Guruvara Dina Bhavishya In Kannada: ಶ್ರೀ ಶಾಲಿವಾಹನ ಶಕೆ 1946, ಕ್ರೋಧಿ ನಾಮ ಸಂವತ್ಸರ, ದಕ್ಷಿಣಾಯನ ಶರದ್ ಋತು, ಆಶ್ವಯುಜ ಮಾಸ, ಶುಕ್ಲ ಪಕ್ಷ, ಸಪ್ತಮಿ ತಿಥಿಯ ಈ ದಿನ ಗುರುವಾರ, ಪೂ.ಷಾ. ನಕ್ಷತ್ರ, ಅತಿಗಂಡ ಯೋಗ, ವಿಷ್ಟಿ ಕರಣ ನಿಮ್ಮ ರಾಶಿಗೆ ಹೇಗಿದೆ ತಿಳಿಯಿರಿ.
ಮೇಷ ರಾಶಿಯವರ ಭವಿಷ್ಯ (Aries Horoscope):
ನಿಮಗಿಂದು ಸಾಮಾನ್ಯ ದಿನ. ಒಮ್ಮೆಗೆ ಹಲವು ಕೆಲಸಗಳನ್ನು ಮಾಡಬೇಕಾಗಬಹುದು. ಹಾಗಾಗಿ ಒತ್ತಡಭರಿತ ದಿನ. ಯಾವುದೇ ವಿಚಾರದಲ್ಲಿ ಅದೃಷ್ಟದ ಮೇಲೆ ಅವಲಂಬಿತರಾಗದೆ ಪ್ರಯತ್ನಿಸಿದರೆ ಅಷ್ಟೇ ಶುಭ. ಕೌಟುಂಬಿಕ ಸಮಸ್ಯೆಗಳ ಬಗ್ಗೆ ಚಿಂತೆ ಕಡಿಮೆಯಾಗಲಿದೆ.
ವೃಷಭ ರಾಶಿಯವರ ಭವಿಷ್ಯ (Taurus Horoscope):
ನಿಮಗೆ ಇಂದು ಚಿಂತನಶೀಲವಾದ ದಿನ. ಅಪರಿಚಿತರಾ ಬಗ್ಗೆ ಎಚ್ಚರಿಕೆಯಿಂದ ಇರಿ. ಯಾವುದೇ ಆರೋಗ್ಯ ಸಂಬಂಧಿತ ಸಮಸ್ಯೆಗಳಿದ್ದಲ್ಲಿ ನಿರ್ಲಕ್ಷಿಸಬೇಡಿ. ನಿಮ್ಮ ಮಕ್ಕಳ ಪ್ರಗತಿಯಿಂದ ಮನಸ್ಸಿಗೆ ಸಂತೋಷ. ವೈವಾಹಿಕ ಜೀವನದಲ್ಲಿ ಸಮಸ್ಯೆಗಳಿದ್ದಲ್ಲಿ ಇಂದು ಪರಿಹಾರ ಪಡೆಯಬಹುದು.
ಮಿಥುನ ರಾಶಿಯವರ ಭವಿಷ್ಯ (Gemini Horoscope):
ಆಸ್ತಿ ಸಂಬಂಧಿತ ವಿಚಾರಗಳಿಗೆ ಸಂಬಂಧಿಸಿದಂತೆ ಅತ್ಯುತ್ತಮವಾದ ದಿನ. ವ್ಯವಹಾರದಲ್ಲಿ ಉತ್ತಮ ಲಾಭವಿರಲಿದೆ. ಹೊಸ ಕೆಲಸ ಪ್ರಾರಂಭಿಸಲು ಯೋಚಿಸುವವರಿಗೆ ಶುಭವಾಗಲಿದೆ. ಕೆಲಸದಲ್ಲಿ ಮೇಲಾಧಿಕಾರಿಗಳ ಮೆಚ್ಚುಗೆಗೆ ಪಾತ್ರರಾಗುವಿರಿ.
ಕರ್ಕಾಟಕ ರಾಶಿಯವರ ಭವಿಷ್ಯ (Cancer Horoscope):
ಈ ರಾಶಿಯ ವ್ಯಾಪಾರಸ್ಥರಿಗೆ ಉತ್ತಮ ದಿನ. ವ್ಯಾಪಾರದಲ್ಲಿ ಸುಧಾರಣೆಯಿಂದ ಮನಸ್ಸಿಗೆ ಸಂತೋಷ. ಮಕ್ಕಳ ಪ್ರಗತಿ, ವಿದೇಶದಲ್ಲಿ ಅಧ್ಯಯನಕ್ಕಾಗಿ ಪ್ರಯತ್ನಿಸುತ್ತಿರುವವರಿಗೆ ಗುಡ್ ನ್ಯೂಸ್ ಸಿಗಲಿದೆ. ನಿಮ್ಮ ಸಂಗಾತಿ ಉದ್ಯೋಗದಲ್ಲಿದ್ದಾರೆ ಬಡ್ತಿ ಸಂಭವವಿದೆ.
