ಹುಬ್ಬಳ್ಳಿ : ಗಣೇಶ ಹಬ್ಬದ ವೇಳೆ ಕೇಂದ್ರ ಸರ್ಕಾರ ರಾಜ್ಯದ ರೈತರಿಗೆ ಬೆಂಬಲ ಬೆಲೆಯ ಗಿಫ್ಟ್ ಕೊಟ್ಟರೆ,ರಾಜ್ಯ ಸರ್ಕಾರ ಹಾಲಿನ ಬೆಲೆ ಕಡಿತದ ಬಾರೆ ಎಳೆದಿದೆ.ಕೇಂದ್ರ ಸರ್ಕಾರ ಬೆಂಬಲ ಬೆಲೆಯಲ್ಲಿ ಆಹಾರ ಧಾನ್ಯ ಖರೀದಿಸುತ್ತಿದೆ. ಆದರೆ, ರಾಜ್ಯ ಸರ್ಕಾರ ಹಾಲು ಉತ್ಪಾದಕರಿಗೆ ಈಗಿರುವ ಬೆಲೆಯನ್ನೂ ಕಡಿತಗೊಳಿಸಿ ಹಾಲು ಖರೀದಿಸುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯ ಸರ್ಕಾರ, ರಾಜ್ಯದ ಹಾಲು ಉತ್ಪಾದಕರಿಗೆ ಕೊಡುವ ಬೆಲೆಯಲ್ಲಿ 1.5 ರೂ., 2 ರೂ.ವರೆಗೂ ಕಡಿತಗೊಳಿಸುವ ಮೂಲಕ ಹೈನುಗಾರರ ಶ್ರಮಕ್ಕೆ ತಣ್ಣೀರೆರೆಚುವ ಕೆಲಸ ಮಾಡಿದೆ ಎಂದು ಜೋಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ : ಬಿ.ಎಸ್.ಯಡಿಯೂರಪ್ಪ ವಿರುದ್ಧ ದೂರು ನೀಡಿದ ಮಹಿಳೆ ಸಾವು ಪ್ರಕರಣ
ಹೈನುಗಾರರು ಹೈರಾಣ : ಅತಿವೃಷ್ಟಿಯಿಂದಾಗಿ ರಾಜ್ಯದ ರೈತರು ಬೆಳೆ ಹಾನಿಯಾಗಿ ತೀವ್ರ ಸಂಕಷ್ಟದಲ್ಲಿದ್ದಾರೆ.ಇಂಥ ಸಂದರ್ಭದಲ್ಲಿ ಕೇಂದ್ರ ಸರ್ಕಾರ ನೆರವಿಗೆ ಧಾವಿಸಿ ಹೆಸರು,ಉದ್ದು,ಸೂರ್ಯಕಾಂತಿ,ಸೋಯಾಬಿನ್ ಗೆ ಬೆಂಬಲ ಬೆಲೆ ಹೆಚ್ಚಿಸಿ ಖರೀದಿ ಕೇಂದ್ರ ತೆರೆಯಲು ಅನುಮತಿ ನೀಡಿದೆ.ಆದರೆ,ರಾಜ್ಯ ಸರ್ಕಾರದ ಹಾಲು ಒಕ್ಕೂಟಗಳು ರೈತರಿಗೆ ನೀಡುವ ಹಾಲಿನ ದರ ಕಡಿತಗೊಳಿಸಿ ಹೈನುಗಾರರನ್ನು ಹೈರಾಣಾಗಿಸಿದೆ ಎಂದು ಜೋಶಿ ಎಂದು ಹೇಳಿದ್ದಾರೆ.
ಒಂದೆಡೆ,ಕೇಂದ್ರ ಸರ್ಕಾರ ರೈತರ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಬೇಕೆಂದು ಶ್ರಮಿಸುತ್ತಿದ್ದರೆ,ರಾಜ್ಯದಲ್ಲಿ ಸಿದ್ದರಾಮಯ್ಯನವರ ಸರ್ಕಾರ ರೈತರಿಗೆ ನೀಡುವ ಹಾಲಿನ ದರದಲ್ಲಿ ಕಡಿತ ಮಾಡಿದೆ ಎಂದು ಹರಿ ಹಾಯ್ದಿದ್ದಾರೆ.
