ಕೊಪ್ಪಳ: ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿಯವರ ಪ್ರಕರಣದಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿರುವ ರಾಜ್ಯಪಾಲರು, ತನ್ನ ವಿರುದ್ದ ಮಾತ್ರ ಯಾವುದೇ ತನಿಖಾ ವರದಿಯನ್ನು ಆಧರಿಸದೇ ಪ್ರಾಸಿಕ್ಯೂಷನ್ ಗೆ ಅನುಮತಿ ಅನುಮತಿ ನೀಡಿದ್ದಾರೆ. ಇದು ತಾರತಮ್ಯವಲ್ಲವೇ ಎಂದು ಮುಖ್ಯಮಂತ್ರಿಗಳು ಖಾರವಾಗಿ ಪ್ರಶ್ನಿಸಿದರು.
ಇಂದು ಗಿಣಿಗೇರ ಏರ್ಸ್ಟ್ರಿಪ್ ಕೊಪ್ಪಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರ (HD Kumaraswamy) ವಿರುದ್ಧ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸುವ ಬಗ್ಗೆಯೇ ಮುಖ್ಯಮಂತ್ರಿಗಳು ಯೋಚಿಸುತ್ತಿದ್ದಾರೆ ಎಂಬ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡುತ್ತಾ, ಕುಮಾರಸ್ವಾಮಿಯವರನ್ನು ಬಂಧಿಸುವ ಬಗ್ಗೆ ಈಗಲೇ ಏನನ್ನೂ ಹೇಳಲಾಗುವುದಿಲ್ಲ. ಆದರೆ ಈ ಪ್ರಕರಣ ಸಂಬಂಧಪಟ್ಟಂತೆ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಬಹುದು ಎಂಬ ಭಯ ಅವರನ್ನು ಕಾಡುತ್ತಿದೆ. ಅವರ ವಿರುದ್ಧ ಲೋಕಾಯುಕ್ತ ಎಸ್ ಐ ಟಿಯವರು ತನಿಖಾ ವರದಿ ನೀಡಿ ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಿದ್ದಾಗ್ಯೂ, ರಾಜ್ಯಪಾಲರಿಂದ ಯಾವುದೇ ಕ್ರಮವಾಗದ ಕಾರಣ, ಎಸ್ ಐ ಟಿ ಮತ್ತೊಮ್ಮೆ ಅರ್ಜಿ ಸಲ್ಲಿಸಿದೆ ಎಂದರು.
ಇದನ್ನೂ ಓದಿ- ಉಬರ್ ಕ್ಯಾಬ್‌ನಲ್ಲಿ ರಾಹುಲ್ ಗಾಂಧಿ ರೈಡ್: ಚಾಲಕರ ಸಮಸ್ಯೆಗಳ ಬಗ್ಗೆ ಚರ್ಚೆ
ಕುಮಾರಸ್ವಾಮಿಯವರದು ಎಂದಿಗೂ ಹಿಟ್ ಎಂಡ್ ರನ್ ಕೇಸ್:
ಕುಮಾರಸ್ವಾಮಿಯವರು ಮುಡಾ ಪ್ರಕರಣಕ್ಕೆ (Muda Case) ಸಂಬಂಧಿಸಿದಂತೆ ದಾಖಲಾತಿಯನ್ನು ಬಿಡುಗಡೆ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ವಿಚಾರದ ಬಗ್ಗೆ ತನಗೆ ಮಾಹಿತಿಯಿಲ್ಲವೆಂದು ತಿಳಿಸಿದ ಮುಖ್ಯಮಂತ್ರಿಗಳು, ಕುಮಾರಸ್ವಾಮಿಯವರದು ಎಂದಿಗೂ ಹಿಟ್ ಎಂಡ್ ರನ್ ಕೇಸ್ ಎಂದು ವ್ಯಂಗ್ಯವಾಡಿದರು.
ಅಭಿವೃದ್ಧಿ ಕೆಲಸದಲ್ಲಿ ರಾಜಕೀಯವಿಲ್ಲ:
ಕೊಪ್ಪಳ ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ಸೇರಿದಂತೆ ಅಭಿವೃದ್ಧಿ ಕೆಲಸಗಳ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಮುಖ್ಯಮಂತ್ರಿಗಳು ಉತ್ತರಿಸುತ್ತಾ, ಸರ್ಕಾರ ಅಭಿವೃದ್ಧಿ ಕೆಲಸದಲ್ಲಿ ರಾಜಕೀಯ ಮಾಡದೇ , ಜಿಲ್ಲೆಯ ಜನರ ಹಾಗೂ ಇಲ್ಲಿನ ಅಭಿವೃದ್ಧಿ ಪರವಾಗಿಯೇ ನಮ್ಮ ನಿರ್ಣಯಗಳಿರುತ್ತವೆ. ಕೊಪ್ಪಳ ಜಿಲ್ಲೆಯ ಬಗ್ಗೆ ವಿಶೇಷ ಕಾಳಜಿಯಿದ್ದು, ಇಲ್ಲಿನ ಜನರಿಗೆ ನ್ಯಾಯ ಒದಗಿಸುವ ಕೆಲಸ ಮಾಡಲಿದ್ದೇನೆ ಎಂದರು.
ಇದನ್ನೂ ಓದಿ- ಆಂತರಿಕ ಸಮಸ್ಯೆ ಸರಿಮಾಡಿಕೊಳ್ಳಲು ಬಿಜೆಪಿ ಪ್ರತಿಭಟನೆ: ಡಿಸಿಎಂ ಡಿ.ಕೆ. ಶಿವಕುಮಾರ್ ವ್ಯಂಗ್ಯ
ಬೆಂಬಲ ಬೆಲೆ ಕುರಿತಂತೆ ಕೇಂದ್ರಕ್ಕೆ ಪತ್ರ:
ರೈತರ ಬೆಳೆಗಳಿಗೆ ಬೆಂಬಲ ಬೆಲೆ ನೀಡುವ ಬಗ್ಗೆ ಮಾತನಾಡಿ, ಹೆಸರುಕಾಳು ಬೆಳೆಗೆ ಬೆಂಬಲ ಬೆಲೆ ನೀಡುವ ಬಗ್ಗೆ ಶೀಘ್ರವಾಗಿ ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರಕ್ಕೆ ಈಗಾಗಲೇ ಪತ್ರ ಬರೆಯಲಾಗಿದೆ ಎಂದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.