಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಸಿಗುವ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಿ. ಹೂಡಿಕೆಯಿಂದ ಉತ್ತಮ ಲಾಭವನ್ನು ನಿರೀಕ್ಷಿಸಬಹುದು. ವ್ಯಾಪಾರ-ವ್ಯವಹಾರದಲ್ಲಿ ಯಶಸ್ಸು ನಿಮ್ಮ ಪಾಲಿಗಿದೆ. 

ಮೀನ ರಾಶಿಯವರ ಭವಿಷ್ಯ (Pisces Horoscope): 
ಇಂದು ಮಿಶ್ರ ಫಲಿತಾಂಶಗಳಿಂದ ಕೂಡಿದ ದಿನ. ನಿಮ್ಮ ಶತ್ರುವರ್ಗದವರು ತಾವಾಗಿಯೇ ಬಂದು ನಿಮಗೆ ನಮಸ್ಕರಿಸುವುದನ್ನು ನೀವು ಕಾಣಬಹುದು. ಬಿಸಿನೆಸ್ ಸಂಬಂಧಿತ ಪ್ರಯಾಣವು ಲಾಭದಾಯಕವಾಗಿರುತ್ತದೆ. ಅನಗತ್ಯ ವಸ್ತುಗಳಿಗಾಗಿ ಖರ್ಚು ಮಾಡುವುದನ್ನು ತಪ್ಪಿಸಿ. 

ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಸಾಮಾಜಿಕ ಮತ್ತು ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News