Weight Loss Drinks: ತೂಕ ಇಳಿಕೆ ಅದರಲ್ಲೂ ಹೊಟ್ಟೆಯಲ್ಲಿ ಶೇಖರವಾಗಿರುವ ಕಠಿಣ ಫ್ಯಾಟ್ ಕರಗಿಸುವುದು ತುಂಬಾ ಕಷ್ಟ.
Belly Fat Burning Drinks: ತೂಕ ಇಳಿಕೆಗಾಗಿ ನಾನಾ ಕಸರತ್ತು ಮಾಡಿದರೂ ನಿರೀಕ್ಷಿತ ಫಲಿತಾಂಶ ಸಿಗದೆ ಪರಿತಪಿಸುವ ಮಂದಿಯೇ ಹೆಚ್ಚು. ಆದರೆ, ನಿತ್ಯ ಕೆಲವು ಪಾನೀಯಗಳನ್ನು ಕುಡಿಯುವುದರಿಂದ ನೈಸರ್ಗಿಕವಾಗಿ ತೂಕ ಇಳಿಸಿ, ಬೆಲ್ಲಿ ಫ್ಯಾಟ್ ಕೂಡ ಕರಗಿಸಬಹುದು.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಆರೋಗ್ಯಕರ ತೂಕ ಇಳಿಕೆ ಹಾಗೂ ಜಿಡ್ಡುಗಟ್ಟಿರುವ ಹೊಟ್ಟೆಯ ಫ್ಯಾಟ್ ಕರಗಿಸಲು ಬೆಳಿಗ್ಗೆ ಹೊತ್ತು ಕೆಲವು ಪಾನೀಯಗಳನ್ನು ಕುಡಿಯುವುದು ಬಹಳ ಪ್ರಯೋಜನಕಾರಿ ಆಗಿದೆ.
ನಿತ್ಯ ಖಾಲಿ ಹೊಟ್ಟೆಯಲ್ಲಿ ಈ ಚಮತ್ಕಾರಿ ಪಾನೀಯಗಳನ್ನು ಕುಡಿಯುವುದರಿಂದ ಡೊಳ್ಳು ಹೊಟ್ಟೆ ಬೆಣ್ಣೆಯಂತೆ ಕರಗಿ ಚಪ್ಪಟೆಯಾಗುವುದರಲ್ಲಿ ಅನುಮಾನವೇ ಇಲ್ಲ ಎನ್ನಲಾಗುತ್ತದೆ. ಅಂತಹ ಮಾರ್ನಿಂಗ್ ಡ್ರಿಂಕ್ಸ್ ಗಳೆಂದರೆ...
ತೂಕ ಇಳಿಕೆ ಪಾನೀಯಗಳ ವಿಷಯಕ್ಕೆ ಬಂದರೆ ಮೊದಲು ನೆನಪಾಗುವುದೇ ಲೆಮನ್ ವಾಟರ್. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಉಗುರು ಬೆಚ್ಚಗಿನ ನೀರಿನಲ್ಲಿ ನಿಂಬೆ ರಸ ಬೆರೆಸಿ ಕುಡಿದರೆ ಎಂತಹ ಕಠಿಣ ಫ್ಯಾಟ್ ಆದರೂ ಸುಲಭವಾಗಿ ಕರಗುತ್ತದೆ.
ಗ್ರೀನ್ ಟೀಯಲ್ಲಿ ಉತ್ಕರ್ಷಣ ನಿರೋಧಕಗಳು ಹೇರಳವಾಗಿದ್ದು ಇದು ದೇಹದಲ್ಲಿ ಚಯಾಪಚಯವನ್ನು ಹೆಚ್ಚಿಸಲು ಜೊತೆಗೆ ಹೊಟ್ಟೆಯ ಸುತ್ತಲೂ ಶೇಖರಗೊಂಡಿರುವ ಕೊಬ್ಬನ್ನು ಸುಡಲು ಪರಿಣಾಮಕಾರಿ ಆಗಿದೆ.
ಉರಿಯೂತ ಲಕ್ಷಣಗಳಿಂದ ಸಮೃದ್ಧವಾಗಿರುವ ಶುಂಠಿಯಿಂದ ಟೀ ತಯಾರಿಸಿ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸವಿದರೆ ಇದು ಜೀರ್ಣಕ್ರಿಯೆಯನ್ನು ಸುಧಾರಿಸಿ, ಹೊಟ್ಟೆಯ ಕೊಬ್ಬನ್ನು ಬೆಣ್ಣೆಯಂತೆ ಕರಗಿಸುತ್ತದೆ.
ದಿನವಿಡೀ ಸೌತೆಕಾಯಿ ಪುದೀನ ಮಿಶ್ರಿತ ನೀರನ್ನು ಕುಡಿಯುವುದರಿಂದ ಇದು ದೇಹವನ್ನು ಡಿಟಾಕ್ಸ್ ಮಾಡಿ ಬೆಲ್ಲಿ ಫ್ಯಾಟ್ ಕರಗಿಸಲು ಪರಿಣಾಮಕಾರಿ ಔಷಧಿಯಾಗಿ ಕಾರ್ಯನಿರ್ವಹಿಸುತ್ತದೆ.
ನಿತ್ಯ ಒಂದು ಲೋಟ ನೀರಿನಲ್ಲಿ ಒಂದೆರಡು ಸ್ಪೂನ್ ಆಪಲ್ ಸೈಡರ್ ವಿನೆಗರ್ ಮಿಶ್ರಣ ಮಾಡಿ ಕುಡಿಯುವುದರಿಂದ ಇದು ಜೀರ್ಣಕ್ರಿಯೆಯನ್ನು ಸುಧಾರಿಸಿ ತೂಕ ನಷ್ಟವನ್ನು ಉತ್ತೇಜಿಸುತ್ತದೆ. ಜೊತೆಗೆ ಜಿಡ್ಡುಗಟ್ಟಿದ ಕೊಬ್ಬನ್ನು ಕರಗಿಸಲು ಕೂಡ ಪರಿಣಾಮಕಾರಿ ಆಗಿದೆ.
ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.