ನಾಗಮಂಗಲ :ಗಣೇಶ ಮೆರವಣಿಗೆ ವೇಳೆ ಪಟ್ಟಣದಲ್ಲಿ ನಡೆದ ಗಲಭೆ ಪೂರ್ವಯೋಜಿತ ಕೃತ್ಯ, ಅದೊಂದು ವ್ಯವಸ್ಥಿತ ಪಿತೂರಿ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. ಅಷ್ಟೇ ಅಲ್ಲ ಇದು ಕಾಂಗ್ರೆಸ್ ಪ್ರಾಯೋಜಿತ ಗಲಭೆ ಎಂದು ಅವರು ನೇರ ಆರೋಪ ಮಾಡಿದ್ದಾರೆ.
ವ್ಯವಸ್ಥಿತವಾಗಿ ಗಲಭೆಗಳನ್ನು ಸೃಷ್ಟಿ ಮಾಡುವ ಕೆಲಸವನ್ನು ಕಾಂಗ್ರೆಸ್ ಹಿಂದಿನಿಂದಲೂ ಮಾಡಿಕೊಂಡು ಬಂದಿದೆ. 1990ರಲ್ಲಿ ಅಂದಿನ ಮುಖ್ಯಮಂತ್ರಿ ವೀರೇಂದ್ರ ಪಾಟೀಲ್ ಅವರನ್ನು ಅಧಿಕಾರದಿಂದ ಕೆಳಗಿಳಿಸಲು ರಾಮನಗರ, ಚನ್ನಪ್ಪಟ್ಟಣದಲ್ಲಿ ಕೋಮುಗಲಭೆ ಸೃಷ್ಟಿಸಿ ಬೆಂಕಿ ಹಾಕಲಾಯಿತು. ಅವಳಿ ಪಟ್ಟಣಗಳು ಹೊತ್ತಿ ಉರಿದವು. ಅದೇ ಮಾದರಿಯಲ್ಲಿ ನಾಗಮಂಗಲದಲ್ಲಿ ಗಲಭೆ ಎಬ್ಬಿಸಲಾಗಿದೆ.ಡಿಜಿ ಹಳ್ಳಿ ಪೊಲೀಸ್ ಠಾಣೆಗೆ ಬೆಂಕಿ ಇಟ್ಟು ಸುಟ್ಟು ಹಾಕಲಾಯಿತು. ಅದಕ್ಕೂ ಕಾಂಗ್ರೆಸ್ ನಾಯಕರೇ ಕಾರಣ.ನಾಗಮಂಗಲದಲ್ಲಿ ಈಗ ಯಾವ ದುರುದ್ದೇಶ ಇಟ್ಟುಕೊಂಡು ಗಲಭೆ ಸೃಷ್ಟಿ ಮಾಡಲಾಗಿದೆಯೋ ಗೊತ್ತಿಲ್ಲ ಎಂದು ಹೆಚ್ ಡಿಕೆ ಅನುಮಾನ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ : ನಾಗಮಂಗಲ ಗಲಭೆ: ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ
ಇಂಥ ಗಲಾಟೆಗಳನ್ನು ಮಾಡಿಸುವುದರಲ್ಲಿ ಕಾಂಗ್ರೆಸ್ ಎಕ್ಸ್ ಪರ್ಟ್. ನಾಗಮಂಗಲದಲ್ಲಿಯೂ ಕಾಂಗ್ರೆಸ್ ಚಿತಾವಣೆಯ ಬಗ್ಗೆ ಅನುಮಾನ ಇದೆ.ಈಗ ಚನ್ನಪಟ್ಟಣದಲ್ಲಿ ಉಪ ಚುನಾವಣೆ ಬರುತ್ತಿದೆ.ಬೇರೆ ಬೇರೆ ಘಟನೆಗಳು ಕೂಡ ನಡೆಯುತ್ತಿವೆ. ಹೀಗಾಗಿ ಒಂದು ಸಮುದಾಯದ ಓಲೈಕೆ ಮಾಡಲು ಈ ಸಂಚು ರೂಪಿಸಿರಬಹುದು.ಇಡೀ ಘಟನೆಯನ್ನು ನೋಡಿದರೆ ನಾಗಮಂಗಲದ ಕೃತ್ಯದ ಹಿಂದೆ ಕಾಂಗ್ರೆಸ್ ಇರಬಹುದು ಎಂದು ಅವರು ಶಂಕೆ ವ್ಯಕ್ತಪಡಿಸಿದರು.
