ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಏಕವಚನ ಪದ ಬಳಕೆಗೆ ಈಗ ವಿಧಾನಸಭೆಯಲ್ಲಿ ವಿರೋಧ ಪಕ್ಷದ ಉಪನಾಯಕರಾಗಿರುವ ಅರವಿಂದ್ ಬೆಲ್ಲದ ಪತ್ರದ ಮೂಲಕ ಕ್ಷಮೆಯಾಚಿಸಿದ್ದಾರೆ.
ಈಗ ಅರವಿಂದ್ ಬೆಲ್ಲದ ಅವರ ಈ ನಡೆಗೆ ಸಿಎಂ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ರಾಜಕೀಯದಲ್ಲಿ ಟೀಕೆ, ಟಿಪ್ಪಣಿಗಳು ಸಹಜ. ಕೆಲವೊಮ್ಮೆ ಉದ್ವೇಗದಲ್ಲಿ ಮತ್ತೊಬ್ಬರ ಘನತೆಗೆ ಚ್ಯುತಿ ತರುವಂತಹ ಹೇಳಿಕೆ ಅರಿವಿಗೆ ಬಾರದೆಯೇ ಬಂದು ಬಿಡುತ್ತದೆ.
ಜಿಂದಾಲ್ ಕಂಪನಿಗೆ ಭೂಮಿ ನೀಡಿರುವ ನಮ್ಮ ಸರ್ಕಾರದ ತೀರ್ಮಾನವನ್ನು ವಿರೋಧಿಸಿ ಮಾತನಾಡುವಾಗ ವಿರೋಧ ಪಕ್ಷದ ಉಪನಾಯಕರಾದ ಅರವಿಂದ ಬೆಲ್ಲದ್ ಅವರು ವೈಯಕ್ತಿಕವಾಗಿ ನನ್ನನ್ನು ನಿಂದನೆ ಮಾಡಿದ್ದರು. ತಮ್ಮ ತಪ್ಪಿನ ಅರಿವಾಗಿ ಪತ್ರದ ಮೂಲಕ ಕ್ಷಮೆ ಕೋರಿದ್ದಾರೆ. ಅವರ ಈ ನಡೆಯನ್ನು ನಾನು ಅತ್ಯಂತ ಮುಕ್ತವಾಗಿ ಸ್ವಾಗತಿಸುತ್ತೇನೆ, ಜೊತೆಗೆ ಅವರ ಬಗ್ಗೆ ನನ್ನ ಮನಸ್ಸಿನಲ್ಲಿ ದ್ವೇಷವಾಗಲೀ, ಬೇಸರವಾಗಲೀ ಯಾವುದು ಇಲ್ಲವೆಂಬುದನ್ನು ಈ ಮೂಲಕ ತಿಳಿಸಬಯಸುತ್ತೇನೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಅಣಬೆಯ ಸೇವನೆಯಿಂದ ತಟ್ಟನೆ ಇಳಿಕೆಯಾಗುವುದು ಶುಗರ್..ಒಮ್ಮೆ ಟ್ರೈ ಮಾಡಿ ಮಧುಮೇಹ ಚಿಂತೆಗೆ ಗುಡ್ ಬೈ ಹೇಳಿ
ನಾನು ಒಂದೆರಡು ಬಾರಿ ಬಾಯ್ತಪ್ಪಿನಿಂದ ಏಕವಚನ ಬಳಕೆ ಮಾಡಿ ನಂತರ ವಿಷಾದ ವ್ಯಕ್ತಪಡಿಸಿದ್ದೇನೆ, ಆ ತಪ್ಪು ಮರುಕಳಿಸದಂತೆ ತಿದ್ದಿಕೊಳ್ಳುವ ಪ್ರಯತ್ನವನ್ನು ಮಾಡಿದ್ದೇನೆ. ನನ್ನ ಸುದೀರ್ಘ 40 ವರ್ಷಗಳ ರಾಜಕೀಯ ಜೀವನದಲ್ಲಿ ವಿಪಕ್ಷಗಳ ಹಲವು ಕಿರಿಯ, ಹಿರಿಯ ನಾಯಕರಿಂದ ವೈಯಕ್ತಿಕ ನಿಂದನೆ, ಚಾರಿತ್ರ್ಯಹನನ ಮಾಡುವಂತಹ ಪದಬಳಕೆ ಎಲ್ಲವನ್ನೂ ಕೇಳಿದ್ದೇನೆ, ಎದುರಿಸಿದ್ದೇನೆ. ಮೊದಲ ಬಾರಿಗೆ ಅರವಿಂದ ಬೆಲ್ಲದ್ ಅವರು ತಾವು ಬಳಸಿದ ಪದದ ಬಗ್ಗೆ ಸ್ವತಃ ಅವರೇ ಬೇಸರ ವ್ಯಕ್ತಪಡಿಸಿ, ಪತ್ರದ ಮೂಲಕ ಕ್ಷಮೆ ಕೇಳಿ ಹೊಸ ತಲೆಮಾರಿನ ರಾಜಕಾರಣಿಗಳಿಗೆ ಮೇಲ್ಪಂಕ್ತಿ ಹಾಕಿಕೊಟ್ಟಿದ್ದಾರೆ ಎಂದು ಅವರು ಹೇಳಿದರು.
ಅರವಿಂದ್ ಅವರ ತಂದೆ ಚಂದ್ರಕಾಂತ ಬೆಲ್ಲದ್ ಅವರು ನನ್ನ ದೀರ್ಘಕಾಲದ ಸ್ನೇಹಿತರು. ಅವರೊಬ್ಬ ಸಜ್ಜನ ರಾಜಕಾರಣಿ. ಅವರ ಸಜ್ಜನಿಕೆಯ ಪರಂಪರೆಯನ್ನು ಅರವಿಂದ್ ಮುಂದುವರಿಸಿಕೊಂಡು ಹೋಗಲಿ ಎಂದು ಹಾರೈಸುತ್ತೇನೆ.ರಾಜಕೀಯವು ಬರೀ ಟೀಕೆ, ಆರೋಪ-ಪ್ರತ್ಯಾರೋಪಗಳಿಂದಲೇ ತುಂಬಿಹೋಗುತ್ತಿರುವ ಈ ಕಾಲದಲ್ಲಿ ಅರವಿಂದ ಬೆಲ್ಲದ್ ಅವರ ನಡೆ ಮೌಲ್ಯಯುತ ರಾಜಕಾರಣದ ಜೀವಂತಿಕೆಯ ಸಂಕೇತವಾಗಿ ಕಾಣುತ್ತಿದೆ. “ಪಶ್ಚಾತಾಪಕ್ಕಿಂತ ದೊಡ್ಡ ಪ್ರಾಯಶ್ಚಿತ ಬೇರೊಂದಿಲ್ಲ” ಎಂಬ ಮಾತು ಈ ಸಂದರ್ಭಕ್ಕೆ ಹೆಚ್ಚು ಅರ್ಥಪೂರ್ಣವೆನಿಸುತ್ತಿದೆ ಎಂದು ತಿಳಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.