ಜಿಡ್ಡು ಗಟ್ಟಿ ಕುಳಿತಿರುವ ಕೊಲೆಸ್ಟ್ರಾಲ್ ಅನ್ನು ರಕ್ತನಾಳಗಳಿಂದ ಹೊರ ಹಾಕುತ್ತದೆ ಈ ತರಕಾರಿ

Bad cholesterol decreasing foods:ದೇಹದಲ್ಲಿ ಕೊಲೆಸ್ಟ್ರಾಲ್ ಹೆಚ್ಚಾದರೆ ಹೃದ್ರೋಗದ ಅಪಾಯವೂ ಹೆಚ್ಚುತ್ತದೆ. ಕೊಲೆಸ್ಟ್ರಾಲ್ ಕರಗಿಸುವಲ್ಲಿ ಕೆಲವು ಆಹಾರಗಳು ಸಹಾಯ ಮಾಡುತ್ತದೆ. 

Written by - Ranjitha R K | Last Updated : Jul 19, 2024, 03:51 PM IST
  • ಹೃದಯ ಕಾಯಿಲೆಗಳಿಗೆ ಕಾರಣವಾಗುತ್ತದೆ ಕೆಟ್ಟ ಕೊಲೆಸ್ಟ್ರಾಲ್.
  • ಕೊಲೆಸ್ಟ್ರಾಲ್ ಕಡಿಮೆ ಮಾಡುವ ಆಹಾರಗಳು
  • ರಕ್ತನಾಳಗಳಲ್ಲಿ ಹರಿಯುವ ರಕ್ತದ ವೇಗವನ್ನು ನಿಧಾನಗೊಳಿಸುತ್ತದೆ
ಜಿಡ್ಡು ಗಟ್ಟಿ ಕುಳಿತಿರುವ ಕೊಲೆಸ್ಟ್ರಾಲ್ ಅನ್ನು ರಕ್ತನಾಳಗಳಿಂದ ಹೊರ ಹಾಕುತ್ತದೆ ಈ ತರಕಾರಿ  title=

Bad cholesterol decreasing foods:ಹೃದಯ ಕಾಯಿಲೆಗಳಿಗೆ ಕಾರಣವಾಗುತ್ತದೆ ಕೆಟ್ಟ ಕೊಲೆಸ್ಟ್ರಾಲ್.ಮೇಣದಂತೆ ಕಾಣುವ ಈ ಜಿಗುಟಾದ ವಸ್ತುವು ರಕ್ತನಾಳಗಳು ಮತ್ತು ಅಪಧಮನಿಗಳಲ್ಲಿ ಸಂಗ್ರಹವಾಗುತ್ತದೆ.ಇದು ರಕ್ತನಾಳಗಳಲ್ಲಿ ಹರಿಯುವ ರಕ್ತದ ವೇಗವನ್ನು ನಿಧಾನಗೊಳಿಸುತ್ತದೆ.ಇದು  ಹೃದಯದ ಮೇಲೆ ಹೆಚ್ಚಿನ ಒತ್ತಡವನ್ನು ಉಂಟುಮಾಡುತ್ತದೆ.ಇದರಿಂದಾಗಿ ನಿಮಗೆ ಹೃದಯಾಘಾತವಾಗುವ ಸಾಧ್ಯತೆ ಹೆಚ್ಚಿರುತ್ತದೆ. 

ಕೊಲೆಸ್ಟ್ರಾಲ್ ಕಡಿಮೆ ಮಾಡುವ ಆಹಾರಗಳು: 
ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾಗಲು ದೊಡ್ಡ ಕಾರಣವೆಂದರೆ ಜಿಡ್ಡಿನ ಆಹಾರ.ದೈನಂದಿನ ಆಹಾರದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಎಣ್ಣೆ,ತುಪ್ಪ, ಬೆಣ್ಣೆ ಮತ್ತು ಇತರ ರೀತಿಯ ಕೊಬ್ಬುಗಳನ್ನು ಸೇವಿಸುವವರ ದೇಹದಲ್ಲಿ ಕೊಬ್ಬು ಹೆಚ್ಚು ಸಂಗ್ರಹವಾಗುತ್ತದೆ. 

