Viral Video: ʼಐ ಲವ್ ಯುʼ ಹೇಳಿದ್ರೆ ಮಾತ್ರ ಮೊಬೈಲ್ ರೀಚಾರ್ಜ್ ಮಾಡುವುದಾಗಿ ಹೇಳಿದ ಅಂಗಡಿ ಮಾಲೀಕನನ್ನು ಸ್ಕೂಲ್ ಹುಡುಗಿಯರು ಮನಬಂದಂತೆ ಥಳಿಸಿರುವ ಘಟನೆ ನಡೆದಿದೆ. ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.
ಮೊಬೈಲ್ ರೀಚಾರ್ಜ್ ಮಾಡಲು ಸತಾಯಿಸಿದ ಅಂಗಡಿ ಮಾಲೀಕನನ್ನು ನಡುರಸ್ತೆಗೆ ಎಳೆದುತಂದು ಸಾರ್ವಜನಿಕರ ಎದುರಿನಲ್ಲೇ ವಿದ್ಯಾರ್ಥಿನಿಯರು ಆತನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಹುಡುಗಿಯರ ಈ ಕಾರ್ಯಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಈ ಘಟನೆ ರಾಜಸ್ಥಾನದ ದಿದ್ವಾನಾ ಎಂಬಲ್ಲಿ ನಡೆದಿದೆ.
ಇದನ್ನೂ ಓದಿ: ನಾಳೆ ರಾಜ್ಯಾದ್ಯಂತ ಎಲ್ಲಾ ಶಾಲಾ-ಕಾಲೇಜು, ಅಂಗನವಾಡಿಗಳಿಗೆ ರಜೆ ಘೋಷಿಸಿದ ಸಿಎಂ..!
A shopkeeper was beaten up because of I Love You, he Said "Pehle I love you bolo Phir Recharge karunga" to girls then see how the girls of Kuchaman showed bravery and Beat him up in Didwana Rajasthan 🫡
pic.twitter.com/VDCjcr4MLH— Ghar Ke Kalesh (@gharkekalesh) September 1, 2024
ತನಗೆ ʼಐ ಲವ್ ಯು; ಹೇಳುವಂತೆ ಪೀಡಿಸಿದ ಕಾಮುಕನಿಗೆ ವಿದ್ಯಾರ್ಥಿನಿಯರು ನಡುರಸ್ತೆಯಲ್ಲಿಯೇ ಚಳಿ ಬಿಡಿಸಿದ್ದಾರೆ. ತಮ್ಮ ಮೊಬೈಲ್ ರೀಚಾರ್ಜ್ ಮಾಡಿಸಲು ಅಲ್ಲಿನ ಮೊಬೈಲ್ ಶಾಪ್‌ಗೆ ವಿದ್ಯಾರ್ಥಿನಿಯರು ಹೋಗುತ್ತಿದ್ದರಂತೆ. ಆದರೆ ಆ ಅಂಗಡಿ ಮಾಲೀಕ ʼಐ ಲವ್ ಯುʼ ಹೇಳಿದ್ರೆ ಮಾತ್ರ ಮೊಬೈಲ್ ರೀಚಾರ್ಜ್ ಮಾಡುವುದಾಗಿ ಪೀಡಿಸಿದ್ದಾನಂತೆ.
ಇದರಿಂದ ಕೋಪಗೊಂಡ ವಿದ್ಯಾರ್ಥಿನಿಯರು ಆತನನನ್ನು ಎಳೆದುತಂದು ನಡುರಸ್ತೆಯಲ್ಲಿ ಸಾರ್ವಜನಿಕರ ಎದುರಲ್ಲಿಯೇ ಹಿಗ್ಗಾಮುಗ್ಗಾ ಭಾರಿಸಿದ್ದಾರೆ. Ghar Ke Kalesh ಎಂಬ ಟ್ವಿಟರ್ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ವೈರಲ್ ಆಗಿರುವ ಈ ವಿಡಿಯೋದಲ್ಲಿ ತಮ್ಮ ಜೊತೆಗೆ ಅನುಚಿತವಾಗಿ ವರ್ತಿಸಿದವನಿಗೆ ವಿದ್ಯಾರ್ಥಿನಿಯರು ಥಳಿಸುತ್ತಿರುವುದನ್ನು ಕಾಣಬಹುದು. ಲಕ್ಷಾಂತರ ಜನರು ಈ ವಿಡಿಯೋವನ್ನು ವೀಕ್ಷಿಸಿದ್ದಾರೆ.
ಇದನ್ನೂ ಓದಿ: ಆಂಧ್ರದಲ್ಲಿ ಮಳೆಯಿಂದ ಅಲ್ಲೋಲ ಕಲ್ಲೋಲ ಸೃಷ್ಟಿ
ಸಾವಿರಾರು ಜನರು ವಿವಿಧ ರೀತಿಯಲ್ಲಿ ಕಾಮೆಂಟ್‌ಗಳನ್ನು ಮಾಡಿದ್ದಾರೆ. ಅನೇಕರು ʼವಿದ್ಯಾರ್ಥಿನಿಯರು ಕಾಮುಕನಿಗೆ ತಕ್ಕಪಾಠ ಕಲಿಸಿದ್ದಾರೆ, ಇಂತವರಿಗೆ ಸಾರ್ವಜನಿಕವಾಗಿ ಥಳಿಸಬೇಕು. ಪ್ರತಿಯೊಬ್ಬ ಹೆಣ್ಣು ಮಕ್ಕಳು ಈ ರೀತಿಯ ಧೈರ್ಯವನ್ನು ಪ್ರದರ್ಶಿಸಬೇಕುʼ ಅಂತಾ ಕಾಮೆಂಟ್ ಮಾಡಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.