/kannada/photo-gallery/this-south-star-has-helped-more-than-500-families-these-are-the-netizens-who-are-the-real-heroes-221337 500ಕ್ಕೂ ಹೆಚ್ಚು ಕುಟುಂಬಗಳಿಗೆ ನೆರವಾಗಿದ್ದಾರೆ ಈ ಸೌತ್ ಸ್ಟಾರ್!!  ರಿಯಲ್ ಹೀರೋ ಇವರೇ ಎಂದ ನೆಟ್ಟಿಗರು 500ಕ್ಕೂ ಹೆಚ್ಚು ಕುಟುಂಬಗಳಿಗೆ ನೆರವಾಗಿದ್ದಾರೆ ಈ ಸೌತ್ ಸ್ಟಾರ್!! ರಿಯಲ್ ಹೀರೋ ಇವರೇ ಎಂದ ನೆಟ್ಟಿಗರು 221337

ಬೆಂಗಳೂರು: ಲಾಕ್ ಡೌನ್ ನಿಂದ ಬಡವರು ಹಾಗೂ ಮಧ್ಯಮ ವರ್ಗದ ಜನತೆ ತೊಂದರೆಯಲ್ಲಿದ್ದಾರೆ. ಈ ಸನ್ನಿವೇಶವನ್ನು ದುರ್ಬಳಕೆ ಮಾಡಿಕೊಂಡು ಕೆಲ ವ್ಯಾಪಾರಸ್ತರು ಅಗತ್ಯ ವಸ್ತುಗಳ ಬೆಲೆಯನ್ನು ದಿಢೀರ್ ಏರಿಕೆ ಮಾಡಿದ್ದಾರೆ.  ಸರ್ಕಾರ ಈ ಕುರಿತು ಕ್ರಮ ಕೈಗೊಳ್ಳಬೇಕು ಎಂದು ವಿಧಾನಸಭೆಯ ವಿಪಕ್ಷ ನಾಯಕರಾದ  ಸಿದ್ದರಾಮಯ್ಯ (Siddaramaiah) ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಹೇಳಿಕೆ ಬಿಡುಗಡೆ ಮಾಡಿರುವ ಸಿದ್ದರಾಮಯ್ಯ ಅವರು, ಅಗತ್ಯ ವಸ್ತುಗಳ ಬೆಲೆಯನ್ನು ಶೇ. 20-30ರಷ್ಟು ಏರಿಕೆ ಮಾಡಿದರೆ ಈಗಾಗಲೇ ಕಷ್ಟದಲ್ಲಿರುವ  ಬಡವರಿಗೆ ಇನ್ನಷ್ಟು ತೊಂದರೆಯಾಗುತ್ತದೆ. ಅಕ್ಕಿ, ಬೇಳೆ ಬೆಲೆ ಹೆಚ್ಚಾದರೆ ಖರೀದಿ ಮಾಡುವುದಾದರೂ ಹೇಗೆ? ಈಗಾಗಲೇ ಅವರ ಬಳಿ ದುಡಿಮೆ ಇಲ್ಲ, ದುಡ್ಡೂ ಇಲ್ಲ. ಆದುದರಿಂದ ಈ ಕುರಿತು ಗಮನ ಹರಿಸಿ, ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ  ಬಿ.ಎಸ್. ಯಡಿಯೂರಪ್ಪ (BS Yeddyurappa) ಆಹಾರ ಇಲಾಖೆ ಅಧಿಕಾರಿಗಳಿಗೆ ಆದೇಶ ನೀಡಬೇಕು ಎಂದು ತಿಳಿಸಿದ್ದಾರೆ.

ಇಂದಿರಾ ಕ್ಯಾಂಟೀನ್‌ಗಳಿಗೆ ಭೇಟಿ ನೀಡಿ ರಿಯಾಲಿಟಿ ಚೆಕ್ ಮಾಡಿದ ಸಿದ್ದರಾಮಯ್ಯ

ಹಣ್ಣು, ತರಕಾರಿ ಸೇರಿದಂತೆ ತಾವು ಬೆಳೆದಿರುವ ಕೃಷಿ ಉತ್ಪನ್ನಗಳನ್ನು ಖರೀದಿ ಮಾಡುವವರೇ ಇಲ್ಲ ಎಂದು ಅನೇಕ ರೈತರು ದೂರವಾಣಿ ಕರೆ ಮಾಡಿ ಹೇಳುತ್ತಿದ್ದಾರೆ. ಅದೇ ರೀತಿ ಭತ್ತ, ರಾಗಿಯನ್ನೂ ಖರೀದಿಸುತ್ತಿಲ್ಲ ಎನ್ನುತ್ತಿದ್ದಾರೆ. ಈ ಕುರಿತು ಕೂಡ ಸರ್ಕಾರ ಗಮನ ಹರಿಸಬೇಕು. ಬೆಳೆ ಹಾನಿ-ಪರಿಹಾರಕ್ಕೆ ಆಗ್ರಹ ರಾಜ್ಯದ ವಿವಿಧೆಡೆ ಇತ್ತೀಚೆಗೆ ಭಾರಿ ಮಳೆಯಾಗಿದೆ ಇದರಿಂದ ಬಳ್ಳಾರಿ, ರಾಯಚೂರು, ಕೊಪ್ಪಳ ಮತ್ತಿತರ ಜಿಲ್ಲೆಗಳಲ್ಲಿ  ಭತ್ತ, ಕಬ್ಬು, ಬಾಳೆ ಬೆಳೆಗೆ ಹಾನಿಯಾಗಿದೆ. ಎಲ್ಲೆಲ್ಲಿ ಹಾನಿಯಾಗಿದೆ. ಅಲ್ಲಿ ಪರಿಹಾರ ಕೊಡಬೇಕು. ಬೆಳೆ ನಷ್ಟ ಕುರಿತು ಸಮೀಕ್ಷೆ ನಡೆಸಬೇಕು ಎಂದಿದ್ದಾರೆ.

