ಈ ವರ್ಷ ಬಸವನಗುಡಿಯ ಕಡಲೆಕಾಯಿ ಪರಿಷೆ ಉಚಿತ; ಇದು ಇತಿಹಾಸದಲ್ಲಿಯೇ ಮೊದಲು!

Basavanagudi Kadalekai Parishe: ಬೆಂಗಳೂರಿನ ಬಸವನಗುಡಿ ಕಡಲೆಕಾಯಿ ಪರಿಷೆಯನ್ನು ಈ ವರ್ಷ ರೈತರು ಮತ್ತು ವ್ಯಾಪಾರಿಗಳಿಗೆ ಶುಲ್ಕ ರಹಿತವಾಗಿ ನಡೆಸಲು ತೀರ್ಮಾನಿಸಲಾಗಿದೆ. ನವೆಂಬರ್ 25 ಮತ್ತು 26 ರಂದು ನಡೆಯಲಿರುವ ಈ ಪರಿಷೆಯಲ್ಲಿ ಯಾವುದೇ ಶುಲ್ಕ ವಸೂಲಿ ಮಾಡುವಂತಿಲ್ಲವೆಂದು ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದಾರೆ. 

Written by - Puttaraj K Alur | Last Updated : Nov 18, 2024, 04:50 PM IST
  • ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಬಸವನಗುಡಿಯ ಕಡಲೆಕಾಯಿ ಪರಿಷೆ ಉಚಿತ
  • ಸಚಿವ ರಾಮಲಿಂಗಾರೆಡ್ಡಿಯವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಹತ್ವದ ನಿರ್ಧಾರ
  • ಇದೇ ನವೆಂಬರ್ 25 ಮತ್ತು 26ರಂದು ಕಡಲೆಕಾಯಿ ಪರಿಷೆ ನಡೆಯಲಿದೆ
ಈ ವರ್ಷ ಬಸವನಗುಡಿಯ ಕಡಲೆಕಾಯಿ ಪರಿಷೆ ಉಚಿತ; ಇದು ಇತಿಹಾಸದಲ್ಲಿಯೇ ಮೊದಲು!  title=
ಬಸವನಗುಡಿಯ ಕಡಲೆಕಾಯಿ ಪರಿಷೆ

Basavanagudi Kadalekai Parishe: ಬೆಂಗಳೂರಿನಲ್ಲಿ ನಡೆಯುವ ಐತಿಹಾಸಿಕ ಬಸವನಗುಡಿ ಕಡಲೆಕಾಯಿ ಪರಿಷೆಯನ್ನು ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ರೈತರಿಗೆ ಹಾಗೂ ಎಲ್ಲಾ ಮಾದರಿಯ ವ್ಯಾಪಾರಿಗಳಿಗೆ ಶುಲ್ಕರಹಿತವಾಗಿ ನಡೆಸಲು ಸಚಿವ ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿಯವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಪ್ರತಿ ವರ್ಷದಂತೆ ಕೊನೆಯ ಕಾರ್ತಿಕ ಸೋಮವಾರ (ನವೆಂಬರ್‌ 25) ಬೆಳಗ್ಗೆ 10 ಗಂಟೆಗೆ ಐತಿಹಾಸಿಕ ಬಸವನಗುಡಿಯ ಶ್ರೀ ಬಸವಣ್ಣ ದೇವಾಲಯದಲ್ಲಿ ಕಡಲೆಕಾಯಿ ಪರಿಷೆಗೆ ಚಾಲನೆ ನೀಡಲಾಗುತ್ತದೆ. ಇನ್ನು ನ.25 ಮತ್ತು 26ರಂದು ಕಡಲೆಕಾಯಿ ಪರಿಷೆ ನಡೆಯಲಿದೆ ಎಂದು ತಿಳಿಸಲಾಗಿದೆ. 

