Paris Paralympics 2024: ಪ್ಯಾರಿಸ್ ಪ್ಯಾರಾಲಿಂಪಿಕ್ಸ್ 2024 ರಲ್ಲಿ ಭಾರತ ತನ್ನ ಎರಡನೇ ಚಿನ್ನದ ಪದಕವನ್ನು ಪಡೆದುಕೊಂಡಿದೆ. ಈ ಪದಕವನ್ನು ಪ್ಯಾರಾ ಬ್ಯಾಡ್ಮಿಂಟನ್ ಆಟಗಾರ ನಿತೀಶ್ ಕುಮಾರ್ ಪುರುಷರ ಸಿಂಗಲ್ಸ್ ಬ್ಯಾಡ್ಮಿಂಟನ್ SL3 ನಲ್ಲಿ ಗೆದ್ದಿದ್ದಾರೆ. ಇದರೊಂದಿಗೆ ಭಾರತ ಈ ಬಾರಿಯ ಪ್ಯಾರಾಲಿಂಪಿಕ್ಸ್ನಲ್ಲಿ ಒಟ್ಟು 9 ಪದಕಗಳನ್ನು ತನ್ನದಾಗಿಸಿಕೊಂಡಿದೆ.
ಇದನ್ನೂ ಓದಿ: ದುಡಿದಷ್ಟೂ ದುಡ್ಡು ಜೇಬಲ್ಲಿ ಉಳಿಯಬೇಕೆಂದರೆ ಪರ್ಸ್ʼನಲ್ಲಿ ಈ ಎಲೆ ಇಡಿ: ಸಾಲವೆಲ್ಲಾ ತೀರುತ್ತೆ
ನಿತೇಶ್ ಕುಮಾರ್ ಅವರು ಪ್ಯಾರಾ-ಬ್ಯಾಡ್ಮಿಂಟನ್ ಪುರುಷರ ಸಿಂಗಲ್ಸ್ SL3 ಈವೆಂಟ್ನ ಫೈನಲ್ನಲ್ಲಿ ಗ್ರೇಟ್ ಬ್ರಿಟನ್ನ ಡೇನಿಯಲ್ ಬೆಥೆಲ್ ಅವರನ್ನು ಎದುರಿಸಿದ್ದರು. ಉಭಯ ಆಟಗಾರರ ನಡುವೆ ಜಿದ್ದಾಜಿದ್ದಿನ ಪೈಪೋಟಿ ಏರ್ಪಟ್ಟು ಕೊನೆಗೂ ನಿತೀಶ್ ಕುಮಾರ್ ಗೆಲುವಿನಲ್ಲಿ ಯಶಸ್ವಿಯಾದರು.
ನಿತೀಶ್ ಕುಮಾರ್ ಮತ್ತು ಗ್ರೇಟ್ ಬ್ರಿಟನ್ನ ಡೇನಿಯಲ್ ಬೆಥೆಲ್ ನಡುವೆ ಚಿನ್ನದ ಪದಕದ ಪಂದ್ಯದಲ್ಲಿ ಕಠಿಣ ಪೈಪೋಟಿ ಏರ್ಪಟ್ಟಿತ್ತು. ಪಂದ್ಯದ ಮೊದಲ ಸೆಟ್ ನಿತೇಶ್ ಕುಮಾರ್ ಹೆಸರಿನಲ್ಲಿತ್ತು. ಈ ಸೆಟ್ ಅನ್ನು 21-14 ರಿಂದ ಗೆದ್ದುಕೊಂಡರು. ಅದೇ ವೇಳೆ ಎರಡನೇ ಸೆಟ್ ನಲ್ಲಿ ದಿಟ್ಟ ಪ್ರದರ್ಶನ ನೀಡಿದರೂ 18-21ರಿಂದ ಸೋಲನುಭವಿಸಬೇಕಾಯಿತು. ಒಂದು ಬಾರಿ ಈ ಸೆಟ್ 16-16ರಲ್ಲಿ ಸಮವಾಗಿದ್ದಾದರೂ ಇಲ್ಲಿ ನಿತೀಶ್ ಕುಮಾರ್ ಹಿನ್ನಡೆ ಅನುಭವಿಸಿದರು.
ಇದಾದ ಬಳಿಕ ಮೂರನೇ ಸೆಟ್ʼನಲ್ಲಿ ದಿಟ್ಟವಾಗಿ ತಿರುಗೇಟು ನೀಡಿದ ಅವರು 23-21 ಸೆಟ್ʼಗಳಿಂದ ಪಂದ್ಯ ಗೆದ್ದರು. ಆದರೆ ಈ ಸೆಟ್ ಗೆಲ್ಲಲು ಅವರು ತುಂಬಾ ಕಷ್ಟಪಡಬೇಕಾಯಿತು. ಉಭಯ ಆಟಗಾರರು ತಲಾ ಒಂದು ಅಂಕ ಗಳಿಸಿ ಕೊನೆಯವರೆಗೂ ಹೋರಾಟ ನಡೆಸಿದರು.
ಇದನ್ನೂ ಓದಿ: ವಿಶ್ವದ ಪ್ರತಿಷ್ಠಿತ ಟೆಕ್ ಕಂಪನಿಗಳ ಸಿಇಒಗಳು ಭಾರತೀಯರೇ... ಟಾಪ್-10 ಪಟ್ಟಿಯಲ್ಲಿದ್ದಾರೆ ಇವರು
ಶೂಟರ್ ಅವನಿ ಲೆಖರಾ ಪ್ಯಾರಿಸ್ ಪ್ಯಾರಾಲಿಂಪಿಕ್ಸ್ 2024ರಲ್ಲಿ ಭಾರತಕ್ಕೆ ಮೊದಲ ಚಿನ್ನದ ಪದಕವನ್ನು ಗೆದ್ದರು. ಈ 2 ಚಿನ್ನದ ಪದಕಗಳನ್ನು ಹೊರತುಪಡಿಸಿ, ಇಲ್ಲಿಯವರೆಗೆ 3 ಬೆಳ್ಳಿ ಮತ್ತು 4 ಕಂಚಿನ ಪದಕಗಳನ್ನು ಭಾರತ ಗೆದ್ದಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.