SSLC ಪಾಸ್/ಫೇಲ್ ಆದವರಿಗೆ ಇಲ್ಲಿದೆ ಸುವರ್ಣಾವಕಾಶ..! ನವೆಂಬರ್ 4 ರೊಳಗೆ ಅರ್ಜಿ ಸಲ್ಲಿಸಿ...!

  ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಪರಿಶಿಷ್ಟ ಜಾತಿ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಯುವಜನರ ಸ್ವಾವಲಂಬನೆಗೆ ಬೆಂಗಳೂರಿನ ಕೋರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿ ತರಬೇತಿ ಕಾರ್ಯಕ್ರಮ ಆಯೋಜಿಲಾಗಿದ್ದು, 40 ವರ್ಷದೊಳಗಿನ ಯುವಕ/ಯುವತಿಯರಿಂದ ಅರ್ಜಿ ಅಹ್ವಾನಿಸಿದೆ.

Written by - Manjunath N | Last Updated : Oct 8, 2024, 06:10 PM IST
  • ಭರ್ತಿ ಮಾಡಿದ ಅರ್ಜಿಯನ್ನು ನ. 04 ರೊಳಗಾಗಿ ಸಲ್ಲಿಸುವಂತೆ ಸಹಾಯಕ ನಿರ್ದೇಶಕರು ಪ್ರಕಟಣೆ ತಿಳಿಸಿದ್ದಾರೆ.
  • ಹೆಚ್ಚಿನ ಮಾಹಿತಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸುವುದು.
 SSLC ಪಾಸ್/ಫೇಲ್ ಆದವರಿಗೆ ಇಲ್ಲಿದೆ ಸುವರ್ಣಾವಕಾಶ..! ನವೆಂಬರ್ 4 ರೊಳಗೆ ಅರ್ಜಿ ಸಲ್ಲಿಸಿ...! title=
ಸಾಂಧರ್ಭಿಕ ಚಿತ್ರ

ಶಿವಮೊಗ್ಗ:  ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಪರಿಶಿಷ್ಟ ಜಾತಿ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಯುವಜನರ ಸ್ವಾವಲಂಬನೆಗೆ ಬೆಂಗಳೂರಿನ ಕೋರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿ ತರಬೇತಿ ಕಾರ್ಯಕ್ರಮ ಆಯೋಜಿಲಾಗಿದ್ದು, 40 ವರ್ಷದೊಳಗಿನ ಯುವಕ/ಯುವತಿಯರಿಂದ ಅರ್ಜಿ ಅಹ್ವಾನಿಸಿದೆ.

ಎಸ್.ಎಸ್.ಎಲ್.ಸಿ ಪಾಸ್/ಫೇಲ್ ಆದವರು ನವಂಬರ್ 07 ರಿಂದ 26ರ ವರೆಗೆ ನಡೆಯುವ 20 ದಿನಗಳ ಹೊಲಿಗೆ ತರಬೇತಿ ಶಿಬಿರಕ್ಕೆ ಮತ್ತು ದ್ವಿತೀಯ ಪಿ.ಯು.ಸಿ ಪಾಸ್/ಫೇಲ್ ಆದವರು ನವಂಬರ್ 15 ರಿಂದ 26 ರ ವರೆಗೆ ನಡೆಯುವ 12 ದಿನಗಳ ವಿಡಿಯೋಗ್ರಾಫಿ ತರಬೇತಿ ಶಿಬಿರಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಶಿಬಿರದಲ್ಲಿ ಭಾಗವಹಿಸುವ ಯುವಕ ಅಥವಾ ಯುವತಿಯರಿಗೆ ಊಟೋಪಹಾರ, ಪ್ರಮಾಣ ಪತ್ರ ಮತ್ತು ಹೊರ ಜಿಲ್ಲೆಗಳಿಂದ ಭಾಗವಹಿಸುವ ಯುವತಿಯರಿಗೆ ಸಾಮಾನ್ಯ ವಸತಿ ವ್ಯವಸ್ಥೆಯನ್ನು ನೀಡಲಾಗುವುದು.

ಇದನ್ನೂ ಓದಿ: ಎಚ್‌.ಡಿ.ಕುಮಾರಸ್ವಾಮಿ ವಿರುದ್ಧ ಕೀಳುಮಟ್ಟದ ಪದ ಬಳಕೆ: ಐಜಿಪಿ ಚಂದ್ರಶೇಖರ್‌ ವಿರುದ್ದ ಕ್ರಮಕ್ಕೆ ಸೂಚನೆ

ಆಸಕ್ತರು ಅರ್ಜಿ ನಮೂನೆಯನ್ನು ನಗರದ ನೆಹರು ಕ್ರೀಡಾಂಗದಲ್ಲಿರುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸಹಾಯಕ ನಿರ್ದೇಶಕರ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ನ. 04 ರೊಳಗಾಗಿ ಸಲ್ಲಿಸುವಂತೆ ಸಹಾಯಕ ನಿರ್ದೇಶಕರು ಪ್ರಕಟಣೆ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸುವುದು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

 

 

Trending News