ಬೆಳಗಾವಿ ವಿಧಾನಮಂಡಳ ಚಳಿಗಾಲ ಅಧಿವೇಶನ:  ಅಗತ್ಯ ಸಿದ್ಧತೆಗೆ ಸ್ಪೀಕರ್ ಸೂಚನೆ

ಅಧಿವೇಶನಕ್ಕೆ ಆಗಮಿಸುವ ಮುಖ್ಯಮಂತ್ರಿ, ಸಚಿವರು, ಶಾಸಕರುಗಳಿಗೆ ಯಾವುದೇ ರೀತಿಯ ಅನಾನೂಕುಲವಾಗದಂತೆ ನಿಗಾವಹಿಸಬೇಕು. ಅಧಿವೇಶನಕ್ಕೆ ಬರುವಂತಹ ಸಚಿವರು, ಶಾಸಕರು, ಸಚಿವಲಾಯದ‌ ಅಧಿಕಾರಿ, ಸಿಬ್ಬಂದಿಗಳು, ಚಾಲಕರಿಗೆ ಹಾಗೂ ಪೋಲಿಸ್ ಅಧಿಕಾರಿ ಸಿಬ್ಬಂದಿಗಳಿಗೆ ವ್ಯವಸ್ಥಿತ ವಸತಿ, ಊಟೊಪಹಾರದ ವ್ಯವಸ್ಥೆಯಾಗಬೇಕು ಎಂದರು.

Written by - Manjunath N | Last Updated : Oct 18, 2024, 10:17 PM IST
  • ಸುವರ್ಣ ಸೌಧದ ಪ್ರವೇಶದ್ವಾರದಲ್ಲಿ ಜನ ಹಾಗೂ ಸಂಚಾರ ದಟ್ಟಣೆ ಆಗದಂತೆ ಕ್ರಮ ಕೈಗೊಳ್ಳಬೇಕು.
  • ಅಲ್ಲದೇ ಪ್ರತಿಭಟನಾ ಸ್ಥಳ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಸಿ.ಸಿ.ಕ್ಯಾಮೆರಾಗಳನ್ನು ಅಳವಡಿಸಿ ನಿರಂತರವಾಗಿ ನಿಗಾವಹಿಸಲು ತಿಳಿಸಿದರು.
  • ಅಧಿವೇಶನ‌ದ ವೀಕ್ಷಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸುತ್ತಾರೆ.
 ಬೆಳಗಾವಿ ವಿಧಾನಮಂಡಳ ಚಳಿಗಾಲ ಅಧಿವೇಶನ:  ಅಗತ್ಯ ಸಿದ್ಧತೆಗೆ ಸ್ಪೀಕರ್ ಸೂಚನೆ title=

ಬೆಳಗಾವಿ: ಪ್ರಸಕ್ತ ಸಾಲಿನ ಡಿಸೆಂಬರ್ ನಲ್ಲಿ ಬೆಳಗಾವಿಯಲ್ಲಿ ಜರುಗಲಿರುವ ವಿಧಾನಮಂಡಳದ ಚಳಿಗಾಲ ಅಧೀವೇಶನವನ್ನು ಕಳೆದ ಬಾರಿಯಂತೆ ಯಾವುದೇ ದೂರುಗಳಿಗೆ ಆಸ್ಪದ ನೀಡದೆ ಅಚ್ಚುಕಟ್ಟಾಗಿ ಆಯೋಜಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಕರ್ನಾಟಕ ವಿಧಾನ ಸಭೆ ಸಭಾಧ್ಯಕ್ಷರಾದ ಯು.ಟಿ.ಖಾದರ ಫರೀದ್ ಅವರು ಸೂಚನೆ ನೀಡಿದರು.

ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಶುಕ್ರವಾರ(ಅ.18) ನಡೆದ ಬೆಳಗಾವಿ ಚಳಿಗಾಲ ಅಧಿವೇಶನದ ಕುರಿತ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ‌ ವಹಿಸಿ ಅವರು ಮಾತನಾಡಿದರು.