ಇದನ್ನೂ ಓದಿ : ಕಫದಿಂದ ಉಪಶಮನ, ದೃಷ್ಟಿ ಸುಧಾರಣೆ ಕರಿಬೇವಿನ ಸೊಪ್ಪಿನಿಂದ ಆರೋಗ್ಯಕ್ಕಿರುವ ಲಾಭಗಳ ಬಗ್ಗೆ ನಿಮಗೆ ಗೊತ್ತೇ?

ದೇಹದಲ್ಲಿನ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುವ ಆಹಾರಗಳು :   
ಓಟ್ಸ್ :

ದೇಹದಲ್ಲಿ ಅಡಗಿರುವ ಕೊಲೆಸ್ಟ್ರಾಲ್ ಅನ್ನು ಹೀರಿಕೊಳ್ಳಲು ಮತ್ತು ದೇಹದಿಂದ ಅದನ್ನು ಹೊರಹಾಕಲು ಓಟ್ಸ್ ತುಂಬಾ ಸಹಾಯಕ.ಓಟ್ಸ್ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುವ ಕರಗುವ ಫೈಬರ್ ಅನ್ನು ಹೊಂದಿರುತ್ತದೆ.

ಬೇಳೆ ಕಾಳು  : 
ಅವರೆಕಾಳು,ಗೋವಿನಜೋಳ,ಕಿಡ್ನಿ ಬೀನ್ಸ್ ಇವುಗಳು ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸುವ ಆಹಾರಗಳಗಿವೆ. ಇವೆಲ್ಲವೂ ಹೆಚ್ಚಿನ ಪ್ರಮಾಣದಲ್ಲಿ ಕರಗುವ ಫೈಬರ್ ಅನ್ನು ಹೊಂದಿರುತ್ತವೆ.ಹಾಗಾಗಿ ಇದು ಹೊಟ್ಟೆ ತುಂಬಿದಂತೆ ಮಾಡುತ್ತದೆ.ದೇಹ ತೂಕ ಹೆಚ್ಚಾಗಿದ್ದು, ಇದನ್ನು ಕಳೆದುಕೊಳ್ಳಬೇಕು ಅಂದುಕೊಂಡಿರುವವರಿಗೂ ಇದು ಉತ್ತಮ ಆಹಾರವಾಗಿದೆ.

ಇದನ್ನೂ ಓದಿ : ಮೊಟ್ಟೆಯ ಹಳದಿ ಭಾಗ ತಿನ್ನುವುದರಿಂದ ಕೊಲೆಸ್ಟ್ರಾಲ್, ತೂಕ ಹೆಚ್ಚಾಗುತ್ತಾ?

ಧಾನ್ಯಗಳು : 
 ಬ್ರೌನ್ ರೈಸ್, ಜೋಳ, ಬಾರ್ಲಿ ಸೇವಿಸುವುದರಿಂದ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಮತ್ತು ಹೃದ್ರೋಗವನ್ನು ತಡೆಯಲು ಸಹಾಯ ಮಾಡುತ್ತದೆ. ಇವುಗಳಲ್ಲಿ ಕಂಡುಬರುವ ಆಹಾರದ ಫೈಬರ್ ಕೊಲೆಸ್ಟ್ರಾಲ್ ಅನ್ನು ಹೀರಿಕೊಳ್ಳಲು ಕೆಲಸ ಮಾಡುತ್ತದೆ.ಚಪಾತಿ ಮಾಡುವಾಗ  ಈ ಧಾನ್ಯಗಲ್ ಹಿಟ್ಟನ್ನು ಬಳಸಬಹುದು. 

ಬೆಂಡೆಕಾಯಿ : 
ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್  ಹೆಚ್ಚಾಗಿದ್ದರೆ ಬೆಂಡೆಕಾಯಿ ಸೇವಿಸಬೇಕು. ಬೆಂಡೆಕಾಯಿ  ಕಡಿಮೆ ಕ್ಯಾಲೋರಿ ಆಹಾರವಾಗಿದೆ ಮತ್ತು ಅದರಲ್ಲಿ ಕರಗುವ ಫೈಬರ್ ಕೂಡಾ ಕಂಡುಬರುತ್ತದೆ.ಈ ಎಲ್ಲಾ ಗುಣಲಕ್ಷಣಗಳು ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

(ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ. )

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

  

Trending News