Dragon Fruit Health Benefits : ಡ್ರ್ಯಾಗನ್ ಫ್ರೂಟ್.. ಈ ಹಣ್ಣನ್ನು ಪೋಷಕಾಂಶಗಳ ಅತ್ಯುತ್ತಮ ಮೂಲವೆಂದು ಕರೆಯಲಾಗುತ್ತದೆ. ಇದು ಕಿವಿ ಮತ್ತು ಪಿಯರ್ ಹಣ್ಣಿನಂತೆ ರುಚಿ ನೀಡುತ್ತದೆ. ಡ್ರ್ಯಾಗನ್ ಹಣ್ಣು ಮೆಕ್ಸಿಕೋ ಮತ್ತು ಮಧ್ಯ ಅಮೇರಿಕಾದಲ್ಲಿ ಹೆಚ್ಚಾಗಿ ಕಂಡು ಬರತ್ತದೆ. ಇದನ್ನು ಪ್ರಸ್ತುತ ಪ್ರಪಂಚದಾದ್ಯಂತ ಅನೇಕ ದೇಶಗಳಲ್ಲಿ ಬೆಳೆಯಲಾಗುತ್ತದೆ.
ನಮ್ಮ ದೇಶದಲ್ಲಿಯೂ ಸಹ ಡ್ರ್ಯಾಗನ್ ಹಣ್ಣಿನ ಕೃಷಿ ಮತ್ತು ವ್ಯಾಪಾರ ಜೋರಾಗಿ ನಡೆಯುತ್ತಿದೆ. ಇಲ್ಲದಿದ್ದರೆ, ಈ ಹಣ್ಣು ದೇಹಕ್ಕೆ ಅಗತ್ಯವಿರುವ ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದ್ದು, ಇದು ಅನೇಕ ಆರೋಗ್ಯ ಸಮಸ್ಯೆಗಳಿಗೆ ಉತ್ತಮ ಪರಿಹಾರವಾಗಿ ಕೆಲಸ ಮಾಡುತ್ತದೆ. ಡ್ರ್ಯಾಗನ್ ಹಣ್ಣು ತಿನ್ನುವುದರಿಂದ ಆಗುವ ಲಾಭಗಳೇನು ಎಂಬುದನ್ನು ಇಲ್ಲಿ ತಿಳಿಯೋಣ.
ಡ್ರ್ಯಾಗನ್ ಫ್ರೂಟ್ ಪೊಟ್ಯಾಸಿಯಮ್ನಲ್ಲಿ ಸಮೃದ್ಧವಾಗಿದ್ದು, ಇದು ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಹೃದಯದ ಆರೋಗ್ಯವನ್ನು ಸುಧಾರಿಸುತ್ತದೆ. ಈ ಹಣ್ಣು ಬಹಳಷ್ಟು ಫೈಬರ್ ಅನ್ನು ಹೊಂದಿದ್ದು, ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ. ಅಷ್ಟೇ ಅಲ್ಲ, ಮಲಬದ್ಧತೆ ಮತ್ತು ಅಜೀರ್ಣದಂತಹ ಸಮಸ್ಯೆಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಡ್ರ್ಯಾಗನ್ ಫ್ರೂಟ್ ಕಡಿಮೆ ಕ್ಯಾಲೋರಿ, ಹೆಚ್ಚಿನ ಫೈಬರ್ ಹೊಂದಿದ್ದು, ಇದನ್ನ ತಿಂದ್ರೆ ಹೆಚ್ಚು ಕಾಲ ಹೊಟ್ಟೆ ತುಂಬಿದಂತೆ ಇರುತ್ತದೆ. ಇದು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ. ಮೇಲಾಗಿ.. ಡ್ರ್ಯಾಗನ್ ಫ್ರೂಟ್ ಆ್ಯಂಟಿಆಕ್ಸಿಡೆಂಟ್ ಗಳಲ್ಲಿ ಸಮೃದ್ಧವಾಗಿದ್ದು, ಚರ್ಮದ ಆರೋಗ್ಯ ಕಾಪಾಡುತ್ತದೆ..
ಡ್ರ್ಯಾಗನ್ ಹಣ್ಣಿನಲ್ಲಿ ವಿಟಮಿನ್ ಸಿ, ವಿಟಮಿನ್ ಇ ಮತ್ತು ವಿಟಮಿನ್ ಬಿ ಕೂಡ ಇದೆ. ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ, ಜೀವಕೋಶಗಳನ್ನು ರಕ್ಷಿಸುತ್ತದೆ ಮತ್ತು ಮೆದುಳಿನ ಆರೋಗ್ಯವನ್ನು ಸುಧಾರಿಸುತ್ತದೆ. ಡ್ರ್ಯಾಗನ್ ಹಣ್ಣು ಪ್ರೋಬಯಾಟಿಕ್ಗಳನ್ನು ಹೊಂದಿದೆ. ಇವು ಜೀರ್ಣಕಾರಿ ಸಮಸ್ಯೆಗಳು ಮತ್ತು ಮಲಬದ್ಧತೆಯಂತಹ ಸಮಸ್ಯೆಗಳನ್ನು ನಿವಾರಿಸುತ್ತದೆ.
ಯಾವುದೇ ಆಹಾರ ಅಲರ್ಜಿ ಇರುವವರು ಡ್ರ್ಯಾಗನ್ ಹಣ್ಣನ್ನು ಸೇವಿಸುವ ಮೊದಲು ವೈದ್ಯರನ್ನು ಸಂಪರ್ಕಿಸಬೇಕು. ಅಲ್ಲದೆ, ಕೆಲವು ರೀತಿಯ ಔಷಧಿಗಳನ್ನು ತೆಗೆದುಕೊಳ್ಳುವವರು ವೈಧ್ಯರ ಸಲಹೆ ಪಡೆದು ಈ ಹಣ್ಣನ್ನು ತಿನ್ನುವುದು ಒಳ್ಳೆಯದು. ಡ್ರ್ಯಾಗನ್ ಫ್ರೂಟ್ ಅನ್ನು ಅತಿಯಾಗಿ ಸೇವಿಸಿದರೆ, ಕೆಲವೊಮ್ಮೆ ಜೀರ್ಣಕಾರಿ ಸಮಸ್ಯೆಗಳು ಉಂಟಾಗಬಹುದು ಎಚ್ಚರ..