ಬೆಳ್ಳಂಬೆಳಗ್ಗೆ ಭೀಕರ ಅಪಘಾತ.. ಆಟೋಗೆ ಡಿಕ್ಕಿ ಹೊಡೆದ ಲಾರಿ, ಪ್ಯಾಸೇಂಜರ್‌ ಸಾವು

Accident in Bengaluru: ಸಿಗ್ನಲ್ ಜಂಪ್ ಮಾಡಿದ ಲಾರಿ ಡ್ರೈವರ್ ನಿಯಂತ್ರಣ ತಪ್ಪಿ ಆಟೋಗೆ ಡಿಕ್ಕಿ ಹೊಡೆದಿದ್ದಾನೆ. 

Written by - Chetana Devarmani | Last Updated : Sep 28, 2024, 09:44 AM IST
  • ಬೆಳ್ಳಂಬೆಳಗ್ಗೆ ಭೀಕರ ಅಪಘಾತ
  • ಆಟೋಗೆ ಡಿಕ್ಕಿ ಹೊಡೆದ ಲಾರಿ
  • ಕಾಫಿ ಬೋರ್ಡ್ ಸಿಗ್ನಲ್ ಬಳಿ ಘಟನೆ
ಬೆಳ್ಳಂಬೆಳಗ್ಗೆ ಭೀಕರ ಅಪಘಾತ.. ಆಟೋಗೆ ಡಿಕ್ಕಿ ಹೊಡೆದ ಲಾರಿ, ಪ್ಯಾಸೇಂಜರ್‌ ಸಾವು title=

ಬೆಂಗಳೂರು: ಬೆಳ್ಳಂಬೆಳಗ್ಗೆ ಭೀಕರ ಅಪಘಾತ ಸಂಭವಿಸಿದೆ. ಲಾರಿ ಮತ್ತು ಆಟೋ ಡಿಕ್ಕಿಯಾಗಿ ಪ್ಯಾಸೇಂಜರ್ ಸಾವನ್ನಪ್ಪಿದ ಘಟನೆ ಬೆಂಗಳೂರಿನ ವಿಧಾನಸೌಧದ ಕೂಗಳತೆ ದೂರದಲ್ಲಿರುವ ಕಾಫಿ ಬೋರ್ಡ್ ಸಿಗ್ನಲ್ ಬಳಿ ನಡೆದಿದೆ. 

ಬೆನ್ಸನ್ ಟೌನ್ ಚಿನ್ನಪ್ಪ ಗಾರ್ಡನ್ ನಿಂದ ಬರುತ್ತಿದ್ದ ಆಟೋ ಮೆಜೆಸ್ಟಿಕ್ ಗೆ ಪ್ಯಾಸೆಂಜರ್ ಡ್ರಾಪ್ ಮಾಡಲು ಹೊರಟಿತ್ತು. ಸಿಗ್ನಲ್ ಜಂಪ್ ಮಾಡಿದ ಲಾರಿ ಡ್ರೈವರ್ ನಿಯಂತ್ರಣ ತಪ್ಪಿ ಆಟೋಗೆ ಡಿಕ್ಕಿ ಹೊಡೆದಿದ್ದಾನೆ. 

ಇದನ್ನೂ ಓದಿ: ನನ್ನ ಮೇಲೆ ರಾಜಕೀಯ ಪ್ರೇರಿತ ಕೇಸ್ ಹಾಕಿರುವುದು ಇದೇ ಮೊದಲು: ಮುಖ್ಯಮಂತ್ರಿ ಸಿದ್ದರಾಮಯ್ಯ

ಕಬ್ಬನ್ ಪಾರ್ಕ್ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಳಗಿನಜಾವ 4 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಅಪಘಾತದಲ್ಲಿ ಶಾಲಿನಿ ಎಂಬ ಪ್ಯಾಸೆಂಜರ್‌ ಸಾವನ್ನಪ್ಪಿದ್ದಾರೆ. ಲೋಡ್ ತುಂಬಿದ್ದ ಲಾರಿ ಆಟೋಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತದ ತೀವ್ರತೆ ಭೀಕರವಾಗಿದೆ. 

ಲೋಡ್ ಸಮೇತ ಲಾರಿ ಬಿಟ್ಟು ಚಾಲಕ ಎಸ್ಕೇಪ್ ಆಗಿದ್ದಾನೆ. ಮೃತದೇಹ ಬೌರಿಂಗ್ ಆಸ್ಪತ್ರೆಗೆ ರವಾನಿಸಲಾಗಿದೆ. ಮರಣೋತ್ತರ ಪರೀಕ್ಷೆ ನಡೆಸಲಾಗುವುದು. ಕಬ್ಬನ್ ಪಾರ್ಕ್ ಪೊಲೀಸರು ಲಾರಿ ಚಾಲಕನಿಗಾಗಿ ಹುಡುಕಾಟ ಆರಂಭಿಸಿದ್ದಾರೆ.

ಇದನ್ನೂ ಓದಿ: ಪಕ್ಷದ ಹಿತದೃಷ್ಟಿಯಿಂದ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಕೆಬಿ ಕೋಳಿವಾಡ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News