ಈ ಘಟನೆಗೆ ರಾಜ್ಯ ಕಾಂಗ್ರೆಸ್ ಸರಕಾರದ ಆಡಳಿತ ವೈಫಲ್ಯ ಹಾಗೂ ಸ್ಥಳೀಯ ಪೊಲೀಸರ ಕರ್ತವ್ಯ ಲೋಪವೂ ಕಾರಣ ಎಂದು ದೂರಿದ್ದಾರೆ.ಪೊಲೀಸರು ನಿಜವಾದ ದುಷ್ಕರ್ಮಿಗಳನ್ನು ಬಂಧಿಸಿ ಅವರಿಗೆ ಶಿಕ್ಷೆಯಾಗುವ ರೀತಿಯಲ್ಲಿ ಕೆಲಸ ಮಾಡಬೇಕು ಎಂದು ಕೇಂದ್ರ ಸಚಿವರು ಆಗ್ರಹಿಸಿದ್ದಾರೆ.
ಅಧಿಕಾರಿಗಳ ನಡೆ ಸಂಶಯಾಸ್ಪದ :
ಗಲಭೆಯ ಎಫ್‌ಐಆರ್ ಪ್ರತಿಯನ್ನು ಹಿಡಿದು ಮಾತನಾಡಿದ ಸಚಿವರು, ಆರೋಪ ಪಟ್ಟಿ ಸಂಪೂರ್ಣ ಲೋಪದಿಂದ ಕೂಡಿದೆ. ಪೊಲೀಸರ ವರ್ತನೆ ಸಂಶಯಾಸ್ಪದವಾಗಿದೆ ಎಂದು ಹೇಳಿದರು.
ಕೇವಲ 100-150 ಜನ ಇದ್ದ ಮೆರವಣಿಗೆಗೆ ಸ್ಥಳೀಯ ಪೊಲೀಸರಿಗೆ ಭದ್ರತೆ ಒದಗಿಸಲು ಸಾಧ್ಯವಾಗಿಲ್ಲ. ಸ್ಥಳದಲ್ಲಿ ಗಲಾಟೆ ಆರಂಭವಾಗುವುದಕ್ಕೆ ಕೇವಲ ಹತ್ತು ನಿಮಿಷಗಳ ಮೊದಲು ಮೀಸಲು ಪೊಲೀಸ್ ಪಡೆಯನ್ನು ಬೇರೆಡೆಗೆ ಕಳಿಸಲಾಗಿದೆ.ಸ್ಥಳೀಯ ಪೊಲೀಸ್ ಇನ್ಸ್ಪೆಕ್ಟರ್ ಹಾಗೂ ಡಿವೈಎಸ್ಪಿ ಸ್ಥಳದಲ್ಲಿಯೇ ಇರಲಿಲ್ಲ ಎಂದು ಸ್ಥಳೀಯರು ಹೇಳಿದ್ದಾರೆ.ಹಾಗಾದರೆ, ಈ ಇಬ್ಬರು ಅಧಿಕಾರಿಗಳು ಎಲಿದ್ದರು? ಮೀಸಲು ಪಡೆಯನ್ನು ಬೇರೆಡೆಗೆ ಕಳಿಸಿದ್ದು ಯಾಕೆ? ಎಂದು ಕೇಂದ್ರ ಸಚಿವರು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ : ಬಿಜೆಪಿ ಸಭೆಯಲ್ಲಿ ಅಸಮಾಧಾನ ಸ್ಫೋಟ
ಹತ್ತೇ ನಿಮಿಷದಲ್ಲಿ ಕಲ್ಲು, ಪೆಟ್ರೋಲ್ ಬಾಂಬ್ ಗಳು ಎಲ್ಲಿಂದ ಬಂದವು?
