ಬೆಂಗಳೂರು: ಜುಲೈ 10ರಂದು ಚಾಮರಾಜನಗರಕ್ಕೆ ಭೇಟಿ ನೀಡಿದ್ದ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಕೃತಜ್ಞತಾ ಸಮಾವೇಶದಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ರೈತರು, ಆಕ್ಸಿಜನ್ ದುರಂತದ ಸಂತ್ರಸ್ತರು ಮನವಿ ಪತ್ರಗಳನ್ನು ನೀಡಿದ್ದರು. ಸಿಎಂ ಸಿದ್ದರಾಮಯ್ಯನವರು ಅಂದು ಸ್ವೀಕರಿಸಿದ್ದ ಮನವಿ ಪತ್ರಗಳು ಕಸದ ರಾಶಿಯಲ್ಲಿ ಪತ್ತೆಯಾಗಿವೆ. ಇದೇ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.
ಇದನ್ನೂ ಓದಿ: ಜುಲೈ 18ರವರೆಗೆ ಮಾಜಿ ಸಚಿವ ನಾಗೇಂದ್ರ ಇಡಿ ಕಸ್ಟಡಿಗೆ!
ಈ ಬಗ್ಗೆ ಶನಿವಾರ ಟ್ವೀಟ್ ಮಾಡಿರುವ ಅವರು, ʼಜನರ ಸಮಸ್ಯೆಗಳನ್ನು ಪರಿಹರಿಸುವ ವ್ಯವದಾನ ಇಲ್ಲದಿದ್ದರೆ ಜನತಾ ದರ್ಶನವೆಂಬ ಬೂಟಾಟಿಕೆಯ ನಾಟಕ ಬೇಕೆ?ʼ ಎಂದು ಪ್ರಶ್ನಿಸಿದ್ದಾರೆ. ʼಮುಖ್ಯಮಂತ್ರಿಗಳ ಬಳಿ ಹೋದರೆ ಸಮಸ್ಯೆ ಬಗೆಹರಿಯುತ್ತದೆ' ಎಂಬ ಭರವಸೆಯಿಂದ ಬಹುದೂರದಿಂದ ಪ್ರಯಾಸಪಟ್ಟು ಬಂದು ಗಂಟೆಗಟ್ಟಲೆ ಸರತಿ ಸಾಲಲ್ಲಿ ನಿಂತು ಜನಸಾಮಾನ್ಯರು ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಪತ್ರಗಳನ್ನು ಸಲ್ಲಿಸುತ್ತಾರೆ. ಆದರೆ ಜನಸಾಮಾನ್ಯರ ಕಷ್ಟ-ಕಾರ್ಪಣ್ಯಗಳತ್ತ ಕಣ್ಣಾಡಿಸುವ ಮೊದಲೇ ಅವರ ಪತ್ರಗಳು ಕಸದ ರಾಶಿ ಸೇರಿರುವುದು ಜನರ ದೂರು-ದುಮ್ಮಾನಗಳಿಗೆ ಕಾಂಗ್ರೆಸ್ ಸರ್ಕಾರ ತೋರುತ್ತಿರುವ ಉಡಾಫೆ ವರ್ತನೆಗಳಿಗೆ ಕನ್ನಡಿ ಹಿಡಿದಿದೆʼ ಎಂದು ವಿಜಯೇಂದ್ರ ಕುಟುಕಿದ್ದಾರೆ.
'ಮುಖ್ಯಮಂತ್ರಿಗಳ ಬಳಿ ಹೋದರೆ ಸಮಸ್ಯೆ ಬಗೆಹರಿಯುತ್ತದೆ' ಎಂಬ ಭರವಸೆಯಿಂದ ಬಹುದೂರದಿಂದ ಪ್ರಯಾಸಪಟ್ಟು ಬಂದು ಗಂಟೆಗಟ್ಟಲೆ ಸರತಿ ಸಾಲಲ್ಲಿ ನಿಂತು ಜನಸಾಮಾನ್ಯರು ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಪತ್ರಗಳನ್ನು ಸಲ್ಲಿಸುತ್ತಾರೆ.
ಆದರೆ ಜನಸಾಮಾನ್ಯರ ಕಷ್ಟ-ಕಾರ್ಪಣ್ಯಗಳತ್ತ ಕಣ್ಣಾಡಿಸುವ ಮೊದಲೇ ಅವರ ಪತ್ರಗಳು ಕಸದ ರಾಶಿ ಸೇರಿರುವುದು ಜನರ… pic.twitter.com/vSUKL9M51h— Vijayendra Yediyurappa (@BYVijayendra) July 13, 2024
ಇದನ್ನೂ ಓದಿ: ಡೆಂಘಿ ಕಾರಣ ಹೊಸಪೇಟೆಯ ಗ್ರಾಮೀಣ ಭಾಗಗಳಲ್ಲಿ ಫಾಗಿಂಗ್ ಕಾರ್ಯ
ʼಜನಕಾಳಜಿಯ ಬಗ್ಗೆ ತಮ್ಮ ಹಳೆಯ ನೆನಪುಗಳನ್ನು ಉಲ್ಲೇಖಿಸುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೆರಳಿನಲ್ಲಿ ಜನರ ಬಗೆಗಿನ ತಾತ್ಸಾರ ನರ್ತಿಸುತ್ತಿರುವುದು ನಿಜಕ್ಕೂ ಆಶ್ಚರ್ಯವೆನಿಸಿದೆ, ಇಂಥಾ ಅಪಚಾರದ ಅಮಾನವೀಯ ಕೃತ್ಯ ಯಾರಿಂದಲೇ ನಡೆದಿದ್ದರೂ ಅದರ ನೇರ ಹೊಣೆ ಮುಖ್ಯಮಂತ್ರಿಗಳೇ ಹೊರಬೇಕಿದೆ, ಈ ನಿಟ್ಟಿನಲ್ಲಿ ನೈತಿಕ ಜವಾಬ್ದಾರಿಯಿಂದ ಜನರಿಗೆ ಅವರು ಉತ್ತರಿಸಬೇಕಿದೆ. ಜನರ ಸಮಸ್ಯೆಗಳನ್ನು ಪರಿಹರಿಸುವ ವ್ಯವದಾನ ಇಲ್ಲದಿದ್ದರೆ ಜನತಾ ದರ್ಶನವೆಂಬ ಬೂಟಾಟಿಕೆಯ ನಾಟಕ ಬೇಕೆ?ʼ ಎಂದು ಅವರು ಪ್ರಶ್ನಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.