ಚೆಸ್ ವಿಶ್ವ ಚಾಂಪಿಯನ್ ಗುಕೇಶ್ ಅವರಿಗೆ ಸರ್ಕಾರದ ಪರವಾಗಿ ಅಭಿನಂದನೆ ಸಲ್ಲಿಸಿದ ಸಚಿವ ಕೃಷ್ಣ ಬೈರೇಗೌಡ

ಸಿಂಗಾರಪುರದಲ್ಲಿ ನಡೆದ ವಿಶ್ವ ಚೆಸ್ ಚಾಂಪಿಯನ್‌ಶಿಪ್ ನಲ್ಲಿ ಅಗ್ರ ಶ್ರೇಯಾಂಕಿತ ಚೀನಾದ ಡಿಂಗ್ ಲಿರೆನ್ ಅವರನ್ನು ಸೋಲಿಸಿ ವಿಶ್ವ ಚೆಸ್ ಚಾಂಪಿಯನ್‌ಶಿಪ್ ಪಟ್ಟವನ್ನು ಮುಡಿಗೇರಿಸಿಕೊಂಡ ಭಾರತದ ಗ್ರ್ಯಾಂಡ್ ಮಾಸ್ಟರ್ ಡಿ. ಗುಕೇಶ್ ಅವರಿಗೆ ಸಚಿವ ಕೃಷ್ಣ ಬೈರೇಗೌಡ ಅವರು ಸರ್ಕಾರದ ಪರವಾಗಿ ಅಭಿನಂದಿಸಿದರು.

Written by - Prashobh Devanahalli | Last Updated : Dec 13, 2024, 08:25 PM IST
    • ಡಿ. ಗುಕೇಶ್ ಅವರಿಗೆ ಸಚಿವ ಕೃಷ್ಣ ಬೈರೇಗೌಡ ಅವರು ಸರ್ಕಾರದ ಪರವಾಗಿ ಅಭಿನಂದಿಸಿದರು.
    • ಯು.ಟಿ. ಖಾದರ್ ನೂತನ ಚೆಸ್ ಚಾಂಪಿಯನ್ ಗುಕೇಶ್ ಅವರ ಸಾಧನೆ ಬಗ್ಗೆ ಗಮನ ಸೆಳೆದರು
    • ವಿಶ್ವನಾಥನ್ ಆನಂದ್ ನಂತರ ಈ ಸಾಧನೆ ಮಾಡಿದ ಮೊದಲ ಚೆಸ್‌ ಕ್ರೀಡಾಪಟು
ಚೆಸ್ ವಿಶ್ವ ಚಾಂಪಿಯನ್ ಗುಕೇಶ್ ಅವರಿಗೆ ಸರ್ಕಾರದ ಪರವಾಗಿ  ಅಭಿನಂದನೆ ಸಲ್ಲಿಸಿದ ಸಚಿವ ಕೃಷ್ಣ ಬೈರೇಗೌಡ title=
Minister Krishna Byre Gowda

ಬೆಳಗಾವಿ: ಸಿಂಗಾರಪುರದಲ್ಲಿ ನಡೆದ ವಿಶ್ವ ಚೆಸ್ ಚಾಂಪಿಯನ್‌ಶಿಪ್ ನಲ್ಲಿ ಅಗ್ರ ಶ್ರೇಯಾಂಕಿತ ಚೀನಾದ ಡಿಂಗ್ ಲಿರೆನ್ ಅವರನ್ನು ಸೋಲಿಸಿ ವಿಶ್ವ ಚೆಸ್ ಚಾಂಪಿಯನ್‌ಶಿಪ್ ಪಟ್ಟವನ್ನು ಮುಡಿಗೇರಿಸಿಕೊಂಡ ಭಾರತದ ಗ್ರ್ಯಾಂಡ್ ಮಾಸ್ಟರ್ ಡಿ. ಗುಕೇಶ್ ಅವರಿಗೆ ಸಚಿವ ಕೃಷ್ಣ ಬೈರೇಗೌಡ ಅವರು ಸರ್ಕಾರದ ಪರವಾಗಿ ಅಭಿನಂದಿಸಿದರು.