ಇದನ್ನೂ ಓದಿ- ಗುರು ಶುಕ್ರ ಮೈತ್ರಿಯಿಂದ ಸಂಸಪ್ತಕ ರಾಜಯೋಗ, ಈ ರಾಶಿಯವರಿಗೆ ಹಣಕ್ಕಿಲ್ಲ ಕೊರತೆ, ಮುಟ್ಟಿದ್ದೆಲ್ಲಾ ಬಂಗಾರ
ಸಿಂಹ ರಾಶಿಯವರ ಭವಿಷ್ಯ (Leo Horoscope):
ಸಮಾಜದಲ್ಲಿ ಇಂದು ನಿಮ್ಮ ಗೌರವ ಹೆಚ್ಚಾಗಲಿದೆ. ಶುಭ ಸುದ್ದಿಗಳು ಕೇಳಿಬರಲಿವೆ. ಸಾಮಾಜಿಕ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ಪ್ರತಿಷ್ಠೆ ಹೆಚ್ಚಾಗಲಿದೆ. ಪ್ರಗತಿಯ ಹೊಸ ಹಾದಿಗಳು ತೆರೆಯಲಿವೆ. ನಿಮ್ಮ ಕೆಲವು ಕೆಲಸಗಳು ಅಪೂರ್ಣವಾಗಿ ಉಳಿಯಬಹುದು, ಈ ಬಗ್ಗೆ ಯೋಚಿಸುವ ಅಗತ್ಯವಿಲ್ಲ.
ಕನ್ಯಾ ರಾಶಿಯವರ ಭವಿಷ್ಯ (Virgo Horoscope):
ಈ ರಾಶಿಯವರಿಗೆ ಇಂದು ಐಷಾರಾಮಿ ಬದುಕು. ನಿಮ್ಮ ಪ್ರಗತಿಯ ಹಾದಿಯಲ್ಲಿ ಬರುವ ಅಡೆತಡೆಗಳು ನಿವಾರಣೆಯಾಗುತ್ತವೆ. ವಿದ್ಯಾರ್ಥಿಗಳು ಅಧ್ಯಯನ ಮತ್ತು ಬರವಣಿಗೆಯಲ್ಲಿ ಉತ್ತಮ ಪ್ರಾವೀಣ್ಯತೆಯನ್ನು ಸಾಧಿಸಬಹುದು. ಆದಾಗ್ಯೂ, ನಿಮ್ಮ ಖರ್ಚುಗಳ ಬಗ್ಗೆ ನೀವು ಗಮನ ಹರಿಸಬೇಕು.
ತುಲಾ ರಾಶಿಯವರ ಭವಿಷ್ಯ (Libra Horoscope):
ಇಂದು ಮಿಶ್ರ ಫಲಪ್ರದವಾದ ದಿನ. ಬೇರೆಯವರ ವಾಹನ ಚಲಾಯಿಸುವಾಗ ಎಚ್ಚರಿಕೆಯಿಂದ ಇರಿ. ನಿಮ್ಮ ಕೆಲಸದಲ್ಲಿ ಪೋಷಕರು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತಾರೆ. ಸ್ವಲ್ಪ ಒತ್ತಡಭರಿತವಾದ ದಿನ. ನಿಮ್ಮ ಆದಾಯವನ್ನು ಹೆಚ್ಚಿಸಲು ಪ್ರಯತ್ನಿಸಿ.
ವೃಶ್ಚಿಕ ರಾಶಿಯವರ ಭವಿಷ್ಯ (Scorpio Horoscope):
ನಿಮಗಿಂದು ಶುಭ ದಿನ. ಕುಟುಂಬ ಸದಸ್ಯರೊಂದಿಗೆ ಸುಂದರ ಕ್ಷಣಗಳನ್ನು ಆನಂದಿಸುವಿರಿ. ಉದ್ಯೋಗಕ್ಕಾಗಿ ಯತ್ನಿಸುತ್ತಿರುವವರಿಗೆ ಶುಭ ಸುದ್ದಿ ಕೇಳಿ ಬರಲಿದೆ. ವಿದ್ಯಾರ್ಥಿಗಳು ವಿದ್ಯಾಭ್ಯಾಸದತ್ತ ನಿಗಾವಹಿಸಿ. ವ್ಯಾಪಾರಸ್ಥರು ಸ್ವಲ್ಪ ಜಾಗರೂಕರಾಗಿರಬೇಕು.