ವೇತನ ಕಡಿತಕ್ಕೆ ಸಿದ್ದರಾಮಯ್ಯ ಸಹಮತ:
ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿನ್ನೆ ದೂರವಾಣಿ ಕರೆ ಮಾಡಿ, ಶಾಸಕರು, ಸಂಸದರ ವೇತನ ಕಡಿತ ಮಾಡುವುದಾಗಿ ಹೇಳಿದ್ದಾರೆ. ಅದಕ್ಕೆ ನಮ್ಮ ಸಹಮತವೂ ಇದೆ.  ಸಂಕಷ್ಟದ ಸಂದಭೃದಲ್ಲಿ ಸರ್ಕಾರದ ಕ್ರಮಕ್ಕೆ ಪ್ರತಿಪಕ್ಷಗಳು ಸಹಕರಿಸಬೇಕಾಗುತ್ತದೆ.  ಇದಕ್ಕೆ ನಮ್ಮ ಒಪ್ಪಿಗೆ ಇದೆ ಎಂದು ಹೇಳಿದ್ದಾರೆ.

ಶಾಸಕರ ವಿರುದ್ಧ ಕ್ರಮಿನಲ್ ಕೇಸಿಗೆ ಆಗ್ರಹ:
ಇತ್ತೀಚೆಗೆ ಇಡೀ ಅಲ್ಪ ಸಂಖ್ಯಾತ ಸಮುದಾಯವನ್ನೇ ಗುರಿಯಾಗಿಟ್ಟುಕೊಂಡು ಕೆಲವರು ಮಾತನಾಡುತ್ತಿದ್ದಾರೆ. ನಿಜಾಮುದ್ದೀನ್‍ಗೆ ಹೋಗಿ ಬಂದವರನ್ನು ಪತ್ತೆ ಹಚ್ಚಿ ಕ್ವಾರಂಟೈನ್ ಮಾಡಲಿ. ಇದಕ್ಕೆ ನಮ್ಮ ತಕರಾರು ಇಲ್ಲ. ಒಂದು ವೇಳೆ ನಿಜಾಮುದ್ದೀನ್‍ಗೆ ಹೋಗಿ ಬಂದವರ ಪೈಕಿ ಯಾರಾದರೂ ದುರುದ್ದೇಶಪೂರ್ವಕವಾಗಿ ಮಾಹಿತಿ ನೀಡದ್ದೇ ಇದ್ದರೆ ಅವರ ವಿರುದ್ಧ ಕ್ರಮ ಜರುಗಿಸಲಿ. ಆದರೆ ಆ ವರ್ಗದವರನ್ನೇ ಗುರಿಯಾಗಿಟ್ಟುಕೊಂಡು ಆರೋಪ ಮಾಡುವುದು ಸರಿಯಲ್ಲ. ಇಡೀ ಸಮುದಾಯದವರನ್ನು ತಪ್ಪಿತಸ್ತರಂತೆ ಕಾಣವುದುದು ದುರುದ್ದೇಶಪೂರ್ವಕವಾದ ನಡವಳಿಕೆ. 
ಈ ಸಂಬಂಧ ಶಾಸಕರಾದ ರೇಣುಕಾಚಾರ್ಯ ಮತ್ತು ಬಸವನಗೌಡ ಪಾಟೀಲ್ ಯತ್ನಾಳ್ ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆ. ನಿಜಾಮುದ್ದೀನ್‍ಗೆ ಹೋಗಿ ಬಂದವರನ್ನು ಗುಂಡಿಟ್ಟು ಕೊಲ್ಲಿ ಎಂದಿದ್ದಾರೆ. ಈ ಇಬ್ಬರ ಮೇಲೂ ಕ್ರಿಮಿನಲ್ ಕೇಸು ದಾಖಲಿಸಿ ಬಂಧಿಸಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ದೆಹಲಿಯಲ್ಲಿನ ಬಡ ಕನ್ನಡಿಗರ ಕುಟುಂಬಗಳಿಗೆ ಯೂತ್ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ನೆರವು

