ರಾಜ್ಯದ 1,199 ಗ್ರಾಮ ಪಂಚಾಯತಿಗಳಲ್ಲಿ ಕೊಳಚೆ ನೀರಿಗೆ ಮುಕ್ತಿ ನೀಡುವುದಕ್ಕಾಗಿ ಪೈಲಟ್ ಯೋಜನೆ ಜಾರಿ!

ರಾಜ್ಯದ 1,199 ಗ್ರಾಮ ಪಂಚಾಯತಿಗಳಲ್ಲಿ ಕೊಳಚೆ ನೀರಿಗೆ ಮುಕ್ತಿ ನೀಡುವುದಕ್ಕಾಗಿ ಪೈಲಟ್ ಯೋಜನೆ ಜಾರಿಗೊಳಿಸಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

Written by - Manjunath N | Last Updated : Jul 26, 2024, 04:32 AM IST
  • ಗ್ರಾಮಗಳ ಸಬಲೀಕರಣದೊಂದಿಗೆ ಸ್ವಚ್ಛತೆಗೆ ಆದ್ಯತೆ ನೀಡುವುದು ನಮ್ಮ ಇಲಾಖೆಯ ಮೂಲ ಧ್ಯೇಯ
  • ಸದ್ಯಕ್ಕೆ ರಾಜ್ಯದ 14 ಜಿಲ್ಲೆಗಳ 1,199 ಗ್ರಾಮ ಪಂಚಾಯತಿಗಳಲ್ಲಿ ಈ ಪೈಲಟ್‌ ಯೋಜನೆಯನ್ನು ಜಾರಿ ಮಾಡಲಾಗುತ್ತದೆ
 ರಾಜ್ಯದ 1,199 ಗ್ರಾಮ ಪಂಚಾಯತಿಗಳಲ್ಲಿ ಕೊಳಚೆ ನೀರಿಗೆ ಮುಕ್ತಿ ನೀಡುವುದಕ್ಕಾಗಿ ಪೈಲಟ್ ಯೋಜನೆ ಜಾರಿ! title=

ಬೆಂಗಳೂರು: ರಾಜ್ಯದ 1,199 ಗ್ರಾಮ ಪಂಚಾಯತಿಗಳಲ್ಲಿ ಕೊಳಚೆ ನೀರಿಗೆ ಮುಕ್ತಿ ನೀಡುವುದಕ್ಕಾಗಿ ಪೈಲಟ್ ಯೋಜನೆ ಜಾರಿಗೊಳಿಸಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಈ ಕುರಿತಾಗಿ ಮಾಹಿತಿ ನೀಡಿರುವ ಅವರು ಗ್ರಾಮಗಳ ಸ್ವಚ್ಛತೆಗೆ ಸವಾಲಾಗಿರುವ ಬೂದು ನೀರನ್ನು ಸಮರ್ಪಕವಾಗಿ ನಿರ್ವಹಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ನೂತನ ಯೋಜನೆಯನ್ನು ರೂಪಿಸಲಾಗಿದೆ. ಸದ್ಯಕ್ಕೆ ರಾಜ್ಯದ 14 ಜಿಲ್ಲೆಗಳ 1,199 ಗ್ರಾಮ ಪಂಚಾಯತಿಗಳಲ್ಲಿ ಈ ಪೈಲಟ್‌ ಯೋಜನೆಯನ್ನು ಜಾರಿ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.

ಈ ಯೋಜನೆಯ ಮೂಲ ಉದ್ದೇಶ ಮನೆಗಳಲ್ಲಿ ಬಟ್ಟೆ, ಪಾತ್ರೆ ತೊಳೆದ, ಸ್ನಾನ ಮಾಡಿದ ನೀರನ್ನು ಪೈಪ್ ಲೈನ್ ಮೂಲಕ ಊರಿನಲ್ಲಿ ಒಂದೆಡೆ ಸೇರುವಂತೆ ಮಾಡಿ ಅಲ್ಲಿ ಸೆಪ್ಟಿಕ್ ಟ್ಯಾಂಕ್ ಮತ್ತು ವೆಬ್ ಟ್ಯಾಂಕ್ ನಿರ್ಮಿಸಿ, ಆ ನೀರನ್ನು ಶುದ್ಧಗೊಳಿಸಿ ಊರಿನ ಕೆರೆಕಟ್ಟೆಗಳಿಗೆ ಹರಿಸುವುದಾಗಿದೆ. ಇದರಿಂದ ಕೆರೆಕಟ್ಟೆಗಳು ಮಲೀನವಾಗುವುದನ್ನು ತಡೆಯುವುದರ ಜೊತೆಗೆ, ಗ್ರಾಮೀಣ ಭಾಗದ ಜನರ ಆರೋಗ್ಯವನ್ನು ಕಾಪಾಡಬಹುದಾಗಿದೆ.ಗ್ರಾಮಗಳ ಸಬಲೀಕರಣದೊಂದಿಗೆ ಸ್ವಚ್ಛತೆಗೆ ಆದ್ಯತೆ ನೀಡುವುದು ನಮ್ಮ ಇಲಾಖೆಯ ಮೂಲ ಧ್ಯೇಯವಾಗಿದೆ ಎಂದು ವಿವರಿಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News