lawyer jagadish on Darshan: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ದರ್ಶನ್ಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ನಟ ಇತ್ತೀಚೆಗಷ್ಟೇ ಆರು ವಾರಗಳ ಜಾಮೀನು ಪಡೆದು ಜೈಲಿನಿಂದ ಬಿಡುಗಡೆಯಾಗಿದ್ದರು. ಆದರೆ ಮಧ್ಯಂತರ ಜಾಮೀನಿನ ನಂತರ ದರ್ಶನ್ ಗೆ ಸಮಸ್ಯೆಗಳ ಸರಮಾಲೆಯೇ ಎದುರಾಗಿದೆ. ಮಧ್ಯಂತರ ಜಾಮೀನಿನ ಮೇಲೆ ಮತ್ತೊಮ್ಮೆ ನ್ಯಾಯಾಲಯದ ಮೆಟ್ಟಿಲು ಹತ್ತಲು ಪೊಲೀಸರು ಸಜ್ಜಾಗಿದ್ದಾರೆ ಎಂದು ವರದಿಯಾಗಿದೆ. ಇದರ ಬೆನ್ನಲ್ಲೇ ಇದೀಗ ದರ್ಶನ್ ಹಾಗೂ ಅವರ ಅಭಿಮಾನಿಗಳ ವಿರುದ್ಧ ಬೆಂಗಳೂರಿನಲ್ಲಿ ಹೊಸ ದೂರು ದಾಖಲಾಗಿದೆ. ಇತ್ತೀಚೆಗಷ್ಟೇ ಬಿಗ್ ಬಾಸ್ ನಿಂದ ಹೊರಬಂದ ವಕೀಲ ಜಗದೀಶ್ ನಟ ದರ್ಶನ್ ವಿರುದ್ಧ ದೂರು ದಾಖಲಿಸಿದ್ದಾರೆ. ವಕೀಲ ಜಗದೀಶ್ ಸೋಷಿಯಲ್ ಮಿಡಯಾದಲ್ಲಿ ಸದಾ ಸಕ್ರಿಯರಾಗಿದ್ದಾರೆ. ಕೆಲ ರಿಯಾಲಿಟಿ ಶೋಗಳಲ್ಲಿ ಭಾಗವಹಿಸಿದ್ದ ಜಗದೀಶ್ ಸಾಮಾಜಿಕ ಜಾಲತಾಣಗಳಲ್ಲಿ ಕೆಲ ವಿಡಿಯೋಗಳನ್ನು ಹಂಚಿಕೊಂಡಿದ್ದಾರೆ. ಅವರು ಇತ್ತೀಚಿನ ಕೆಲವು ಘಟನೆಗಳ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ. ನಟ ದರ್ಶನ್ ಪ್ರಕರಣದ ಬಗ್ಗೆಯೂ ವಕೀಲ ಜಗದೀಶ್ ಮಾತನಾಡಿದ್ದರು..
ದರ್ಶನ್ ಅಭಿಮಾನಿಗಳು ಅವರ ವಿರುದ್ಧ ಮಾತನಾಡಿದ್ದಕ್ಕೆ ಅವರ ಕುಟುಂಬಕ್ಕೆ ಕೊಲೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಜಗದೀಶ್ ಆರೋಪಿಸಿದ್ದಾರೆ. ಇದಲ್ಲದೆ, ದರ್ಶನ್ ಅವರ ಅನೇಕ ಅಭಿಮಾನಿಗಳು ಸಾಮಾಜಿಕ ಮಾಧ್ಯಮದಲ್ಲಿ ಜಗದೀಶ್ ಅವರ ಮೇಲೆ ಅನುಚಿತ ಪೋಸ್ಟ್ಗಳನ್ನು ಹಂಚಿಕೊಂಡಿದ್ದಾರೆ. ಕೆಲವರು ನನ್ನ ಹಾಗೂ ಕುಟುಂಬದವರಿಗೆ ಕೊಲೆ ಬೆದರಿಕೆ ಹಾಕುತ್ತಿದ್ದಾರೆ ಎಂದು.. ಇದೀಗ ಈ ವಿಚಾರವಾಗಿ ದರ್ಶನ್ ಹಾಗೂ ಅವರ ಅಭಿಮಾನಿಗಳ ವಿರುದ್ಧ ವಕೀಲ ಜಗದೀಶ್ ದೂರು ದಾಖಲಿಸಿದ್ದಾರೆ.
ಇದನ್ನೂ ಓದಿ-ಸೆನ್ಸಾರ್ ಮುಂದೆ "ಫಾರೆಸ್ಟ್" ಬಹು ನಿರೀಕ್ಷಿತ ಈ ಚಿತ್ರ ಸದ್ಯದಲ್ಲೇ ತೆರೆಗೆ
ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿರುವ ವಕೀಲ ಜಗದೀಶ್, 'ನಾನು ದರ್ಶನ್ ಜೊತೆ ಏಕವಚನದಲ್ಲಿ ಮಾತನಾಡಿದ್ದೇನೆ ಎಂದು ದರ್ಶನ್ ಅಭಿಮಾನಿಗಳು ಬೆದರಿಕೆ ಹಾಕಿದ್ದಾರೆ. ದರ್ಶನ್ ಅವರ ಕೆಲವು ಅಭಿಮಾನಿಗಳು ನನಗೆ ಎರಡು ದಿನದಲ್ಲಿ ಸಾವಿರಕ್ಕೂ ಹೆಚ್ಚು ಕರೆಗಳನ್ನು ನೀಡಿದ್ದಾರೆ. ದರ್ಶನ್ ಅವರ ಅಭಿಮಾನಿ ರಿಷಿ ಹಲವು ಬಾರಿ ಕರೆ ಮಾಡಿ ಕೊಲೆ ಬೆದರಿಕೆ ಹಾಕಿದ್ದರು. ಅಭಿಮಾನಿಗಳು ಇಷ್ಟೆಲ್ಲಾ ಮಾಡುತ್ತಿದ್ದರೂ ಇದರ ಹಿಂದೆ ದರ್ಶನ್ ಕೈವಾಡವಿದೆ ಎಂದು ಜಗದೀಶ್ ದೂರಿದ್ದಾರೆ. ದರ್ಶನ್ ಅವರಿಗೆ ರಾಜ್ಯಾದ್ಯಂತ ಅಭಿಮಾನಿಗಳಿದ್ದಾರೆ. ಅವರಿಂದ ನನಗೆ ಮತ್ತು ನನ್ನ ಕುಟುಂಬಕ್ಕೆ ರಕ್ಷಣೆ ಬೇಕು. ನಮಗೆ ರಕ್ಷಣೆ ನೀಡಬೇಕು ಹಾಗೂ ದರ್ಶನ್ ಹಾಗೂ ರಿಷಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ವಕೀಲ ಜಗದೀಶ್ ಮನವಿ ಮಾಡಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.