ಇದನ್ನೂ ಓದಿ: BPL ಕಾರ್ಡ್‌ ಬಲಿಗೆ ಕಾಲವೇ ಉತ್ತರ ಕೊಡುತ್ತೆ-HD ಕುಮಾರಸ್ವಾಮಿ

ಕಡಲೆಕಾಯಿ ಪರಿಷೆಗೆ ರಾಜ್ಯ ಹಾಗೂ ಹೊರ ರಾಜ್ಯಗಳಿಂದ ಕಡಲೆಕಾಯಿ ಸೇರಿದಂತೆ ವಿವಿಧ ವಸ್ತುಗಳ ವ್ಯಾಪಾರ-ವಹಿವಾಟು ನಡೆಸಲಿ ರೈತರು ಮತ್ತು ವ್ಯಾಪಾರಿಗಳು ಆಗಮಿಸುತ್ತಾರೆ. ಹೀಗಾಗಿ ನ.23ರಿಂದಲೇ ರಸ್ತೆಗೆ ಬ್ಯಾರಿಕೇಡ್ ಹಾಕಿ, ದೀಪಾಲಂಕಾರ ಮಾಡಿ 5 ದಿನಗಳ ಕಾಲ ಲೈಟಿಂಗ್ ವ್ಯವಸ್ಥೆ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ.

ಎರಡು ದಿನಗಳ ಕಾಲ ನಡೆಯಲಿರುವ ಕಡಲೆಕಾಯಿ ಪರಿಷೆಯಲ್ಲಿ ಭಾಗಿಯಾಗುವ ರೈತರಿಂದ ಯಾವುದೇ ರೀತಿಯ ಶುಲ್ಕ ವಸೂಲಾತಿ ಮಾಡದಿರಲು ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಕಳೆದ ವರ್ಷ ರೈತರಿಂದ ಮತ್ತು ವ್ಯಾಪಾರಿಗಳಿಂದ ಬಲವಂತವಾಗಿ ಹಣ ವಸೂಲಿ ಮಾಡುತ್ತಿರುವ ಬಗ್ಗೆ ದೂರುಗಳು ಬಂದ ಹಿನ್ನೆಲೆ ಈ ವರ್ಷ ರೈತರು ಮತ್ತು ವ್ಯಾಪಾರಿಗಳಿಂದ ಶುಲ್ಕ ವಸೂಲಿ ಮಾಡುವಂತಿಲ್ಲವೆಂದು ಸ್ಪಷ್ಟಪಡಿಸಲಾಗಿದೆ.

ಇದನ್ನೂ ಓದಿ: ರಾಜ್ಯದ ಜನರಿಗೆ ಸರ್ಕಾರದಿಂದ ಮತ್ತೊಂದು ಬಿಗ್‌ಶಾಕ್

ಪ್ರತಿ ವರ್ಷದಂತೆ ಶುಲ್ಕ ವಸೂಲಿ ಮಾಡಲು ಟೆಂಡರ್ ಕರೆಯಲಾಗುತ್ತಿದ್ದು, ಈ ಬಾರಿ ಯಾವುದೇ ಟೆಂಡರ್ ಕರೆಯದಂತೆ ತೀರ್ಮಾನಿಸಲಾಗಿದೆ. ಬೆಂಗಳೂರು ರಾಜರ ಆಳ್ವಕೆಯ ಕಾಲದಿಂದಲೂ ಇಲ್ಲಿಗೆ ವ್ಯಾಪಾರಕ್ಕಾಗಿ ಬರುತ್ತಿದ್ದ ರೈತರಿಂದ ಶುಲ್ಕ ವಸೂಲಿ ಮಾಡಲಾಗುತ್ತಿತ್ತು. ಆದರೆ ಇದೇ ಮೊದಲ ಬಾರಿಗೆ ರೈತರಿಗೆ ಮತ್ತು ವ್ಯಾಪಾರಿಗಳಿಗೆ ಅನುಕೂಲ ಆಗುವಂತೆ ಶುಲ್ಕ ರಹಿತವಾಗಿ ಕಡಲೆಕಾಯಿ ಪರಿಷೆ ನಡೆಸಲು ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಹೀಗಾಗಿ ಕಡಲೆಕಾಯಿ ಮಾರಾಟ ಮಾಡುವವರು ಮತ್ತು ಆಟಿಕೆ ಮಾರಾಟಗಾರರಿಂದ ಶುಲ್ಕ ವಸೂಲಾತಿ ಇರುವುದಿಲ್ಲವೆಂದು ಹೇಳಲಾಗಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News