ಇದನ್ನೂ ಓದಿ- ಮನೆಯಲ್ಲಿ ಈ ನಿಯಮಗಳನ್ನು ಪಾಲಿಸಿದರೆ ಸದಾ ಇರುತ್ತೆ ಸಂಪತ್ತಿನ ಅಧಿದೇವತೆ ತಾಯಿ ಲಕ್ಷ್ಮಿ ಆಶೀರ್ವಾದ
ಧನು ರಾಶಿಯವರ ಭವಿಷ್ಯ (Sagittarius Horoscope):
ನಿಮ್ಮ ಕೆಲಸದ ಬಗ್ಗೆ ಸಂಪೂರ್ಣ ಗಮನಹರಿಸಿ. ಸಾಮಾಜಿಕ ಕ್ಷೇತ್ರಗಳಲ್ಲಿ ಕೆಲಸ ಮಾಡುವ ಜನರು ತಮ್ಮ ನಡವಳಿಕೆಯಲ್ಲಿ ಮಾಧುರ್ಯವನ್ನು ಕಾಪಾಡಿಕೊಳ್ಳಬೇಕು. ಪ್ರೇಮ ಜೀವನದಲ್ಲಿರುವವರು ಈ ಬಗ್ಗೆ ನಿಮ್ಮ ಮನೆಯವರೊಂದಿಗೆ ಮಾತನಾಡಿ.
ಮಕರ ರಾಶಿಯವರ ಭವಿಷ್ಯ (Capricorn Horoscope):
ಹಣಕಾಸಿನ ದೃಷ್ಟಿಯಿಂದ ಉತ್ತಮ ದಿನ. ಮಹತ್ವದ ಕೆಲಸಗಳು ಇಂದು ಪೂರ್ಣಗೊಳ್ಳಬಹುದು. ಯಾವುದೇ ಕೆಲಸದ ಬಗ್ಗೆ ಸೋಮಾರಿಯಾಗುವುದರಿಂದ ನಿಮಗೆ ಹೆಚ್ಚು ವೆಚ್ಚವಾಗಬಹುದು. ನಿಮ್ಮ ತಂದೆಯಿಂದ ಆಸ್ತಿಗೆ ಸಂಬಂಧಿಸಿದ ಕೆಲವು ಪ್ರಮುಖ ವಿಚಾರಗಳು ಬಗೆಹರಿಯಲಿವೆ.
ಕುಂಭ ರಾಶಿಯವರ ಭವಿಷ್ಯ (Aquarius Horoscope):
ಇಂದು ಲಾಭದಾಯಕ ದಿನ. ಕಾನೂನು ವಿಷಯದಲ್ಲಿ ಗೆಲ್ಲುವ ಸಾಧ್ಯತೆಯಿದೆ. ಕೆಲಸದಲ್ಲಿ ಅಪಾಯ ತೆಗೆದುಕೊಳ್ಳುವುದು ಲಾಭದಾಯಕವಾಗಬಹುದು. ನಿಮ್ಮ ಸಂಗಾತಿಯನ್ನು ಶಾಪಿಂಗ್ಗೆ ಕರೆದುಕೊಂಡು ಹೋಗಬಹುದು. ನಿಮ್ಮ ಕುಟುಂಬ ಸದಸ್ಯರ ಭಾವನೆಗಳನ್ನು ನೀವು ಗೌರವಿಸಬೇಕು.
ಮೀನ ರಾಶಿಯವರ ಭವಿಷ್ಯ (Pisces Horoscope):
ಕೆಲಸದ ಸ್ಥಳದಲ್ಲಿ ಕೆಲವು ವಿಷಯಗಳಿಗೆ ಸಂಬಂಧಿಸಿದಂತೆ ನೀವು ಉದ್ವಿಗ್ನತೆಯನ್ನು ಹೊಂದಿರುತ್ತೀರಿ. ನೀವು ಯಾವುದೇ ವಿಷಯದಲ್ಲಿ ಅನಾವಶ್ಯಕವಾಗಿ ಮಾತನಾಡುವುದನ್ನು ತಪ್ಪಿಸಬೇಕಾಗುತ್ತದೆ. ಇಲ್ಲದಿದ್ದರೆ, ಅದರಿಂದಲೇ ನಿಮ್ಮ ಸಮಸ್ಯೆಗಳು ಹೆಚ್ಚಾಗಬಹುದು.
ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.