Video:ಅಭ್ಯಾಸದ ವೇಳೆ ಸಿಡಿದೆದ್ದ ಕೊಹ್ಲಿ? ಕಿಂಗ್‌ ಸಿಕ್ಸರ್‌ಗೆ ಸ್ಟೇಡಿಯಂನ ಗೋಡೆ ಪೀಸ್‌ ಪೀಸ್‌!

Virat Kohli viral video: ಸೆಪ್ಟೆಂಬರ್ 19 ರಿಂದ ಬಾಂಗ್ಲಾದೇಶ ವಿರುದ್ಧ ಟೀಂ ಇಂಡಿಯಾ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದೆ. ಈ ಸರಣಿಗಾಗಿ ಭಾರತೀಯ ಕ್ರಿಕೆಟಿಗರು ಭರ್ಜರಿ ತಯಾರಿ ನಡೆಸುತ್ತಿದ್ದಾರೆ. ಈ ಸರಣಿಯಲ್ಲಿ ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಕೂಡ ಆಡಲಿದ್ದಾರೆ. ಸುದೀರ್ಘ ಸಮಯದ ನಂತರ ಅವರು ಟೆಸ್ಟ್ ಮಾದರಿಗೆ ಮರಳಲಿದ್ದು, ಭರ್ಜರಿ ಅಭ್ಯಾಸ ಶುರು ಮಾಡಿದ್ದಾರೆ.

Written by - Zee Kannada News Desk | Last Updated : Sep 18, 2024, 07:45 AM IST
  • ಸೆಪ್ಟೆಂಬರ್ 19 ರಿಂದ ಬಾಂಗ್ಲಾದೇಶ ವಿರುದ್ಧ ಟೀಂ ಇಂಡಿಯಾ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದೆ.
  • ಅಭ್ಯಾಸದ ಅವಧಿಯಲ್ಲಿ ಬ್ಯಾಟಿಂಗ್ ಮಾಡುವಾಗ, ಕೊಹ್ಲಿಯ ಬಾರಿಸಿದ ಚೆಂಡು ಸೀದಾ ಹೋಗಿ ಡ್ರೆಸ್ಸಿಂಗ್ ರೂಮ್‌ ಗೋಡೆಗೆ ಬಡಿದು ಪೀಸ್‌ ಪೀಸ್‌ ಆಗಿದೆ.
  • ಸಂಬಂಧಿಸಿದ ಫೋಟೋಗಳು ಮತ್ತು ವಿಡಿಯೋಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
Video:ಅಭ್ಯಾಸದ ವೇಳೆ ಸಿಡಿದೆದ್ದ ಕೊಹ್ಲಿ? ಕಿಂಗ್‌ ಸಿಕ್ಸರ್‌ಗೆ ಸ್ಟೇಡಿಯಂನ ಗೋಡೆ ಪೀಸ್‌ ಪೀಸ್‌!  title=

Virat Kohli viral video: ಸೆಪ್ಟೆಂಬರ್ 19 ರಿಂದ ಬಾಂಗ್ಲಾದೇಶ ವಿರುದ್ಧ ಟೀಂ ಇಂಡಿಯಾ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದೆ. ಈ ಸರಣಿಗಾಗಿ ಭಾರತೀಯ ಕ್ರಿಕೆಟಿಗರು ಭರ್ಜರಿ ತಯಾರಿ ನಡೆಸುತ್ತಿದ್ದಾರೆ. ಈ ಸರಣಿಯಲ್ಲಿ ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಕೂಡ ಆಡಲಿದ್ದಾರೆ. ಸುದೀರ್ಘ ಸಮಯದ ನಂತರ ಅವರು ಟೆಸ್ಟ್ ಮಾದರಿಗೆ ಮರಳಲಿದ್ದು, ಭರ್ಜರಿ ಅಭ್ಯಾಸ ಶುರು ಮಾಡಿದ್ದಾರೆ.

ಟೀಂ ಇಂಡಿಯಾ ಸೆಪ್ಟೆಂಬರ್ 19 ರಿಂದ ಬಾಂಗ್ಲಾದೇಶ ವಿರುದ್ಧ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದೆ. ಈ ಸರಣಿಗಾಗಿ ಭಾರತೀಯ ಕ್ರಿಕೆಟಿಗರು ಭರ್ಜರಿ ತಯಾರಿ ನಡೆಸುತ್ತಿದ್ದಾರೆ. ಈ ಸರಣಿಯಲ್ಲಿ ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಕೂಡ ಆಡಲಿದ್ದಾರೆ. ಸುದೀರ್ಘ ಸಮಯದ ನಂತರ ಅವರು ಟೆಸ್ಟ್ ಮಾದರಿಗೆ ಮರಳಲಿದ್ದಾರೆ. ಈ ವರ್ಷದ ಆರಂಭದಲ್ಲಿ ಕೊಹ್ಲಿ ತಮ್ಮ ಕೊನೆಯ ಟೆಸ್ಟ್ ಪಂದ್ಯವನ್ನು ದಕ್ಷಿಣ ಆಫ್ರಿಕಾ ವಿರುದ್ಧ ಆಡಿದ್ದರು. ಭಾರತ ಮತ್ತು ಬಾಂಗ್ಲಾದೇಶ ನಡುವಿನ ಮೊದಲ ಟೆಸ್ಟ್ ಪಂದ್ಯ ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿದೆ. 

