IRCTC Recruitment 2024: ಲಿಖಿತ ಪರೀಕ್ಷೆ ಇಲ್ಲದೆ ಭಾರತೀಯ ರೈಲ್ವೆಯಲ್ಲಿ ನೇಮಕಾತಿ, ತಿಂಗಳಿಗೆ 2 ಲಕ್ಷ ಸಂಬಳ!

IRCTC Recruitment 2024: ಅಸಿಸ್ಟಂಟ್  ಜನರಲ್ ಮ್ಯಾನೇಜರ್, ಜನರಲ್ ಮ್ಯಾನೇಜರ್ ಸೇರಿದಂತೆ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ವಿಶೇಷವೆಂದರೆ ಈ ಹುದ್ದೆಗಳಿಗೆ ಯಾವುದೇ ಲಿಖಿತ ಪರೀಕ್ಷೆ ಇರುವುದಿಲ್ಲ. ಗರಿಷ್ಠ ತಿಂಗಳ ವೇತನ 2 ಲಕ್ಷ ರೂ. ಇರುತ್ತದೆ.

Written by - Puttaraj K Alur | Last Updated : Oct 10, 2024, 04:14 PM IST
  • ಭಾರತೀಯ ರೈಲ್ವೆ ಕ್ಯಾಟರಿಂಗ್ ಹಾಗೂ ಟೂರಿಸಂ ಕಾರ್ಪೋರೇಶನ್‌ನಲ್ಲಿ ನೇಮಕಾತಿ
  • ಅಸಿಸ್ಟೆಂಟ್ ಜನರಲ್ ಮ್ಯಾನೇಜರ್, ಜನರಲ್ ಮ್ಯಾನೇಜರ್ ಸೇರಿ ವಿವಿಧ ಹುದ್ದೆಗಳಿಗೆ ನೇಮಕಾತಿ
  • ನ.6 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿರಿ
IRCTC Recruitment 2024: ಲಿಖಿತ ಪರೀಕ್ಷೆ ಇಲ್ಲದೆ ಭಾರತೀಯ ರೈಲ್ವೆಯಲ್ಲಿ ನೇಮಕಾತಿ, ತಿಂಗಳಿಗೆ 2 ಲಕ್ಷ ಸಂಬಳ! title=
IRCTC Recruitment 2024

IRCTC Recruitment 2024: ಭಾರತೀಯ ರೈಲ್ವೆ ಕ್ಯಾಟರಿಂಗ್ ಹಾಗೂ ಟೂರಿಸಂ ಕಾರ್ಪೋರೇಶನ್(IRCTC)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭಗೊಂಡಿದೆ. ನವೆಂಬರ್ 6 ಅರ್ಜಿ ಸಲ್ಲಿಸಲು ಕೊನೆಯ ದಿನಾಂವಾಗಿದ್ದು, ಉದ್ಯೋಗ ಹುಡುಕುತ್ತಿರುವ ಹಾಗೂ ಕೇಂದ್ರ ಸರ್ಕಾರಿ ಕೆಲಸ ಬಯಸುವವರಿಗೆ ಇದು ಸುವರ್ಣಾವಕಾಶ.

ಯಾವ ಹುದ್ದೆಗಳು ಖಾಲಿ ಇವೆ?: ಅಸಿಸ್ಟೆಂಟ್ ಜನರಲ್ ಮ್ಯಾನೇಜರ್, ಜನರಲ್ ಮ್ಯಾನೇಜರ್ ಸೇರಿದಂತೆ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ವಿಶೇಷವೆಂದರೆ ಈ ಹುದ್ದೆಗಳಿಗೆ ಯಾವುದೇ ಲಿಖಿತ ಪರೀಕ್ಷೆ ಇರುವುದಿಲ್ಲ. ಗರಿಷ್ಠ ತಿಂಗಳ ವೇತನ 2 ಲಕ್ಷ ರೂ. ಇರುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. 

