ಬೆಂಗಳೂರು : ಪಿಎಸ್‌ಐ 402 ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ಸರ್ಕಾರ ಮುಂದೂಡಿದೆ. ಅದೇ ದಿನ ಯುಪಿಎಸ್‌ಸಿ ಪರೀಕ್ಷೆ ನಡೆಯಲಿರುವ ಹಿನ್ನೆಲೆಯಲ್ಲಿ ಪಿಎಸ್ಐ ಪರೀಕ್ಷೆಯನ್ನು ಮುಂದೂಡುವಂತೆ ಅಭ್ಯರ್ಥಿಗಳು ಸರ್ಕಾರಕ್ಕೆ ಸಲ್ಲಿಸಿರುವ ಮನ್ವುಯನ್ನು ಸರ್ಕಾರ ಪರಿಗಣಿಸಿದೆ. ಸೆ.22 ಕ್ಕೆ ನಡೆಯಬೇಕಿದ್ದ ಪರೀಕ್ಷೆಯನ್ನು ಇದೀಗ ಸೆ.28 ಮುಂದೂಡಿದೆ.
ರಾಜ್ಯದ ನೂರಕ್ಕೂ ಹೆಚ್ಚು ಆಕಾಂಕ್ಷಿಗಳು ಯುಪಿಎಸ್‌ಸಿ ಪ್ರಿಲಿಮ್ಸ್ ಪರೀಕ್ಷೆ ಬರೆದು, ಮುಖ್ಯ ಪರೀಕ್ಷೆಗೆ ಅರ್ಹತೆ ಹೊಂದಿದ್ದಾರೆ.ಮುಖ್ಯ ಪರೀಕ್ಷೆ ಮತ್ತು ಪಿಎಸ್‌ಐ ಪರೀಕ್ಷೆ ಒಂದೇ ದಿನ ನಿಗದಿಯಾಗಿತ್ತು. ಇದರಿಂದ ಎರಡೂ ಪರೀಕ್ಷೆ ಒಟ್ಟಿಗೆ ಬರೆಯಲು ಸಾಧ್ಯವಾಗುವುದಿಲ್ಲ. ಯಾವುದಾದರು ಒಂದು ಪರೀಕ್ಷೆ ಅವಕಾಶ ಕೈತಪ್ಪುತ್ತದೆ ಎಂದು ಅಭ್ಯರ್ಥಿಗಳು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು. ಪಿಎಸ್ಐ ಪರೀಕ್ಷೆ ದಿನಾಂಕವನ್ನು ಮುಂದಕ್ಕೆ ಹಾಕುವಂತೆ ಒತ್ತಾಯಿಸಿದ್ದರು.
ಇದನ್ನೂ ಓದಿ :ನಾಗಮಂಗಲ ಗಲಾಟೆ ಪ್ರಕರಣ : 52 ಜನರ ಬಂಧನ:ಸ್ಥಳದಲ್ಲಿ ಐಜಿಪಿ,ಕೆಎಸ್‌ಆರ್‌ಪಿ ತುಕಡಿ ನಿಯೋಜನೆ
ಇದೀಗ ಅಭ್ಯರ್ಥಿಗಳ ಮನವಿಯನ್ನು ಗಂಭೀರವಾಗಿ ಪರುಗನಿಸಿರುವ ಸರ್ಕಾರ ಪಿಎಸ್ಐ ಪರೀಕ್ಷೆ ದಿನಾಂಕವನ್ನು ಮುಂದಕ್ಕೆ ಹಾಕಿದೆ. ಈ ಹಿಂದೆ ಸೆ.೨೨ಕ್ಕೆ ನಿಗದಿಯಾಗಿದ್ದ ಪರೀಕ್ಷೆಯನ್ನು ಸೆ.೨೮ಕ್ಕೆ ಮುಂದೂಡಲಾಗಿದೆ. ಗೃಹ ಸಚಿವ ಜಿ ಪರಮೇಶ್ವರ್ ಪಿಎಸ್ಐ ಪರೀಕ್ಷೆಯ ಹೊಸ ದಿನಾಂಕವನ್ನು ಪ್ರಕಟಿಸಿದ್ದಾರೆ.
ಪಿಎಸ್ಐ ಪರೀಕ್ಷೆ ಮುಂದೂಡುವಂತೆ ಆಕಾಂಕ್ಷಿಗಳು ಮನವಿ ಸಲ್ಲಿಸಿದ್ದರು. ಬಿಜೆಪಿಯ ನಿಯೋಗ ಕೂಡಾ ಈ ಬಗ್ಗೆ ಮನವಿ ನೀಡಿತ್ತು. ಕೆಇಎ ಅಧಿಕಾರಿಗಳೊಂದಿಗೆ ಚರ್ಚಿಸಿದಾಗ ಡಿಸೆಂಬರ್‌ವರೆಗೆ ಪರೀಕ್ಷೆ ನಡೆಸಲು ದಿನ ಖಾಲಿ ಇಲ್ಲ ಎಂದು ತಿಳಿಸಿದ್ದರು. ನಂತರ ಪ್ರಾಥಮಿಕ ಶಿಕ್ಷಣ ಸಚಿವ ಮಂಧು ಬಂಗಾರಪ್ಪ ಅವರೊಂದಿಗೆ ಮಾತನಾಡಿ, ಶನಿವಾರದಂದು ಒಂದು ದಿನ ಪರೀಕ್ಷೆ ನಡೆಸಲು ಅವಕಾಶ ಮಾಡಿಕೊಡುವಂತೆ ಮನವಿ ಮಾಡಿದ್ದೆ. ಎಲ್ಲಾ ಆಕಾಂಕ್ಷಿಗಳ ಮನವಿಗೆ ಮನ್ನಣೆ ಕೊಟ್ಟು, ಅನುಕೂಲವಾಗುವ ನಿಟ್ಟಿನಲ್ಲಿ ಸೆ.28ರಂದು ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಪರಮೇಶ್ವರ್ ಹೇಳಿದ್ದಾರೆ.
ಇದನ್ನೂ ಓದಿ :ಗಣೇಶ ವಿಸರ್ಜನೆ ವೇಳೆ ಜಿಹಾದಿ ಯುವಕರಿಂದ ಕಲ್ಲು ತುರಾಟ, ಘಟನೆಯಿಂದ ಸ್ಥಳದಲ್ಲಿ ಉದ್ತಿಗ್ನ ವಾತಾವರಣ
ಪೊಲೀಸ್ ಪೇದೆ ನೇಮಕಾತಿಗೆ ವಯೋಮಿತಿ ಹೆಚ್ಚಳದ ಕುರಿತು ಬೇರೆ ರಾಜ್ಯಗಳಿಂದ ಮಾಹಿತಿ ಕಲೆ ಹಾಕಿದ್ದೇವೆ.ಇಲಾಖೆಯ ಉನ್ನತ ಅಧಿಕಾರಿಗಳ ಜೊತೆ ಚರ್ಚಿಸಿ, ವರದಿಯನ್ನು ಗಮನಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ಇದೆ ವೇಳೆ ತಿಳಿಸಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Facebook Link - https://bit.ly/3Hhqmcj
Youtube Link - https://www.youtube.com/watch?v=kr-YIH866cM
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm
Twitter Link - https://bit.ly/3n6d2R8 ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.