ಅಧಿವೇಶನಕ್ಕೆ ಆಗಮಿಸುವ ಮುಖ್ಯಮಂತ್ರಿ, ಸಚಿವರು, ಶಾಸಕರುಗಳಿಗೆ ಯಾವುದೇ ರೀತಿಯ ಅನಾನೂಕುಲವಾಗದಂತೆ ನಿಗಾವಹಿಸಬೇಕು. ಅಧಿವೇಶನಕ್ಕೆ ಬರುವಂತಹ ಸಚಿವರು, ಶಾಸಕರು, ಸಚಿವಲಾಯದ‌ ಅಧಿಕಾರಿ, ಸಿಬ್ಬಂದಿಗಳು, ಚಾಲಕರಿಗೆ ಹಾಗೂ ಪೋಲಿಸ್ ಅಧಿಕಾರಿ ಸಿಬ್ಬಂದಿಗಳಿಗೆ ವ್ಯವಸ್ಥಿತ ವಸತಿ, ಊಟೊಪಹಾರದ ವ್ಯವಸ್ಥೆಯಾಗಬೇಕು ಎಂದರು.

ಇದನ್ನೂ ಓದಿ: ಭಾರೀ ಮಳೆಯಿಂದಾಗಿ ನೀರಿನಲ್ಲಿ ಕೊಚ್ಚಿ ಹೋದ ದವಸ ಧಾನ್ಯಗಳು

ಸುವರ್ಣ ಸೌಧದ ಪ್ರವೇಶದ್ವಾರದಲ್ಲಿ ಜನ ಹಾಗೂ ಸಂಚಾರ ದಟ್ಟಣೆ ಆಗದಂತೆ ಕ್ರಮ ಕೈಗೊಳ್ಳಬೇಕು. ಅಲ್ಲದೇ ಪ್ರತಿಭಟನಾ ಸ್ಥಳ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಸಿ.ಸಿ.ಕ್ಯಾಮೆರಾಗಳನ್ನು ಅಳವಡಿಸಿ ನಿರಂತರವಾಗಿ ನಿಗಾವಹಿಸಲು ತಿಳಿಸಿದರು.ಅಧಿವೇಶನ‌ದ ವೀಕ್ಷಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸುತ್ತಾರೆ. ಈ ನಿಟ್ಟಿನಲ್ಲಿ ಸುವರ್ಣ ಸೌಧದಲ್ಲಿ ಸ್ವಚ್ಚತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಕಲಾಪಗಳ‌ ವೀಕ್ಷಣೆಗೆ ಆಗಮಿಸುವ ಶಾಲೆಗಳ ವಿವರಗಳನ್ನು‌ ಮುಂಚಿತವಾಗಿ ನೀಡಬೇಕು. ಕಾಯುವಿಕೆ ಸಮಯದಲ್ಲಿ‌ ಮಕ್ಕಳಿಗೆ ನೆರಳಿನ ವ್ಯವಸ್ಥೆ ಮಾಡಬೇಕು.

ಕಳೆದ ಬಾರಿಯ ಅಧಿವೇಶನದಂತೆ ಈ ಬಾರಿಯ ಚಳಿಗಾಲದ ಅಧಿವೇಶನವನ್ನು ಅಚ್ಚುಕಟ್ಟಾಗಿ ಜರುಗಿಸಬೇಕು.‌ ಎಲ್ಲ ಇಲಾಖೆಗಳು ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸುವುದರ‌ ಮೂಲಕ ಚಳಿಗಾಲದ ಅಧಿವೇಶನವನ್ನು ಯಶಸ್ವಿಗಾಗಿ ಎಲ್ಲ‌ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸಭಾಧ್ಯಕ್ಷರಾದ ಯು.ಟಿ. ಖಾದರ್ ಅವರು ತಿಳಿಸಿದರು.

ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ ಹೊರಟ್ಟಿ ಅವರು‌ ಮಾತನಾಡಿ, ಕಳೆದ‌ ಬಾರಿಯಂತೆ ಈ ಬಾರಿಯು ಪ್ರತಿದಿನ ಬೇರೆ ಬೇರೆ ಜಿಲ್ಲೆಗಳ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಈ ಕಾರ್ಯಕ್ರಮಗಳಿಗೆ ಅಕ್ಕಪಕ್ಕದ‌ ಜಿಲ್ಲೆಗಳ ಕಲಾವಿದರಿಗೆ ಆದ್ಯತೆ ನೀಡಬೇಕು ಎಂದರು.

