ಪ್ರತಿಪಕ್ಷಗಳು ಹಗಲುಗನಸು ಬಿಡಲಿ, 2023ರ ನಂತರವೂ ನಮ್ಮದೇ ಸರ್ಕಾರ: ಡಾ. ಅಶ್ವತ್ಥನಾರಾಯಣ

ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ. ಸರ್ಕಾರ ಉರುಳಿಸಿ ಅಧಿಕಾರಕ್ಕೆ ಬರುವ ಬಗ್ಗೆ ಪ್ರತಿಪಕ್ಷಗಳು ಹಗಲುಗನಸು ಕಾಣುವುದನ್ನು ಬಿಡಲಿ.

Last Updated : May 30, 2020, 07:30 AM IST
ಪ್ರತಿಪಕ್ಷಗಳು ಹಗಲುಗನಸು ಬಿಡಲಿ, 2023ರ ನಂತರವೂ ನಮ್ಮದೇ ಸರ್ಕಾರ: ಡಾ. ಅಶ್ವತ್ಥನಾರಾಯಣ title=

ರಾಮನಗರ: ಬಿಜೆಪಿಯಲ್ಲಿ ಮತ್ತೆ ಭಿನ್ನಮತ ಮೂಡಿದೆ ಎಂಬ ಊಹಾಪೋಹಗಳ ಕುರಿತು ಸ್ಪಷ್ಟನೆ ನೀಡಿರುವ ಉಪಮುಖ್ಯಮಂತ್ರಿ ಡಾ.ಸಿ.ಎನ್ ಅಶ್ಬತ್ಥನಾರಾಯಣ (Dr CN Ashwathnarayan) ನಮ್ಮಲ್ಲಿ ಯಾವುದೇ ಭಿನ್ನಮತ ಇಲ್ಲ. ಸರ್ಕಾರ ಉರುಳುವ ಬಗ್ಗೆ ಪ್ರತಿಪಕ್ಷಗಳು ಹಗಲುಗನಸು ಕಾಣುವುದನ್ನು ಮೊದಲು ಬಿಡಲಿ. 2023ರವರೆಗೆ ಮಾತ್ರವಲ್ಲ, 2023ರ ನಂತರವೂ ನಮ್ಮದೇ ಸರ್ಕಾರ  ಅಧಿಕಾರಕ್ಕೆ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಶುಕ್ರವಾರ ರಾಮನಗರದ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಡಾ. ಸಿ.ಎನ್. ಅಶ್ವತ್ಥನಾರಾಯಣ ನಮ್ಮ ಪಕ್ಷದಲ್ಲಿ ಯಾವುದೇ ಭಿನ್ನಮತೀಯ ಚಟುವಟಿಕೆ ನಡೆಯುತ್ತಿಲ್ಲ. ಪಕ್ಷದ  ನಾಯಕರು, ಸದಸ್ಯರು ಎಲ್ಲರೂ ಒಟ್ಟಿಗೆ ಸೇರುವುದು ತಪ್ಪಲ್ಲ. ಎಲ್ಲರೂ ಶಿಸ್ತಿನ ಸಿಪಾಯಿಗಳು, ಯಾರೂ ಯಾವುದೇ ಭಿನ್ನಾಭಿಪ್ರಾಯದ ಹೇಳಿಕೆ ನೀಡಿಲ್ಲ.  

ರಾಜ್ಯದಲ್ಲಿ ನಾಯಕತ್ವ ಬದಲಾವಣೆಗಳ ಬಗ್ಗೆ ಕೇಳಿಬರುತ್ತಿರುವ ಚರ್ಚೆಯ ಬಗ್ಗೆ ಪ್ರತಿಕ್ರಿಯಿಸಿದ ಡಿಸಿಎಂ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ. ಸರ್ಕಾರ ಉರುಳಿಸಿ ಅಧಿಕಾರಕ್ಕೆ ಬರುವ ಬಗ್ಗೆ ಪ್ರತಿಪಕ್ಷಗಳು ಹಗಲುಗನಸು ಕಾಣುವುದನ್ನು ಬಿಡಲಿ ಎಂದು ಖಡಕ್ ಆಗಿ ನುಡಿದರು.
 

Trending News