ಒಕ್ಕೂಟಗಳು ಪ್ರತಿ ಲೀಟರ್ ಹಾಲಿಗೆ ಗರಿಷ್ಠ 30.50 ರೂ.ನೀಡಿ ಖರೀದಿ ಮಾಡುತ್ತಿದ್ದವು.ಆದರೀಗ 1.5 ರೂ. ಕಡಿತಗೊಳಿಸಿ ರೈತರಿಗೆ ಪ್ರತಿ ಲೀಟರ್ ಗೆ 28 ರಿಂದ 29 ರೂ.ನೀಡುತ್ತಿವೆ.ಕೆಲವೆಡೆ ಇದಕ್ಕೂ ಖೋತಾ ಆಗಿದೆ.ಇದು ಹೈನುಗಾರರ ದುರಂತ ಸ್ಥಿತಿ ಎಂದು ಸಚಿವ ಜೋಶಿ ಆತಂಕ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ : ಆಮ್ ಆದ್ಮಿ ಪಾರ್ಟಿ ವಿರುದ್ಧ ಪಂಜಾಬ್ನಲ್ಲಿ ರೈತರ ಪ್ರತಿಭಟನೆ
ಒಕ್ಕೂಟಗಳಿಂದ ನಷ್ಟದ ಸಬೂಬು : ಹಾಲು ಉತ್ಪಾದಕರು ದರ ಕಡಿತದ ಬಗ್ಗೆ ಪ್ರಶ್ನಿಸಿದರೆ ಬಳ್ಳಾರಿ, ರಾಯಚೂರು, ಕೊಪ್ಪಳ, ವಿಜಯನಗರ ಹಾಲು ಒಕ್ಕೂಟವು ನಷ್ಟದ ಸಬೂಬು ನೀಡಿದೆ. ನಷ್ಟದ ನೆಪದಲ್ಲಿ ಸರ್ಕಾರ ಹಾಲು ಉತ್ಪಾದಕರಿಗೆ ಬೆಲೆ ಕಡಿತದ ಬರೆ ಎಳೆದಿದೆ ಎಂದು ಸಚಿವರು ಖಂಡಿಸಿದ್ದಾರೆ.
ನಷ್ಟದಲ್ಲಿ ಇರುವುದು ಒಕ್ಕೂಟಗಳಲ್ಲ : ನಿಜವಾಗಿ ನಷ್ಟದಲ್ಲಿ ಇರುವುದು ಹಾಲಿನ ಒಕ್ಕೂಟಗಳಲ್ಲ, ರೈತರು.ಕಾರಣ ಹಾಲು ಉತ್ಪಾದನೆ ವೆಚ್ಚ ದುಪ್ಪಟ್ಟಾಗಿದೆ.ಹಸು, ಎಮ್ಮೆಗಳ ಬೆಲೆ ಹೆಚ್ಚಿದೆ.ಪಶು ಆಹಾರ ಬೆಲೆಯೂ ದುಪ್ಪಟ್ಟಾಗಿ ಸಾಕಾಣಿಕೆ ದುಬಾರಿಯಾಗಿದೆ.
ಮಾರುವ ದರ ದುಪ್ಪಟ್ಟು-ಕೊಳ್ಳೋ ಬೆಲೆ ತೀರಾ ಕಡಿಮೆ : 2013-14ರಲ್ಲಿ ನಂದಿನಿ ಹಾಲಿನ ಬೆಲೆ ಲೀಟರ್ ಗೆ 29 ರೂ. ಇತ್ತು, 2024ರಲ್ಲಿ ಅರ್ಧ ಲೀಟರ್ ಹಾಲಿಗೇ ಇಷ್ಟು ಬೆಲೆಯಿದೆ.ಅಂದರೆ ಹತ್ತು ವರ್ಷದಲ್ಲಿ ಗ್ರಾಹಕರಿಗೆ ಶೇ.100ರಷ್ಟು ಬೆಲೆಯ ಹೊರೆ ಹೇರಲಾಗಿದೆ.ಆದರೆ ರೈತರಿಗೆ ಶೇ.10 ರಷ್ಟೂ ಬೆಲೆ ಹೆಚ್ಚಿಲ್ಲ.ಈಗಲೂ 2014ರಲ್ಲಿ ಇದ್ದಷ್ಟೇ ಇದೆ.ಅತ್ಯಂತ ಕನಿಷ್ಠ ದರ 26 ರಿಂದ 29 ರೂ.ಲೀಟರ್ ಗೆ ದಕ್ಕುತ್ತಿದೆ ಎಂದು ಸಚಿವರು ವಿಷಾದಿಸಿದ್ದಾರೆ.