ಇದನ್ನೂ ಓದಿ: ಕ್ರಿಕೆಟ್‌ನಿಂದ ದೂರ ಸರಿದ ಧೋನಿ ಏನು ಮಾಡುತ್ತಿದ್ದಾರೆ ಗೊತ್ತಾ? ವಿಡಿಯೋ ನೋಡಿ ಶಾಕ್‌ ಆಗ್ತೀರ!

 ಅಭ್ಯಾಸದ ಅವಧಿಯಲ್ಲಿ ಬ್ಯಾಟಿಂಗ್ ಮಾಡುವಾಗ, ಕೊಹ್ಲಿಯ ಸಿಕ್ಸರ್‌ ಬಾರಿಸಿದ್ದಾರೆ, ಈ ಚೆಂಡು ಸೀದಾ ಹೋಗಿ ಡ್ರೆಸ್ಸಿಂಗ್ ರೂಮ್‌ನ ಬಳಿ ಇದ್ದ ಗೋಡೆಗೆ ಬಡಿದಿದ್ದು, ಕಿಟಕಿ ಗಾಜು ಪೀಸ್‌ ಪೀಸ್‌ ಆಗಿದೆ. ಇದರಿಂದ ಸಹ ಆಟಗಾರರು ಬೆಚ್ಚಿಬಿದ್ದರು. ಇದಕ್ಕೆ ಸಂಬಂಧಿಸಿದ ಫೋಟೋಗಳು ಮತ್ತು ವಿಡಿಯೋಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಇದನ್ನು ನೋಡಿದ ಅಭಿಮಾನಿಗಳು ಮತ್ತು ನೆಟಿಜನ್‌ಗಳು ಬಾಂಗ್ಲಾದೇಶ ತಂಡ ಈ ವಿಡಯೋವನ್ನು ನೋಡಿದರೆ, ಭಾರತ ತಂಡದ ಎದುರು ಆಡಲು ಸಹ ಮುಂದಾಗುವುದಿಲ್ಲ ಎಂದು ಕಾಮೆಂಟ್‌ ಮಾಡುತ್ತಿದ್ದಾರೆ. ಇದಕ್ಕೆ ಸಂಬಂಧಿಸಿದ ವಿಡಿಯೋವನ್ನು ಜಿಯೋ ಸಿನಿಮಾ ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದೆ. 

ವಿರಾಟ್ ಕೊಹ್ಲಿ ಲಂಡನ್ ನಿಂದ ನೇರವಾಗಿ ಚೆನ್ನೈ ತಲುಪಿದ್ದು, ಬಾಂಗ್ಲಾದೇಶ ವಿರುದ್ಧದ ಪಂದ್ಯಕ್ಕಾಗಿ ಭಾರಿ ತಯಾರಿ ನಡೆಸುತ್ತಿದ್ದಾರೆ, ಅಭ್ಯಾಸದ ಅವಧಿಯಲ್ಲಿ ಬೆವರಿಳಿಸಿದ ವಿರಾಟ್ ಕೊಹ್ಲಿ ಟೀಂ ಇಂಡಿಯಾ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರೊಂದಿಗೆ ಸ್ವಲ್ಪ ಸಮಯ ಕಳೆದರು. ಈ ಸಂದರ್ಭದಲ್ಲಿ ಗಂಭೀರ್ ಕೊಹ್ಲಿಗೆ ಬ್ಯಾಟಿಂಗ್ ಟಿಪ್ಸ್ ನೀಡಿದರು. ಇನ್ನೂ, ಇದುವರೆಗೆ ಬಾಂಗ್ಲಾದೇಶ ವಿರುದ್ಧ 6 ಟೆಸ್ಟ್ ಪಂದ್ಯಗಳನ್ನು ಆಡಿದ್ದು, ಈ ಪಂದ್ಯಗಳಲ್ಲಿ 2 ಶತಕ ಸೇರಿದಂತೆ 54.62 ಸರಾಸರಿಯಲ್ಲಿ 437 ರನ್ ಗಳಿಸಿದ್ದಾರೆ. 

 

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News