ಅಧಿವೇಶನದ ಸಂದರ್ಭದಲ್ಲಿ ಅಂತರ್ಜಾಲ‌ ವ್ಯವಸ್ಥೆಯಲ್ಲಿ ಯಾವುದೇ ಅಡತಡೆ ಆಗದಂತೆ‌ ನೋಡಿಕೊಳ್ಳಲು ಸೂಚಿಸಿದರು.  ಶಾಸಕರು, ಸಚಿವರುಗಳು ವಾಸ್ತವ್ಯ ಮಾಡುವಂತಹ ಹೊಟೆಲಗಳಲ್ಲಿ ಸಾರ್ವಜನಿಕರ‌ ಭೇಟಿಗೆ ಲಾಂಜ್ ವ್ಯವಸ್ಥೆ ಮಾಡಬೇಕು. ಈ ಕುರಿತು ಹೋಟೆಲ್‌ ಮಾಲಿಕರೊಂದಿಗೆ ಸಭೆ ಜರುಗಿಸಿ ಸೂಕ್ತ ನಿರ್ದೆಶನಗಳನ್ನು ನೀಡಲು ತಿಳಿಸಿದರು.ಸುವರ್ಣ ಸೌಧದಲ್ಲಿ ಶಾಸಕರ‌ ಭವನ‌ ನಿರ್ಮಾಣ ಹಾಗೂ ನಿರಂತರ‌ ನೀರು‌‌‌ ಪೂರೈಕೆಗೆ ಸಂಬಂಧಿಸಿದಂತೆ ಯೋಜನೆಯನ್ನು ರೂಪಿಸಿ ಪ್ರಸ್ತಾವನೆಯನ್ನು ಸಲ್ಲಿಸುವಂತೆ ಸಭಾಪತಿಗಳಾದ ಬಸವರಾಜ ಹೊರಟ್ಟಿ ಅವರು ತಿಳಿಸಿದರು.

ಜಿಲ್ಲಾಧಿಕಾರಿ‌ ಮೊಹಮ್ಮದ್‌ ರೋಷನ್ ಅವರು‌ ಮಾತನಾಡಿ, ಅಧಿವೇಶನವನ್ನು ವ್ಯವಸ್ಥಿತವಾಗಿ ಜರುಗಿಸುವ‌ ಹಿನ್ನೆಲೆಯಲ್ಲಿ ವಸತಿ, ಆಹಾರ‌ ಹಾಗೂ ಭದ್ರತಾ‌ ಸಮಿತಿಗಳನ್ನು ರಚಿಸಿ ಸಭೆಗಳನ್ನು ಆಯೋಜಿಸಲಾಗಿದೆ. ಅಧಿವೇಶನಕ್ಕೆ‌ ಆಗಮಿಸುವ ಮುಖ್ಯಮಂತ್ರಿಗಳು, ಸಚಿವರು, ಶಾಸಕರು, ಸಚಿವಾಲಯದ ಅಧಿಕಾರಿ, ಸಿಬ್ಬಂದಿ, ವಾಹನ ಚಾಲಕರಿಗೆ ಸೂಕ್ತ‌ ವಸತಿ‌ ಹಾಗೂ ಊಟೋಪಹಾರದ ಕಲ್ಪಿಸಲು ಸಭೆಯಲ್ಲಿ‌ ಚರ್ಚಿಸಲಾಗಿರುತ್ತದೆ. ಅಲ್ಲದೇ ಭದ್ರತೆಗೆ ಸಂಬಂಧಿಸಿದಂತೆ ಸೂಕ್ತ‌ ವ್ಯವಸ್ಥೆಗಳನ್ನು ಮಾಡಿಕೊಳ್ಳಲು ಯೋಜಿಸಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಎಚ್‌.ಡಿ.ಕುಮಾರಸ್ವಾಮಿ ವಿರುದ್ಧ ಕೀಳುಮಟ್ಟದ ಪದ ಬಳಕೆ: ಐಜಿಪಿ ಚಂದ್ರಶೇಖರ್‌ ವಿರುದ್ದ ಕ್ರಮಕ್ಕೆ ಸೂಚನೆ

