ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣ, ಮುಡಾ ಹಗರಣ, ದಲಿತರ ಹಣವನ್ನು ಬೇರೆ ಉದ್ದೇಶಕ್ಕೆ ವರ್ಗಾವಣೆ ಮಾಡಿದ್ದನ್ನು ಖಂಡಿಸಿ ಆಗಸ್ಟ್ 3ರಿಂದ ಬೆಂಗಳೂರಿನಿಂದ ಮೈಸೂರಿಗೆ ಬಿಜೆಪಿ- ಜೆಡಿಎಸ್ ಪಕ್ಷಗಳ ಪಾದಯಾತ್ರೆ ನಡೆಸಲಾಗುವುದು ಎಂದು ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.
ಇದನ್ನೂ ಓದಿ: ಬಿಳಿ ಬಟ್ಟೆ ಮೇಲೆ ಹಳದಿ ಕಲೆಗಳಿದ್ಯಾ? ಹಾಗಾದ್ರೆ ಜಸ್ಟ್ 5 ರೂ. ಬೆಲೆಯ ಈ ವಸ್ತುವಿನಿಂದ ವಾಶ್ ಮಾಡಿ
ಇಂದು ನಗರದಲ್ಲಿ ನಡೆದ ಬಿಜೆಪಿ-ಜೆಡಿಎಸ್ ಪಕ್ಷಗಳ ಮುಖಂಡರ ಸಭೆಯಲ್ಲಿ ಈ ಕುರಿತು ಚರ್ಚಿಸಿ ನಿರ್ಧರಿಸಲಾಗಿದೆ. ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆಯಲ್ಲಿ ತೆರಳಲು 7 ದಿನ ಬೇಕಾಗಲಿದೆ. ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ, ಎಚ್.ಡಿ.ಕುಮಾರಸ್ವಾಮಿ ಅವರು ಕೂಡ ಪಾದಯಾತ್ರೆಯಲ್ಲಿ ಭಾಗವಹಿಸುತ್ತಾರೆ. ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದಾರೆ ಎಂದರು.
ಆಗಸ್ಟ್ 10ರಂದು ಶನಿವಾರ ಸಮಾರೋಪ ನಡೆಯಲಿದೆ. ಅವತ್ತು ನಮ್ಮ ಕೇಂದ್ರದ ನಾಯಕರೂ ಬರಲಿದ್ದಾರೆ. ಇಂದಿನ ಸಭೆಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಜೆಡಿಎಸ್ ಮುಖಂಡ ಮತ್ತು ಕೇಂದ್ರ ಸಚಿವ ಕುಮಾರಸ್ವಾಮಿ, ಎರಡೂ ಪಕ್ಷಗಳ ಮುಖಂಡರು ಭಾಗವಹಿಸಿ ಹಗರಣಗಳ ಕುರಿತು ಚರ್ಚಿಸಲಾಗಿದೆ. ಬಳಿಕ ಪಾದಯಾತ್ರೆ ನಡೆಸಲು ನಿರ್ಧರಿಸಿದ್ದಾಗಿ ವಿವರ ನೀಡಿದರು.
ವಾಲ್ಮೀಕಿ ನಿಗಮದ ಹಗರಣದಲ್ಲಿ 187 ಕೋಟಿ ದುರ್ಬಳಕೆ ಆಗಿದೆ. ಮೂಡದಲ್ಲಿ ಸಾವಿರಾರು ಕೋಟಿ ರೂಪಾಯಿಯ ಹಗರಣ ನಡೆದಿದೆ ಎಂದು ತಿಳಿಸಿದರು.
ಭ್ರಷ್ಟ ಸರಕಾರ ಕಿತ್ತೊಗೆಯೋಣ:
ಹಿರಿಯ ಮುಖಂಡ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾತನಾಡಿ, ಭ್ರಷ್ಟ ಸರಕಾರ ಕಿತ್ತೊಗೆಯುವ ಹೋರಾಟದಲ್ಲಿ ಜನರೂ ಭಾಗವಹಿಸಬೇಕು ಎಂದು ಮನವಿ ಮಾಡಿದರು. ಎರಡೂ ಪಕ್ಷಗಳು ಸೇರಿ ಹೋರಾಟ ನಡೆಸಲಿದ್ದು, ಹತ್ತಾರು ಸಾವಿರ ಜನರು ಸೇರಿ ಹೋರಾಟ ನಡೆಯಲಿದೆ ಎಂದು ತಿಳಿಸಿದರು.
ರಾಜ್ಯದ ಮುಖ್ಯಮಂತ್ರಿ ರಾಜೀನಾಮೆ ಕೊಡುವವರೆಗೂ ಹೋರಾಟ ನಿಲ್ಲುವುದಿಲ್ಲ. ಲೋಕಸಭೆ, ರಾಜ್ಯಸಭೆಯಲ್ಲೂ ಇದರ ಕುರಿತು ಚರ್ಚೆ ಆಗಿದೆ. ಮುಖ್ಯಮಂತ್ರಿಗಳಿಗೆ ಕಿಂಚಿತ್ತು ಗೌರವ ಇದ್ದರೆ, ಮಾಡಿರುವ ಅಪರಾಧವನ್ನು ಒಪ್ಪಿಕೊಂಡು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.
ಇದನ್ನೂ ಓದಿ:ಟೀಂ ಇಂಡಿಯಾ ಮಣಿಸಿ ಮೊದಲ ಬಾರಿ ಟ್ರೋಫಿ ಗೆದ್ದ ಶ್ರೀಲಂಕಾ ವನಿತೆಯರು
ಇದು ಶೇ 100ರಷ್ಟು ಭ್ರಷ್ಟ ಸರ್ಕಾರ- ಪ್ರಲ್ಹಾದ್ ಜೋಶಿ
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಮಾತನಾಡಿ, ರಾಜ್ಯದಲ್ಲಿ ಶೇ 100ರಷ್ಟು ಭ್ರಷ್ಟ ಸರ್ಕಾರ ಆಡಳಿತ ನಡೆಸುತ್ತಿದೆ. ಸಿಎಂ ಸಿದ್ದರಾಮಯ್ಯನವರು ಶೇ 100 ಭ್ರಷ್ಟ ಎಂಬ ಬಿರುದನ್ನು ಪಡೆದವರು. ಹಾಗಾಗಿ, ಜನಜಾಗೃತಿಗೆ ಹೋರಾಟ, ಕಾನೂನು ಹೋರಾಟವನ್ನು ಅತ್ಯಂತ ಗಟ್ಟಿಯಾಗಿ ಮುಂದುವರೆಸುತ್ತೇವೆ ಎಂದು ಹೇಳಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