ರೇಣುಕಾಚಾರ್ಯ ಅವರನ್ನು ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ವಜಾ ಮಾಡಬೇಕು. ಅವರು ಏನೇ ಹೇಳಿಕೆ ಕೊಟ್ಟರೂ ಅದು ಮುಖ್ಯಮಂತ್ರಿಗಳ ಮಾತೇ ಆಗುತ್ತದೆ. ಹೀಗಾಗಿ ಅವರು ಆ ಹುದ್ದೆಯಲ್ಲಿ ಮುಂದುವರಿಯಲು ಅರ್ಹರಲ್ಲ. ಶಾಸಕರಾದವರು ಬಾಯಿಗೆ ಬಂದಂತೆ ಮಾತನಾಡುವುದು ಸರಿಯಲ್ಲ. ಗುಂಡಿಟ್ಟು ಕೊಲ್ಲಿ ಎಂದು ಹೇಳುವುದು ಎಷ್ಟರ ಮಟ್ಟಿಗೆ ಸರಿ. ಗುಂಡಿಟ್ಟು ಕೊಲ್ಲಲು ಯಾವ ಕಾನೂನಿನಲ್ಲಿ ಅವಕಾಶವಿದೆ. ಈ ರೀತಿಯ ಬೇಜವಾಬ್ದಾರಿ ಹೇಳಿಕೆ ನೀಡುವುದನ್ನು ನಾನು ಖಂಡಿಸುತ್ತೇನೆ ಎಂದು ಹೇಳಿದ್ದಾರೆ.

ಸರ್ಕಾರಿ ನೌಕರರ ವೇತನ ಕಡಿತ ಬೇಡ:
ಸಕಾರಿ ನೌಕರರ ವೇತನ ನಿಲ್ಲಿಸುವ ಅಥವಾ ಕಡಿತ ಮಾಡುವ ನಿರ್ಧಾರ ಸರಿಯಲ್ಲ. ಈಗಾಗಲೇ ಅವರು ಒಂದು ದಿನದ ವೇತನವನ್ನು ದೇಣಿಗೆಯಾಗಿ ನೀಡಿದ್ದಾರೆ. ಅದು ಸಾಕು ಎಂಬುದು ನನ್ನ ಭಾವನೆ. ಬೇಕಾದರೆ ಸಂಸದರು, ಶಾಸಕರ ವೇತನವನ್ನು ಇನ್ನಷ್ಟು ವೇತನ ಕಡಿತ ಮಾಡಲಿ. ಅದಕ್ಕೆ ನಮ್ಮ ವಿರೋಧ ಇಲ್ಲ. 

ಲಾಕ್‌ಡೌನ್ (Lockdown) ಮುಂದುವರಿದರೆ ಸಹಕಾರ ಒಂದು ವೇಳೆ ಲಾಕ್‍ಡೌನ್ ಮುಂದುವರಿಸುವ ಅನಿವಾರ್ಹ ಪರಿಸ್ಥಿತಿ ಎದುರಾದರೆ ರಾಜ್ಯದ ಜನತೆ ಅದಕ್ಕೆ ಸಹಕಾರ ನೀಡಬೇಕು. ನಾವೂ ಸಹಕಾರ ನೀಡುತ್ತೇವೆ. ಅಗತ್ಯ ವಸ್ತುಗಳನ್ನು ಖರೀದಿ ಮಾಡುವುದು ಹಾಗೂ ಮಾರಾಟ ಮಾಡುವುದನ್ನು ಹೊರತುಪಡಿಸಿ ಲಾಕ್ ಡೌನ್ ಬಿಗಿ ಮಾಡಬೇಕು ಎಂದು ಸಿದ್ದರಾಮಯ್ಯ ಅವರು ಒತ್ತಾಯಿಸಿದ್ದಾರೆ.

Section: 
English Title: 
Siddaramaiah urges to take action on speeding up of essential commodities
News Source: 
Home Title: 

ಅಗತ್ಯ ವಸ್ತುಗಳ ಬೆಲೆ ದಿಢೀರ್ ಏರಿಕೆ ಬಗ್ಗೆ ಕ್ರಮ ಕೈಗೊಳ್ಳುವಂತೆ ಸಿದ್ದರಾಮಯ್ಯ ಒತ್ತಾಯ

ಅಗತ್ಯ ವಸ್ತುಗಳ ಬೆಲೆ ದಿಢೀರ್ ಏರಿಕೆ ಬಗ್ಗೆ ಕ್ರಮ ಕೈಗೊಳ್ಳುವಂತೆ ಸಿದ್ದರಾಮಯ್ಯ ಒತ್ತಾಯ
Caption: 
File Image
Author No use : 
Yashaswini V
Yes
Is Blog?: 
No
Tags: 
Facebook Instant Article: 
Yes
Mobile Title: 
ಅಗತ್ಯ ವಸ್ತುಗಳ ಬೆಲೆ ದಿಢೀರ್ ಏರಿಕೆ ಬಗ್ಗೆ ಕ್ರಮ ಕೈಗೊಳ್ಳುವಂತೆ ಸಿದ್ದರಾಮಯ್ಯ ಒತ್ತಾಯ
Yashaswini V
Publish Later: 
No
Publish At: 
Wednesday, April 8, 2020 - 14:38
Created By: 
Yashaswini V
Updated By: 
Yashaswini V
Published By: 
Yashaswini V