ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶುಕ್ರವಾರ ರಾಜ್ಯ ಸರ್ಕಾರದ ಲಾಂಛನವನ್ನು ಅನಾವರಣಗೊಳಿಸಿದರು. ಅಶೋಕ ಕಂಬಗಳೊಂದಿಗೆ 'ಬಿಸ್ವಾ ಬಾಂಗ್ಲಾ' ಧ್ಯೇಯವನ್ನು ಹೊಂದಿರುವ ಲಾಂಛನವನ್ನು ಮತ್ತು ಕಳೆದ ವರ್ಷ ಮೇನಲ್ಲಿ ಅನುಮೋದನೆಗೆ ಕೇಂದ್ರ ಸರ್ಕಾರಕ್ಕೆ ಕಳುಹಿಸಲಾಗಿತ್ತು
ಸ್ವತಃ ಮಮತಾ ಬ್ಯಾನರ್ಜಿಯವರ ವಿನ್ಯಾಸ ಮತ್ತು ಪರಿಕಲ್ಪನೆಯಲ್ಲಿ ಮೂಡಿ ಬಂದಿರುವ ಈ ಲಾಂಚನಕ್ಕೆ ಜನವರಿ 3 ರಂದು ಕೇಂದ್ರ ಸರ್ಕಾರದಿಂದ ಅನುಮೋದನೆ ನೀಡಲಾಗಿದೆ.
ಇತ್ತೀಚೆಗೆ ಬಿಸ್ವಾ ಬಾಂಗ್ಲಾ ಲಾಂಛನವು ಭಾರೀ ವಿವಾದಕ್ಕೆ ಗುರಿಯಾಗಿತ್ತು .ಬಿಜೆಪಿ ಸೇರಿರುವ ಮಾಜಿ ತೃಣಮೂಲ ಕಾಂಗ್ರೆಸ್ ಮುಖಂಡ ಮುಕುಲ್ ರಾಯ್ ಅವರು ಮಮತಾ ಬ್ಯಾನರ್ಜಿ ಯವರ ಸೋದರಳಿಯ ಮತ್ತು ಪಕ್ಷದ ಸಂಸದ ಅಭಿಷೇಕ್ ಬ್ಯಾನರ್ಜಿ ಹೆಸರಿನಲ್ಲಿ ನೋಂದಾಯಿಸಲಾಗಿದೆ ಎಂದು ಆರೋಪಿಸಿದ್ದರು.
ಆದಾಗ್ಯೂ, ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿ ಅತ್ರಿ ಭಟ್ಟಾಚಾರ್ಯ ಮತ್ತು ಎಂಎಸ್ಎಂಇ ಕಾರ್ಯದರ್ಶಿ ರಾಜೀವ ಸಿನ್ಹಾ ಅವರು ಅಂತಹ ಎಲ್ಲ ಆರೋಪಗಳನ್ನು ಅಲ್ಲಗಳೆದಿದ್ದರು.