ಇದನ್ನೂ ಓದಿ : ಸಚಿವ ಎಂ.ಬಿ.ಪಾಟೀಲ್ ವಿರುದ್ಧದ ಪ್ರಾಸಿಕ್ಯೂಷನ್ ಅರ್ಜಿ ವಿಚಾರ
ರೈತರಿಗೂ ಬರೆ, ಗ್ರಾಹಕರಿಗೂ ಬರೆ : ಸರ್ಕಾರ 2 ತಿಂಗಳ ಹಿಂದೆ 2 ರೂಪಾಯಿ ಹಾಲಿನ ದರ ಹೆಚ್ಚಳ ಮಾಡಿ ಗ್ರಾಹಕರಿಗೆ ಬರೆ ಎಳೆದಿತ್ತು.ಈಗ ಖರೀದಿ ಬೆಲೆ ಕಡಿತಗೊಳಿಸಿ ಉತ್ಪಾದಕರಿಗೂ ಬರೆ ಎಳೆದಿದೆ ಎಂದಿದ್ದಾರೆ.
ಲೀಟರ್ ಹಾಲಿನ ಮೇಲೆ ಹತ್ತಾರು ರೂ. ಹೆಚ್ಚುವರಿ : ಇನ್ನು ಹಾಲಿನ ಗುಣಮಟ್ಟದ ನೆಪದಲ್ಲಿ ಐದಾರು ರೂಪಾಯಿ ಪ್ರೋತ್ಸಾಹ ಧನಕ್ಕೂ ಕೊಕ್ ಹಾಕಲಾಗುತ್ತಿದೆ. ರಾಜ್ಯ ಸರ್ಕಾರ,ಈ ರೀತಿ ಪ್ರೋತ್ಸಾಹ ಧನ ಉಳಿಕೆ, ಖರೀದಿ ದರ ಕಡಿತ,ಮಾರಾಟ ದರ ಹೆಚ್ಚಳ ರೂಪದಲ್ಲಿ ಲೀಟರ್ ಹಾಲಿನ ಮೇಲೆ ಹತ್ತಾರು ರೂಪಾಯಿ ಹೆಚ್ಚುವರಿ ಆದಾಯದ ಮಾರ್ಗ ಕಂಡುಕೊಂಡಿದೆ. ಹೀಗಿರುವಾಗ ನಷ್ಟ ಹೇಗೆಂದು ಸಚಿವ ಜೋಶಿ ಪ್ರಶ್ನಿಸಿದ್ದಾರೆ.
ರೈತ ಪರ ಎನ್ನುವ ಕಾಂಗ್ರೆಸ್ ಗೆ ನಾಚಿಕೆ ಆಗಬೇಕು : ನಮ್ಮದು ರೈತಪರ ಸರ್ಕಾರ, ಜನಪರ ಸರ್ಕಾರ ಎನ್ನುವ ಕಾಂಗ್ರೆಸ್ ಸರ್ಕಾರ ರೈತ ವಿರೋಧಿ ನಿಲುವುಗಳನ್ನೇ ತೆಗೆದುಕೊಳ್ಳುತ್ತಿದ್ದು, ನಾಚಿಕೆಯಾಗಬೇಕು ಈ ಸರ್ಕಾರಕ್ಕೆ ಎಂದು ಕಿಡಿ ಕಾರಿದ್ದಾರೆ.
ಬೆಲೆ ಕಡಿತ ಕೈಬಿಟ್ಟು ನ್ಯಾಯಯುತ ದರ ನೀಡಲಿ : ರಾಜ್ಯ ಸರ್ಕಾರ ಕೂಡಲೇ ಬೆಲೆ ಕಡಿತದ ಆದೇಶ ಹಿಂಪಡೆಯಬೇಕು.ಹಾಲು ಉತ್ಪಾದಕರಿಗೆ ನ್ಯಾಯಯುತ ಬೆಲೆ ನಿಗದಿಪಡಿಸಬೇಕು ಎಂದು ಆಗ್ರಹಿಸಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಟ್ವೀಟ್ ಮಾಡಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