Bengaluru News: ಗಾಂಧಿನಗರ ವಿಧಾನಸಭಾ ಕ್ಷೇತ್ರದ ಕೆ.ಸಿ.ಜನರಲ್ ಆಸ್ಪತ್ರೆ ಆವರಣದಲ್ಲಿ ನೂತನ ತಾಯಿ-ಮಕ್ಕಳ ಆಸ್ಪತ್ರೆ, ಬೋಧನಾ ಕಟ್ಟಡ, ಶವಾಗಾರ ಕಟ್ಟಡ, ನೂತನ ಮಾದರಿ ಅಡುಗೆ ಮನೆ, ಲಾಂಡ್ರಿ ಕಟ್ಟಡ, ವೈದ್ಯಕೀಯ ಘನ ತ್ಯಾಜ್ಯ ಘಟಕದ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.
ಕಾರ್ಯಕ್ರಮದ ವೇದಿಕೆಯಲ್ಲೇ ಜಯದೇವ ನಿರ್ದೇಶಕರನ್ನು ದೂರವಾಣಿ ಮೂಲಕ ಸಂಪರ್ಕಿಸಿದ ಮುಖ್ಯಮಂತ್ರಿಗಳು, ಇನ್ನು ಮುಂದೆ ದಿನದ 24 ಗಂಟೆ ಜಯದೇವದಲ್ಲಿ ಎಲ್ಲಾ ರೀತಿಯ ಆರೋಗ್ಯ ಸೇವೆ ಒದಗಿಸಬೇಕು. ಇದಕ್ಕೆ ತಕ್ಕ ಸಿದ್ದತೆಗಳನ್ನು ಮಾಡಿಕೊಳ್ಳಿ ಎನ್ನುವ ಸೂಚನೆ ನೀಡಿದರು.
ಸರ್ಕಾರಿ ಆಸ್ಪತ್ರೆ ವೈದ್ಯರು (Govt Hospitals Doctors) ಖಾಸಗಿ ಆಸ್ಪತ್ರೆ ವೈದ್ಯರಿಗಿಂತ ಯಾವುದರಲ್ಲೂ ಕಡಿಮೆ ಇಲ್ಲ. ಸರ್ಕಾರಿ ಆಸ್ಪತ್ರೆಗಳೂ ಖಾಸಗಿ ಆಸ್ಪತ್ರೆಗಳ ಗುಣಮಟ್ಟದಲ್ಲಿರಬೇಕು ಎನ್ನುವುದು ಸರ್ಕಾರದ ಗುರಿ ಎಂದು ನುಡಿದರು.
ಇದನ್ನೂ ಓದಿ- ಸಿಬಿಐ, ಲೋಕಾಯುಕ್ತದಿಂದ ಸ್ನೇಹಿತರು, ಕುಟುಂಬಸ್ಥರಿಗೆ ಕಿರುಕುಳ : ಡಿಸಿಎಂ ಡಿ.ಕೆ.ಶಿವಕುಮಾರ್
ಜಯದೇವ ಆಸ್ಪತ್ರೆಯಲ್ಲಿರುವ (Jayadeva Hospital) ಗುಣಮಟ್ಟ ಮತ್ತು ಶುಚಿತ್ವ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲೂ ಬರಬೇಕು. ಆಗ ಮಾತ್ರ ಸರ್ಕಾರ ಕೊಡುವ ಅನುದಾನಕ್ಕೆ ಅರ್ಥ ಬರುತ್ತದೆ. ನಾನು ಸೇರಿ ಮಂತ್ರಿಗಳು, ರಾಜರಣಿಗಳು ಸರ್ಕಾರಿ ಆಸ್ಪತ್ರೆಗಳಿಗೆ ಹೋಗುವುದಿಲ್ಲ. ಉಪ ಇದರಲ್ಲಿ ನಮ್ಮಗಳ ತಪ್ಪು ಕೂಡ ಇದೆ. ಆದರೆ ಖಾಸಗಿ ಆಸ್ಪತ್ರೆಗಳ (Private Hospitals) ಗುಣಮಟ್ಟ ಮತ್ತು ಶುಚಿತ್ವ ಸರ್ಕಾರಿ ಆಸ್ಪತ್ರೆಗಳಲ್ಲೂ ಇರುವಂತೆ ನೋಡಿಕೊಳ್ಳಲು ಅಗತ್ಯ ಅನುದಾನ ಕೊಡುತ್ತಲೇ ಇದ್ದೇವೆ. ಆಸ್ಪತ್ರೆಯ ಆಡಳಿತ ಪಾರದರ್ಶಕವಾಗಿ, ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿ, ಸೇವೆ ಸಲ್ಲಿಸಿದರೆ ಇದು ಸಾಧ್ಯವಿದೆ ಎಂದರು.
