ಬೆಂಗಳೂರು : ಕೆ-ಸೆಟ್-24 ಪರೀಕ್ಷೆಗೆ ಸಂಬಂಧಿಸಿದಂತೆ 41 ವಿಷಯಗಳ ತಾತ್ಕಾಲಿಕ ಅಂಕಪಟ್ಟಿ ಪ್ರಕಟವಾಗಿದೆ. ಅಭ್ಯರ್ಥಿಗಳು ಪಡೆದ ಅಂಕಗಳ ತಾತ್ಕಾಲಿಕ ಪಟ್ಟಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಬಿಡುಗಡೆ ಮಾಡಿದೆ. ಫಲಿತಾಂಶವನ್ನು ಕೆಇಎ ವೆಬ್ ಸೈಟ್ ನಲ್ಲಿ ಫಲಿತಾಂಶ ಪ್ರಕಟ ಮಾಡಲಾಗಿದೆ. ಅಭ್ಯರ್ಥಿಗಳು ಈ ವೆಬ್ ಸೈಟ್ ಗೆ ಲಾಗಿನ್ ಆಗುವ ಮೂಲಕ ಫಲಿತಾಂಶವನ್ನು ಚೆಕ್ ಮಾಡಬಹುದು.
ಕೆಸೆಟ್ 2024 ಪ್ರಾವಿಷನಲ್ ರಿಸಲ್ಟ್ ಚೆಕ್ ಹೇಗೆ ಮಾಡೋದು? :
ವಿಷಯವಾರು ತಾತ್ಕಾಲಿಕ ಅಂಕಪಟ್ಟಿ ಫಲಿತಾಂಶಕ್ಕಾಗಿ https://cetonline.karnataka.gov.in/kea/kset2024 ವೆಬ್‌ಪೇಜ್‌ನಲ್ಲಿ ‘KSET 2024 ಫಲಿತಾಂಶ ಪಟ್ಟಿ’ ಎಂದಿರುವ ಲಿಂಕ್ ಕ್ಲಿಕ್ ಮಾಡಬೇಕು.
ಇದನ್ನೂ ಓದಿ : Amazonನಲ್ಲಿ ಉದ್ಯೋಗ ಗಿಟ್ಟಿಸಿಕೊಳ್ಳಲು ಬಹು ದೊಡ್ಡ ಅವಕಾಶ !ಕಂಪನಿಯಲ್ಲಿ ಸೃಷ್ಟಿಯಾಗಿದೆ 20 ಲಕ್ಷ ಹುದ್ದೆ
ಫಲಿತಾಂಶ ಚೆಕ ಮಾಡುವ ಹಂತ ಹಣತದ ವಿಧಾನ:
೧. ಕೆಇಎ ವೆಬ್‌ಸೈಟ್ https://cetonline.karnataka.gov.in/kea/ ಗೆ ಭೇಟಿ ನೀಡಿ.
೨. ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆ ( ಕೆಸೆಟ್ - 2024) ಆಯ್ಕೆ ಮಾಡಿ ಕ್ಲಿಕ್ ಮಾಡಿ.
೩. ತಾತ್ಕಾಲಿಕ ಫಲಿತಾಂಶ ಚೆಕ್ ಮಾಡಲು ’ KSET 2024 ಪ್ರಾವಿಶನಲ್ ಫಲಿತಾಂಶ ಲಿಂಕ್’ ಕ್ಲಿಕ್ ಮಾಡಿ.
೪.ಅಪ್ಲಿಕೇಶನ್ ನಂಬರ್, ಜನ್ಮ ದಿನಾಂಕ ಮಾಹಿತಿ ನೀಡಿ.
೫. Submit ಕೊಟ್ಟರೆ ತಾತ್ಕಾಲಿಕ ಫಲಿತಾಂಶ ಕಾಣಿಸುತ್ತದೆ.
ಆಕ್ಷೇಪಣೆ ಸಲ್ಲಿಸಲೂ ಇದೆ ಅವಕಾಶ :
ಈ ತಾತ್ಕಾಲಿಕ ಅಂಕಪಟ್ಟಿಗೆ ಆಕ್ಷೇಪಣೆಯನ್ನು ಸಲ್ಲಿಸಲು ಕೂಡಾ ಕೆಇಎ ಲಿಂಕ್ ಬಿಡುಗಡೆ ಮಾಡಿದೆ. ಅಂಕಪಟ್ಟಿಗೆ ಆಕ್ಷೇಪಣೆಗಳಿದ್ದಲ್ಲಿ ಒದಗಿಸಲಾದ ಲಿಂಕ್ ಮೂಲಕ ನಾಳೆಯೊಳಗೆ ಅಂದರೆ 19-12-2024 ಮಧ್ಯಾಹ್ನ 12.30 ರೊಳಗೆ ಪೂರಕ ದಾಖಲೆಗಳೊಂದಿಗೆ ಆಕ್ಷೇಪಣೆ ಸಲ್ಲಿಸಬಹುದಾಗಿದೆ. ಈ ಆಕ್ಷೇಪಣೆಗಳನ್ನು ಪರಿಶೀಲಿಸಿದ ನಂತರದಲ್ಲಿ ವಿಷಯವಾರು ಅಂತಿಮ ಫಲಿತಾಂಶವನ್ನು ಬಿಡುಗಡೆ ಮಾಡಲಾಗುತ್ತದೆ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಈ ಪರೀಕ್ಷೆಯ ಅಂತಿಮ ಕೀ ಉತ್ತರಗಳನ್ನು ಡಿಸೆಂಬರ್ 13 ರಂದು ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಈ ಅಂತಿಮ ಕೀ ಉತ್ತರಗಳ ಆಧಾರದ ಮೇಲೆ ಇದೀಗ ತಾತ್ಕಾಲಿಕ ಅಂಕಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.