IPL 2025: RCB ತಂಡ ಸೇರಲು ಕೇಳಿದ ಅಭಿಮಾನಿಗೆ ರೋಹಿತ್‌ ಶರ್ಮಾ ನೀಡಿದ ಉತ್ತರ ಇದು! ಬೆಂಗಳೂರು ಬಾಯ್ಸ್‌ಗೆ ಬಂದಂಗಾಯ್ತು ಆನೆಬಲ!

Rohit Sharma Entry to RCB: IPL ನಲ್ಲಿ ಮುಂಬೈ ಇಂಡಿಯನ್ಸ್ ತಂಡದಲ್ಲಿ ಸ್ಟಾರ್ ಕ್ರಿಕೆಟಿಗ ರೋಹಿತ್ ಶರ್ಮಾ ಮುಂದುವರೆಯುತ್ತಾರಾ? ಅಥವಾ ಇಲ್ಲವಾ? ಈ ವಿಷಯದ ಬಗ್ಗೆ ಕೆಲ ದಿನಗಳಿಂದ ಬಿಸಿ ಬಿಸಿ ಚರ್ಚೆ ನಡೆಯುತ್ತಿದೆ.   

Written by - Savita M B | Last Updated : Oct 19, 2024, 03:35 PM IST
  • IPL 2025 ರ ಧಾರಣ ಪಟ್ಟಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುತ್ತದೆ
  • ಎನ್ನುವ ವಿಚಾರದಲ್ಲಿ ಸಸ್ಪೆನ್ಸ್ ಮುಂದುವರಿದಿದೆ.
IPL 2025: RCB ತಂಡ ಸೇರಲು ಕೇಳಿದ ಅಭಿಮಾನಿಗೆ ರೋಹಿತ್‌ ಶರ್ಮಾ ನೀಡಿದ ಉತ್ತರ ಇದು! ಬೆಂಗಳೂರು ಬಾಯ್ಸ್‌ಗೆ  ಬಂದಂಗಾಯ್ತು ಆನೆಬಲ! title=

Rohit Sharma: IPL 2025 ರ ಧಾರಣ ಪಟ್ಟಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುತ್ತದೆ. ಮೆಗಾ ಹರಾಜಿನಲ್ಲಿ ಯಾವ ಸ್ಟಾರ್ ಆಟಗಾರನನ್ನು ಯಾವ ಫ್ರಾಂಚೈಸಿ ತನ್ನದಾಗಿಸಿಕೊಳ್ಳುತ್ತದೆ ಎಂಬ ಕುತೂಹಲ ಕ್ರಿಕೆಟ್ ಅಭಿಮಾನಿಗಳಲ್ಲಿದೆ. ಅದಕ್ಕಿಂತ ಮುಖ್ಯವಾಗಿ ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯಲ್ಲಿ ಮುಂದುವರಿಯುತ್ತಾರಾ? ಅಥವಾ ಇಲ್ಲವಾ? ಎನ್ನುವ ವಿಚಾರದಲ್ಲಿ ಸಸ್ಪೆನ್ಸ್ ಮುಂದುವರಿದಿದೆ.

ಕಳೆದ ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್ ತಂಡದ ನಾಯಕರಾಗಿ ರೋಹಿತ್ ಶರ್ಮಾ ಬದಲಿಗೆ ಹಾರ್ದಿಕ ಪಾಂಡ್ಯ ಬಂದಿದ್ದರು. ರೋಹಿತ್ ಶರ್ಮಾ ಅವರನ್ನು ನಾಯಕತ್ವದಿಂದ ಕೆಳಗಿಳಿಸುವ ಕುರಿತು ಭಾರೀ ಚರ್ಚೆ ನಡೆದಿದೆ. ಮುಂಬೈ ಇಂಡಿಯನ್ಸ್ ನಾಯಕತ್ವದಿಂದ ರೋಹಿತ್ ಶರ್ಮಾ ಅವರನ್ನು ತೆಗೆದುಹಾಕಿದ್ದರಿಂದ ಹಿಟ್‌ಮ್ಯಾನ್ ಅಭಿಮಾನಿಗಳು ತುಂಬಾ ನೊಂದಿದ್ದಾರೆ.. 

 ಇತ್ತೀಚಿನ ಬೆಳವಣಿಗೆಗಳ ಹಿನ್ನೆಲೆಯಲ್ಲಿ ರೋಹಿತ್ ಶರ್ಮಾ ಐಪಿಎಲ್ ನಲ್ಲಿ ಮುಂದುವರಿಯುತ್ತಾರಾ? ಅಥವಾ ಇಲ್ಲವಾ? ಎಂಬ ವಿಷಯ ಚರ್ಚೆಯಾಗುತ್ತಿದೆ. ರೋಹಿತ್ ಶರ್ಮಾ ಜೊತೆಗೆ ಮುಂಬೈ ಇಂಡಿಯನ್ಸ್ ಇತರ ಮೂವರು ಸ್ಟಾರ್ ಕ್ರಿಕೆಟಿಗರಾದ ಹಾರ್ದಿಕ್ ಪಾಂಡ್ಯ, ಬುಮ್ರಾ ಮತ್ತು ಸೂರ್ಯಕುಮಾರ್ ಯಾದವ್ ಅವರನ್ನು ಉಳಿಸಿಕೊಳ್ಳಬಹುದು. ರೋಹಿತ್ ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ಸ್ ತಂಡ ಐದು ಬಾರಿ ಐಪಿಎಲ್ ಚಾಂಪಿಯನ್ ಆಗಿರುವುದು ಗೊತ್ತೇ ಇದೆ.

ಈ ನಡುವೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ರೋಹಿತ್ ಶರ್ಮಾ ಟೀಂ ಇಂಡಿಯಾವನ್ನು ಮುನ್ನಡೆಸುತ್ತಿದ್ದಾರೆ. ಈ ಸಂದರ್ಭದಲ್ಲಿ ಸ್ಟೇಡಿಯಂನಲ್ಲಿ ಸ್ವಾರಸ್ಯಕರ ಘಟನೆಯೊಂದು ನಡೆಯಿತು. ಐಪಿಎಲ್‌ನಲ್ಲಿ ನೀವು ಯಾವ ತಂಡದಲ್ಲಿ ಇರುತ್ತೀರಿ ಎಂದು ಅಭಿಮಾನಿಯೊಬ್ಬರು ರೋಹಿತ್‌ಗೆ ಕೇಳಿದ ಬಳಿಕ RCB ತಂಡಕ್ಕೆ ಬರುವಂತೆ ಕೇಳಿದರು. ಆದರೆ ಯಾವುದೇ ಉತ್ತರ ನೀಡದೆ ರೋಹಿತ್ ಶರ್ಮಾ ಪೆವಿಲಿಯನ್ ಒಳಗೆ ಹೋದರು. ರೋಹಿತ್ ಶರ್ಮಾ ಮತ್ತು ಅಭಿಮಾನಿಯ ನಡುವಿನ ಈ ಸಂಭಾಷಣೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News