ಇದನ್ನೂ ಓದಿ: ನೀವು ಎಂದಾದರೂ ಚಳಿಗಾಲದಲ್ಲಿ ಸಾಸಿವೆ ಎಣ್ಣೆ ಬಳಸಿದ್ದಿರಾ?..ಇಲ್ಲಿವೆ 7 ಅದ್ಬುತ ಪ್ರಯೋಜನಗಳು..!

ಶುಕ್ರವಾರ ವಿಧಾನಸಭೆ ಕಲಾಪದ ಕೊನೆಯಲ್ಲಿ ಸ್ಪೀಕರ್ ಯು.ಟಿ. ಖಾದರ್ ಅವರು ನೂತನ ಚೆಸ್ ಚಾಂಪಿಯನ್ ಗುಕೇಶ್ ಅವರ ಸಾಧನೆಯ ಬಗ್ಗೆ ಸದನದ ಗಮನ ಸೆಳೆದರು. ಅಲ್ಲದೆ, ಯುವ ಚೆಸ್ ಕ್ರೀಡಾಪಟುವನ್ನು ಅಭಿನಂದಿಸಿದರು. ಈ ವೇಳೆ ಮಧ್ಯಪ್ರವೇಶಿಸಿದ ಸಚಿವ ಕೃಷ್ಣ ಬೈರೇಗೌಡ ಅವರು, "ಗುರುವಾರ ನಡೆದ ವಿಶ್ವ ಚೆಸ್ ಚಾಂಪಿಯನ್‌ಶಿಪ್‌ನ 14ನೇ ಮತ್ತು ಅಂತಿಮ ಸುತ್ತಿನ ಪಂದ್ಯದಲ್ಲಿ ಭಾರತದ ಗ್ರ್ಯಾಂಡ್‌ಮಾಸ್ಟರ್ ಡಿ.ಗುಕೇಶ್ ಅವರು ಚೀನಾದ ಡಿಂಗ್ ಲಿರೆನ್ ಅವರನ್ನು ಸೋಲಿಸುವ ಮೂಲಕ ಚೆಸ್ ಚಾಂಪಿಯನ್‌ಶಿಪ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದ್ದಾರೆ. 18ನೇ ವಯಸ್ಸಿಗೆ ಚಾಂಪಿಯನ್ ಆಗುವ ಮೂಲಕ ಚೆಸ್ ಇತಿಹಾಸದಲ್ಲಿ ಈ ಸಾಧನೆ ಮಾಡಿದ ಅತ್ಯಂತ ಕಿರಿಯ ಚೆಸ್ ಪಟು ಎಂಬ ದಾಖಲೆಯನ್ನು ಸೃಷ್ಟಿಸಿದ್ದಾರೆ".

ಇದನ್ನೂ ಓದಿ: Shani Sade Sati: ಶನಿ ಸಂಕ್ರಮಣ.. 2025ರಲ್ಲಿ ಈ 5 ರಾಶಿಯವರಿಗೆ ಸಿಗಲಿದೆ ಶನಿಯಿಂದ ಮುಕ್ತಿ..! 

"ಅಲ್ಲದೆ, ವಿಶ್ವನಾಥನ್ ಆನಂದ್ ನಂತರ ಈ ಸಾಧನೆ ಮಾಡಿದ ಮೊದಲ ಚೆಸ್‌ ಕ್ರೀಡಾಪಟು ಗುಕೇಶ್ ಎಂಬುದು ವಿಶೇಷ. ಅವರ ಈ ಸಾಧನೆ ದೇಶಕ್ಕೆ ಹೆಮ್ಮೆ ನೀಡುವಂತದ್ದು. ದೇಶದಲ್ಲಿ ಚೆಸ್ ಸೇರಿದಂತೆ ಇತರೆ ಕ್ರೀಡೆಗಳಿಗೆ ಮತ್ತಷ್ಟು ಪ್ರೋತ್ಸಾಹ ನೀಡಬೇಕಿದೆ. ಗುಕೇಶ್ ಅವರಿಗೆ ಸರ್ಕಾರದ ಪರವಾಗಿ ಅಭಿನಂದನೆಗಳನ್ನು ಸಲ್ಲಿಸಲು ನನಗೆ ಸಂತೋಷವಾಗುತ್ತಿದೆ" ಎಂದು ಹರ್ಷ ವ್ಯಕ್ತಪಡಿಸಿದರು.

 

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

Trending News