Channapattana Assembly By Election Result: ಚನ್ನಪಟ್ಟಣದಲ್ಲಿ ನಿಖಿಲ್ ಕುಮಾರಸ್ವಾಮಿ ಗೆದ್ದೇಬಿಟ್ರಾ? ಸಂಭ್ರಮಾಚರಣೆ ಮಾಡುತ್ತಿರುವುದೇಕೆ? ವೈರಲ್ ಆದ ವಿಡಿಯೋನಲ್ಲಿ ಏನಿದೆ?
Channapattana Assembly By Election Result: ತೀವ್ರ ಕುತೂಹಲ ಮೂಡಿಸಿರುವ ಚನ್ನಪಟ್ಟಣ ಉಪಸಮರದಲ್ಲಿ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಗೆದ್ದೇಬಿಟ್ಟಿದ್ದಾರೆ ಎನ್ನುವ ರೀತಿಯಲ್ಲಿ ಚರ್ಚೆಯಾಗುತ್ತಿದೆ. ಏಕೆಂದರೆ ಜೆಡಿಎಸ್ ಬೆಂಬಲಿಗರು ಸಂಭ್ರಮಾಚರಣೆ ಮಾಡುತ್ತಿರುವ ವಿಡಿಯೋವೊಂದು ಭಾರಿ ವೈರಲ್ ಆಗಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ರಾಜ್ಯದಲ್ಲಿ ಬೈ ಎಲೆಕ್ಷನ್ ನಡೆದ ಸಂಡೂರು, ಶಿಗ್ಗಾವಿ ಮತ್ತು ಚನ್ನಪಟ್ಟಣಗಳ ಪೈಕಿ ಬೊಂಬೆನಾಡು ಚನ್ನಪಟ್ಟಣ ತೀವ್ರ ಕುತೂಹಲ ಮೂಡಿಸಿದೆ. ಏಕೆಂದರೆ ಅಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿದ್ದವರು ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ.
ಈಗಾಗಲೇ 2 ಚುನಾವಣೆಗಳನ್ನು ಸೋತಿರುವುದರಿಂದ ಚನ್ನಪಟ್ಟಣ ಉಪ ಚುನಾವಣೆ ನಿಖಿಲ್ ಕುಮಾರಸ್ವಾಮಿಗೆ ಅತ್ಯಂತ ಮಹತ್ವದ್ದು. ಹಾಗಾಗಿ ಮಾಜಿ ಪ್ರಧಾನಿ ದೇವೇಗೌಡ್ರು ಮತ್ತು ಹೆಚ್.ಡಿ. ಕುಮಾರಸ್ವಾಮಿ ಅಲ್ಲೇ ಠಿಕಾಣಿ ಹೂಡಿ ಪ್ರಚಾರ ಮಾಡಿದ್ದರು.
ಇನ್ನೊಂದೆಡೆ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ಪರ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಅವರ ಸಹೋದರ ಡಿಕೆ ಸುರೇಶ್ ಪ್ರಚಾರ ಮಾಡಿದ್ದರು. ಅವರಿಗೂ ಈ ಚುನಾವಣೆ ಪ್ರತಿಷ್ಠೆಯ ಪ್ರಶ್ನೆಯಾಗಿದೆ.
ನಿಖಿಲ್ ಕುಮಾರಸ್ವಾಮಿ ಅವರಿಗೆ ಚನ್ನಪಟ್ಟಣ ಚುನಾವಣೆ ರಾಜಕೀಯ ಜೀವನದ ಅಗ್ನಿಪರೀಕ್ಷೆಯಾಗಿತ್ತು. ನಿನ್ನೆಯಷ್ಟೇ ಮತದಾನ ಮುಗಿದಿದೆ. ಇವತ್ತು ಜೆಡಿಎಸ್ ಬೆಂಬಲಿಗರು ಸಂಭ್ರಮಾಚರಣೆ ಮಾಡುತ್ತಿರುವ ವಿಡಿಯೋ ಹರಿದಾಡುತ್ತಿದೆ.
ವೈರಲ್ ಆಗಿರುವ ವಿಡಿಯೋವನ್ನು ನಿಖಿಲ್ ಕುಮಾರಸ್ವಾಮಿ ಗೆದ್ದಿದ್ದಾರೆ ಎಂಬ ವಿಶ್ವಾಸದಲ್ಲಿ ಜೆಡಿಎಸ್ ಬೆಂಬಲಿಗರು ಸಂಭ್ರಮಾಚರಣೆ ತೊಡಗಿರುವ ವಿಡಿಯೋ ಎಂದು ಹೇಳಲಾಗುತ್ತಿದೆ.
ನವೆಂಬರ್ 23ಕ್ಕೆ ಉಪಚುನಾವಣೆಗಳ ಫಲಿತಾಂಶ ಹೊರಬೀಳಲಿದ್ದು ಅಂದು ಚನ್ನಪಟ್ಟಣ ನಿಖಿಲ್ ಕುಮಾರಸ್ವಾಮಿ ಮತ್ತು ಸಿಪಿ ಯೋಗೇಶ್ವರ್ ಪೈಕಿ ಯಾರಿಗೆ ಮಣೆ ಹಾಕಿದ್ದಾರೆಂಬುದು ಗೊತ್ತಾಗಲಿದೆ.