ಇದನ್ನೂ ಓದಿ: 'ಧನ್ಯವಾದಗಳು ಚೋಟು' ಎಂದ ಯುವತಿಗೆ ರತನ್ ಟಾಟಾ ಹೇಳಿದ್ದೇನು ಗೊತ್ತೇ? ಅವರ ಉತ್ತರ ನಿಜಕ್ಕೂ ನಿಮ್ಮ ಮನ ಗೆಲ್ಲುವಂತಿದೆ

ಹುದ್ದೆಗಳ ವಿವರ: IRCTC ಹೊರಡಸಿರುವ ನೇಮಕಾತಿ ಅಧಿಸೂಚನೆಯಲ್ಲಿ ಅರ್ಹತೆ, ವಯೋಮಿತಿ, ವೇತನ ಸೇರಿದಂತೆ ಎಲ್ಲಾ ಮಾಹಿತಿ ಲಭ್ಯವಿದೆ. ಸದ್ಯ ನೇಮಕಾತಿ ವಯೋಮಿತಿ ಗರಿಷ್ಠ 55 ವರ್ಷ. ಇದೇ ನವೆಂಬರ್ 6 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. ಲಿಖಿತ ಪರೀಕ್ಷೆ ಇಲ್ಲದಿರುವ ಕಾರಣ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಇಲಾಖೆ ಆಯ್ಕೆ ಮಾಡಲಿದೆ. IRCTC ಅಧಿಕೃತ ವೆಬ್‌ಸೈಟ್‌ನಲ್ಲಿ ಉದ್ಯೋಗ ನೇಮಕಾತಿಯ ಸಂಪೂರ್ಣ ಮಾಹಿತಿಯನ್ನು ನೀಡಲಾಗಿದೆ. ಅಷ್ಟೇ ಅಲ್ಲ ಆನ್‌ಲೈನ್ ಮೂಲಕವೂ ನೀವು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.  

ವೇತನ ವಿವರ: ಅಸಿಸ್ಟೆಂಟ್ ಜನರಲ್ ಮ್ಯಾನೇಜರ್, ಡೆಪ್ಯೂಟಿ ಜನರಲ್ ಮ್ಯಾನೇಜರ್ ಹುದ್ದೆಗೆ ಮಾಸಿಕ 15,600 ರೂ.ನಿಂದ ಗರಿಷ್ಠ 39,100 ರೂ.ವರೆಗೆ ನಿಗದಿಪಡಿಸಲಾಗಿದೆ. ಇನ್ನು ಡೆಪ್ಯೂಟಿ ಜನರಲ್ ಮ್ಯಾನೇಜರ್ (ಫೈನಾನ್ಸ್) ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 70 ಸಾವಿರ ರೂ.ನಿಂದ 2 ಲಕ್ಷ ರೂ.ವರೆಗೆ ಸಂಬಳ ನೀಡಲಾಗುತ್ತದೆ.

ಇದನ್ನೂ ಓದಿ: ಉದ್ಯಮಿ ರತನ್ ಟಾಟಾಗೆ ಮರಣೋತ್ತರ ಭಾರತ ರತ್ನ ಪುರಸ್ಕಾರ..? ಇಲ್ಲಿದೆ ಮಹತ್ವದ ನಿರ್ಧಾರ 

ಅರ್ಹ ಹಾಗೂ ಸೂಕ್ತ ಅಭ್ಯರ್ಥಿಗಳು ತಮ್ಮ ಸ್ವ-ವಿವರ, ವಿದ್ಯಾರ್ಹತೆ ದಾಖಲೆ ಸೇರಿದಂತೆ ಇತರ ದಾಖಲೆಗಳ ಪತ್ರಗಳನ್ನು ಲಗತ್ತಿಸಿ ಆನ್‌ಲೈನ್ ಮೂಲಕ ಅಥವಾ IRCTC ಇ-ಮೇಲ್ ಮೂಲಕ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ. ದಾಖಲೆ, ವಿವರ, ಪ್ರಮಾಣಪತ್ರಗಳ ಪರಿಶೀಲಿಸಿದ ಬಳಿಕ ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳಿಗೆ ಸಂದರ್ಶನಕ್ಕೆ ಇ-ಮೇಲ್ ಮೂಲಕ ಮಾಹಿತಿ ನೀಡಲಾಗುತ್ತದೆ. ಸಂದರ್ಶನದ ಮೂಲಕ ಸೂಕ್ತ ಹಾಗೂ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News