ಅಪಘಾತ ವಲಯಗಳ ಹತ್ತಿರದಲ್ಲೇ ಟ್ರಾಮಾ ಸೆಂಟರ್ ಗಳನ್ನು ತೆರೆಯಲು ಸರ್ಕಾರ ಮುಂದಾಗಿದೆ. ಗಾಯಾಳುಗಳ ಜೀವ ಉಳಿಸಲು ಗೋಲ್ಡನ್ ಹವರ್ ಬಹಳ ಮುಖ್ಯ ಎನ್ನುವುದನ್ನು ಪರಿಗಣಿಸಿ ಸರ್ಕಾರ ಈ ಕಾರ್ಯಕ್ಕೆ ಮುಂದಾಗಿದೆ ಎಂದು ಸಿಎಂ ಇದೇ ಸಂದರ್ಭದಲ್ಲಿ ತಿಳಿಸಿದರು.
ನಾನು ಬಜೆಟ್ ನಲ್ಲಿ ಹೇಳಿದ್ದನ್ನು ಜಾರಿ ಮಾಡಿ: ಸಿಎಂ ಸೂಚನೆ
ಬಜೆಟ್ ನಲ್ಲಿ ಘೋಷಿಸಿರುವ ಎಲ್ಲಾ ಕಾರ್ಯಕ್ರಮಗಳನ್ನು ಜವಾಬ್ದಾರಿಯಿಂದ ಜಾರಿ ಮಾಡಿ ಎಂದು ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷಗುಪ್ತ ಅವರಿಗೆ ವೇದಿಕೆಯಿಂದಲೇ ಸೂಚನೆ ನೀಡಿದರು.
ಇದನ್ನೂ ಓದಿ- K-SET: ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಆಗಸ್ಟ್ 28 ರವರೆಗೆ ಅವಕಾಶ..!
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮುಂದಿಟ್ಟ ಬೇಡಿಕೆಗಳನ್ನು ಅನುಮೋದಿಸಿ ಹಣ ಬಿಡುಗಡೆ ಮಾಡಿದ್ದೇನೆ. ನೂತನ ಆಸ್ಪತ್ರೆ ಕಟ್ಟಡವನ್ನೂ ನಾನೇ ಉದ್ಘಾಟಿಸುತ್ತೇನೆ. ಬೇಗ ಕೆಲಸ ಮುಗಿಸಿ ಎಂದು ಸಚಿವರಿಗೆ ಸೂಚನೆ ನೀಡಿದರು. ಅಲ್ಲದೆ, ರೋಗಿಗಳ ಸಮಸ್ಯೆಗಳನ್ನು ಸಂಯಮದಿಂದ ಕೇಳಿಸಿಕೊಂಡರೆ ಅರ್ಧ ಕಾಯಿಲೆ ಗುಣಮುಖವಾಗುತ್ತದೆ ಎಂದು ನುಡಿದರು.
ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾದ ಸಾಧುಕೋಕಿಲಾ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಹೆಚ್.ಎಂ.ರೇವಣ್ಣ ಸೇರಿ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.