ಸುವರ್ಣ ಸೌಧದಲ್ಲಿ ಸಚಿವರು, ಶಾಸಕರು, ಸಚಿವಾಲಯದ ಅಧಿಕಾರಿ, ಸಿಬ್ಬಂದಿ, ವಾಹನ ಚಾಲಕರಿಗೆ ಹಾಗೂ ಪೋಲಿಸ್ ಸಿಬ್ಬಂದಿಗಳಿಗೆ ಪ್ರತ್ಯೇಕವಾಗಿ ಊಟದ ವ್ಯವಸ್ಥೆ ಮಾಡಲಾಗುವದು. ಅಲ್ಲದೇ ಸುಮಾರು ನಾಲ್ಕು‌ ಖಾಸಗಿ ಕ್ಯಾಂಟಿನ್ ಗಳನ್ನು ತೆರೆಯಲಾಗುವುದು.ಡಿ.ಸಿ.ಪಿ.ರೋಹನ ಜಗದೀಶ‌ ಕಳೆದ ಅಧಿವೇಶನಕ್ಕೆ ಅಂದಾಜು  ಐದು ಸಾವಿರ ಪೋಲಿಸ್ ಅಧಿಕಾರಿ, ಸಿಬ್ಬಂದಿಗಳನ್ನು ನಿಯೋಜಿಸಲಾಗಿತ್ತು. ಆ ಸಂದರ್ಭದಲ್ಲಿ ಪೋಲಿಸ್ ಅಧಿಕಾರಿ‌ ಹಾಗೂ ಸಿಬ್ಬಂದಿಗಳಿಗೆ ಅಚ್ವುಕಟ್ಟಾದ ವಸತಿ ಹಾಗೂ ಊಟದ ವ್ಯವಸ್ಥೆ ಮಾಡಲಾಗಿತ್ತು. ಪ್ರತಿಭಟನಾ ಸ್ಥಳಗಳಲ್ಲಿ ಅಗತ್ಯ ಪೋಲಿಸ್ ಬಂದೋಬಸ್ತ ಜೊತೆ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದರು. 

ಸಭೆಯಲ್ಲಿ ಶಾಸಕರಾದ ರಾಜು(ಆಸೀಫ್)ಸೇಠ ಕರ್ನಾಟಕ ವಿಧಾನ ಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ, ವಿಧಾನ ಪರಿಷತ್ ಕಾರ್ಯದರ್ಶಿಗಳಾದ ಮಹಾಲಕ್ಷ್ಮೀ,   ಜಿಲ್ಲಾ‌ ಪೊಲಿಸ್‌ ವರಿಷ್ಠಾಧಿಕಾರಿ ಡಾ.ಭೀಮಾಶಂಕರ‌ ಗುಳೇದ,ಜಿಲ್ಲಾ ಪಂಚಾಯತ ಸಿ.ಇ.ಓ. ರಾಹುಲ್ ಶಿಂಧೆ,ಪ್ರಶಿಕ್ಷಣಾರ್ಥಿ ಆಯ್.ಎಸ್. ಅಧಿಕಾರಿ ದಿನೇಶಕುಮಾರ್ ಮೀನಾ,  ವಿವಿಧ ಇಲಾಖೆಗಳ‌ ಅಧಿಕಾರಿಗಳು ಉಪಸ್ಥಿತರಿದ್ದರು.

ಸುವರ್ಣಸೌಧ ಪರಿಶೀಲನೆ; ಸಮರ್ಪಕ ನಿರ್ವಹಣೆಗೆ ನಿರ್ದೇಶನ:

ಸಭೆಗೂ ಮುಂಚೆ ಸಭಾಧ್ಯಕ್ಷರಾದ ಯು.ಟಿ.ಖಾದರ‌್ ಹಾಗೂ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಸುವರ್ಣಸೌಧದ ವಿವಿಧ ಸಭಾಂಗಣಗಳನ್ನು ವೀಕ್ಷಿಸಿದರು‌.ಇದೇ ಸ್ವಚ್ಛತಾ ಸಿಬ್ಬಂದಿಗಳನ್ನು ಮಾತನಾಡಿಸಿದ ಯು.ಟಿ.ಖಾದರ್ ಅವರು, ದೈನಂದಿನ ಸ್ವಚ್ಛತಾ ಕೆಲಸದ ಕುರಿತು ಮಾಹಿತಿ ಪಡೆದುಕೊಂಡರು.ತದನಂತರ ವಿಧಾನ ಸಭೆ, ವಿಧಾನ‌ ಪರಿಷತ್ ಸಭಾಂಗಣಗಳಿಗೆ ಭೇಟಿ ನೀಡಿ ವ್ಯವಸ್ಥೆಗಳನ್ನು ಪರಿಶೀಲಿಸಿದರು.ಸ್ವಚ್ಛತೆ, ಆಸನಗಳ ನಿರ್ವಹಣೆ, ಪ್ರವೇಶ ದ್ವಾರದ ಬ್ಯಾಗೇಜ್ ಸ್ಕ್ಯಾನರ್ ಮತ್ತಿತರ ವ್ಯವಸ್ಥೆಗಳನ್ನು ಮುಂಚಿತವಾಗಿ ಸಿದ್ಧವಾಗಿಟ್ಟುಕೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

 

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News