Malaika Arora father anil arora suicide news: ಮಲೈಕಾ ಅರೋರಾ ತಂದೆ ಅನಿಲ್ ಅರೋರಾ ಮನೆಯ ಮೇಲಿನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಸದ್ಯ ಮೃತದೇಹವನ್ನು ಆಸ್ಪತ್ರೆಯಲ್ಲಿ ಇರಿಸಲಾಗಿದೆ ಎಂದು ತಿಳಿದು ಬಂದಿದೆ.
ಅನಿಲ್ ಅರೋರಾ ಬಾಂದ್ರಾದಲ್ಲಿರುವ ತಮ್ಮ ಮನೆಯ ಮೂರನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ಇಂದು ಬೆಳಗ್ಗೆ 9 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಆತ್ಮಹತ್ಯೆಯ ಹಿಂದಿನ ಕಾರಣ ಇನ್ನೂ ಸ್ಪಷ್ಟವಾಗಿಲ್ಲ.
ಅನಿಲ್ ಅರೋರಾ ಆತ್ಮಹತ್ಯೆ ಮಾಡಿಕೊಂಡಾಗ ಮಲೈಕಾ ಅರೋರಾ ಮನೆಯಲ್ಲಿ ಇರಲಿಲ್ಲ. ಇಂದು ಬೆಳಿಗ್ಗೆ ಪುಣೆಯಲ್ಲಿದ್ದರು. ಘಟನೆಯ ಬಗ್ಗೆ ಮಾಹಿತಿ ಪಡೆದ ಮಲೈಕಾ ತಕ್ಷಣ ಪುಣೆಯಿಂದ ಮುಂಬೈಗೆ ತೆರಳಿದ್ದಾರೆ. ಈ ಸುದ್ದಿಯ ನಂತರ, ಅನೇಕ ಸೆಲೆಬ್ರಿಟಿಗಳು ಕೂಡ ನಟಿಯ ಮನೆಗೆ ತಲುಪುತ್ತಿದ್ದಾರೆ.
ಇದನ್ನೂ ಓದಿ: ಸೆಟ್ಟೇರಿದ ಹಲೋ ಸರ್ ಸಿನಿಮಾ: ಕಾನೂನು ಸುವ್ಯವಸ್ಥೆ ಹಾಳು ಮಾಡೋರ ವಿರುದ್ದ ತೊಡೆ ತಟ್ಟಿನಿಲ್ಲುವ ನಾಯಕ !
ಅನಿಲ್ ಅರೋರಾ ಆತ್ಮಹತ್ಯೆ ಸುದ್ದಿ ತಿಳಿದ ತಕ್ಷಣ ಮಲೈಕಾ ಮಾಜಿ ಪತಿ ಅರ್ಬಾಜ್ ಖಾನ್ ಕುಟುಂಬ ಸಮೇತ ಸ್ಥಳಕ್ಕೆ ಆಗಮಿಸಿದ್ದಾರೆ. ಸಲ್ಮಾನ್ ಖಾನ್ ಅವರ ಗ್ಯಾಲಕ್ಸಿ ಅಪಾರ್ಟ್ಮೆಂಟ್ನಿಂದ ಮಲೈಕಾ ತಂದೆಯ ಮನೆ ಕೇವಲ 5 ನಿಮಿಷಗಳ ದೂರದಲ್ಲಿದೆ.
ಅರ್ಬಾಜ್ ಖಾನ್ ಜೊತೆಗೆ ಹಿರಿಯ ಇನ್ಸ್ಪೆಕ್ಟರ್, ಡಿಸಿಪಿ ಸೇರಿದಂತೆ ಹಿರಿಯ ಅಧಿಕಾರಿಗಳು ಕೂಡ ಸ್ಥಳಕ್ಕೆ ಆಗಮಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಪೊಲೀಸರು ಪ್ರಕರಣದ ತನಿಖೆಯಲ್ಲಿ ತೊಡಗಿದ್ದಾರೆ.
ಮಲೈಕಾ ಅರೋರಾ ಅವರ ತಂದೆ ಅನಿಲ್ ಅರೋರಾ ಪಂಜಾಬಿ ಹಿಂದೂ ಕುಟುಂಬಕ್ಕೆ ಸೇರದವರು. ಅನಿಲ್ ಅರೋರಾ ಅವರ ಕುಟುಂಬವು ಫಾಜಿಲ್ಕಾ ಜಿಲ್ಲೆಯ ನಿವಾಸಿಯಾಗಿತ್ತು. ಅನಿಲ್ ಅರೋರಾ ಭಾರತೀಯ ಮರ್ಚೆಂಟ್ ನೇವಿಯಲ್ಲಿ ಕಾರ್ಯ ನಿರ್ವಹಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.