ವಿರೋಧ ಪಕ್ಷ, ರೈತ ಸಂಘಟನೆಗಳ ಮುಖಂಡರೊಂದಿಗೆ ಸಿದ್ದರಾಮಯ್ಯ ಸಮಾಲೋಚನೆ

ಕಳೆದ ವಾರ ಕೂಡ ಸಿದ್ದರಾಮಯ್ಯ, ವಿವಿಧ ಪಕ್ಷಗಳ ನಾಯಕರು, ವಿವಿಧ ಸಮುದಾಯಗಳ ಮುಖಂಡರು, ರೈತ, ಕಾರ್ಮಿಕ ಮತ್ತಿತರ ಸಂಘಟನೆಗಳ ಪದಾಧಿಕಾರಿಗಳೊಂದಿಗೆ ಸುದೀರ್ಘವಾಗಿ ಸಮಾಲೋಚನೆ ನಡೆಸಿ ಈಗಾಗಲೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದರು.

Last Updated : May 5, 2020, 02:39 PM IST
ವಿರೋಧ ಪಕ್ಷ, ರೈತ ಸಂಘಟನೆಗಳ ಮುಖಂಡರೊಂದಿಗೆ ಸಿದ್ದರಾಮಯ್ಯ ಸಮಾಲೋಚನೆ title=

ಬೆಂಗಳೂರು: ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ  ಸಿದ್ದರಾಮಯ್ಯ (Siddaramaiah) ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ವಿರೋಧ ಪಕ್ಷಗಳು, ರೈತ ಸಂಘಟನೆಗಳ ಮುಖಂಡರ ಸಭೆಯಲ್ಲಿ ಸರ್ಕಾರಕ್ಕೆ ಸಲ್ಲಿಸಬೇಕಾದ ಹಕ್ಕೊತ್ತಾಯಗಳ ಪತ್ರದ ಬಗ್ಗೆ ಚರ್ಚೆ ನಡೆಸಲಾಯಿತು. 

ಪ್ರತಿಪಕ್ಷಗಳ ಮುಖಂಡರನ್ನು ಒಳಗೊಂಡ ನಿಯೋಗ ಗುರುವಾರ ಅಥವಾ ಶುಕ್ರವಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ (BS Yediyurappa)  ಅವರನ್ನು ಭೇಟಿಯಾಗಿ ಹಕ್ಕೊತ್ತಾಯಗಳ ಪತ್ರ ಸಲ್ಲಿಸಲಿದೆ. 

ಪತ್ರದಲ್ಲಿ ಇರಬೇಕಾದ ಅಂಶಗಳ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚೆ ನಡೆಯಿತು. ಕಾಂಗ್ರೆಸ್, ಜೆಡಿಎಸ್, ಸಿಪಿಐ, ಸಿಪಿಐಂ, ಲೋಕ ತಾಂತ್ರಿಕ ಜನತಾದಳ, ರೈತ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು.

ರೈತರು, ಕಾರ್ಮಿಕರಿಗೆ ನೆರವಾಗುವಂತೆ ಒತ್ತಾಯಿಸಿ ಸಿಎಂಗೆ ಸಿದ್ದರಾಮಯ್ಯ ಪತ್ರ

ಕಳೆದ ವಾರ ಕೂಡ ಸಿದ್ದರಾಮಯ್ಯ, ವಿವಿಧ ಪಕ್ಷಗಳ ನಾಯಕರು, ವಿವಿಧ ಸಮುದಾಯಗಳ ಮುಖಂಡರು,  ರೈತರು (Farmers), ಕಾರ್ಮಿಕ ಮತ್ತಿತರ ಸಂಘಟನೆಗಳ ಪದಾಧಿಕಾರಿಗಳೊಂದಿಗೆ ಸುದೀರ್ಘವಾಗಿ ಸಮಾಲೋಚನೆ ನಡೆಸಿ ಈಗಾಗಲೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದರು.

Trending News