ಮೆರವಣಿಗೆ ಹೊರಟಿದ್ದವರ ಮೇಲೆ ಕಲ್ಲು, ಚಪ್ಪಲಿ, ಪೆಟ್ರೋಲ್ ಬಾಂಬ್ ಗಳನ್ನು ಎಸೆಯಲಾಗಿದೆ. ಕೇವಲ ಹತ್ತು ನಿಮಿಷದಲ್ಲಿ ಅಷ್ಟು ಪ್ರಮಾಣದ ಕಲ್ಲು, ಚಪ್ಪಲಿ, ಕಬ್ಬಿಣದ ಪೈಪ್ ಗಳು, ಪೆಟ್ರೋಲ್ ಬಾಂಬ್ ಗಳು ಎಲ್ಲಿಂದ ಬಂದವು? ಹತ್ತೇ ನಿಮಿಷದಲ್ಲಿ ಇವನ್ನೆಲ್ಲಾ ಸಂಗ್ರಹ ಮಾಡಿಕೊಳ್ಳಲು ಸಾಧ್ಯವೇ? ಇಡೀ ಗಲಭೆಯ ರೀತಿಯನ್ನು ನೋಡಿದರೆ ಹಿಂದೆ ದೊಡ್ಡ ಪಿತೂರಿ ಅಡಗಿರುವಂತೆ ತೋರುತ್ತದೆ ಎಂದು ಕೇಂದ್ರ ಸಚಿವರು ಅನುಮಾನ ವ್ಯಕ್ತಪಡಿಸಿದರು.
ಗೃಹ ಸಚಿವರ ವಿರುದ್ಧ ಕಿಡಿ :
ನಾಗಮಂಗಲ ಗಲಭೆಯನ್ನು ಸಣ್ಣ, ಆಕಸ್ಮಿಕ ಘಟನೆ ಎಂದು ಕರೆದಿರುವ ಗೃಹ ಸಚಿವ ಜಿ.ಪರಮೇಶ್ವರ್ ಅವರನ್ನು ತರಾಟೆಗೆ ತೆಗೆದುಕೊಂಡ ಕೇಂದ್ರ ಸಚಿವರು; ಇಷ್ಟೊಂದು ದೊಡ್ಡ ಗಲಭೆ ಆಗಿದೆ. ಯೋಜಿತವಾಗಿ ಅಂಗಡಿಗಳಿಗೆ ಬೆಂಕಿ ಹಚ್ಚಲಾಗಿದೆ. ಆದರೂ ಇವರೂ ಸಣ್ಣ, ಆಕಸ್ಮಿಕ ಘಟನೆ ಎನ್ನುತ್ತಾರೆ, ಇವರನ್ನು ಗೃಹ ಸಚಿವರು ಎಂದು ಕರೆಯಬೇಕೆ? ಎಂದು ಆಕ್ರೋಶ ವ್ಯಕ್ತಪಡಿಸಿದರು.
ನೊಂದವರಿಗೆ ಆರ್ಥಿಕ ನೆರವು :
ಇದೇ ವೇಳೆ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಗಲಭೆಯಲ್ಲಿ ಆಸ್ತಿಪಾಸ್ತಿ, ಜೀವನೋಪಾಯ ಕಳೆದುಕೊಂಡ ಅನೇಕರಿಗೆ ವೈಯಕ್ತಿಕವಾಗಿ ಆರ್ಥಿಕ ನೆರವು ನೀಡಿದರು. ಸುಮಾರು ಹತ್ತು ಲಕ್ಷಕ್ಕೂ ಹೆಚ್ಚು ಮೊತ್ತದ ಹಣವನ್ನು ಅವರು ಪರಿಹಾರವಾಗಿ ನೀಡಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=kr-YIH866cM
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