'ಸರಳ ಶೈಲಿಯಲ್ಲಿ ವಿವಾಹವಾಗುವ ಪದ್ದತಿಯನ್ನು ಎಲ್ಲರೂ ಅಳವಡಿಸಿಕೊಳ್ಳಬೇಕು'

ಮನುಷ್ಯ ಹುಟ್ಟುವಾಗ ವಿಶ್ವಮಾನವನಾಗಿದ್ದು, ಜಾತಿಧರ್ಮಗಳ ಬಂಧನದದಲ್ಲಿ ಸಿಲುಕಿ ಅಲ್ಪಮಾನವನಾಗುತ್ತಾನೆ. ಆದ್ದರಿಂದ ವಿಶ್ವಮಾನವರಾಗುವ ಮೂಲಕ ಸಮಾಜಕ್ಕೆ ಕೊಡುಗೆ ನೀಡಬೇಕಾಗಿದೆ. ಹೆಣ್ಣುಮಕ್ಕಳಿಗೆ ಶಕ್ತಿತುಂಬುವ ಗ್ಯಾರಂಟಿ ಯೋಜನೆಗಳನ್ನು ಸರ್ಕಾರ ಯಶಸ್ವಿಯಾಗಿ ಜಾರಿಗೊಳಿಸಿದೆ. 

Written by - Manjunath N | Last Updated : Jan 12, 2025, 08:14 PM IST
  • ಮನುಷ್ಯ ಹುಟ್ಟುವಾಗ ವಿಶ್ವಮಾನವನಾಗಿದ್ದು, ಜಾತಿಧರ್ಮಗಳ ಬಂಧನದದಲ್ಲಿ ಸಿಲುಕಿ ಅಲ್ಪಮಾನವನಾಗುತ್ತಾನೆ.
  • ಆದ್ದರಿಂದ ವಿಶ್ವಮಾನವರಾಗುವ ಮೂಲಕ ಸಮಾಜಕ್ಕೆ ಕೊಡುಗೆ ನೀಡಬೇಕಾಗಿದೆ.
  • ಹೆಣ್ಣುಮಕ್ಕಳಿಗೆ ಶಕ್ತಿತುಂಬುವ ಗ್ಯಾರಂಟಿ ಯೋಜನೆಗಳನ್ನು ಸರ್ಕಾರ ಯಶಸ್ವಿಯಾಗಿ ಜಾರಿಗೊಳಿಸಿದೆ.
'ಸರಳ ಶೈಲಿಯಲ್ಲಿ ವಿವಾಹವಾಗುವ ಪದ್ದತಿಯನ್ನು ಎಲ್ಲರೂ ಅಳವಡಿಸಿಕೊಳ್ಳಬೇಕು' title=

ವಿಜಯನಗರ: ಬಸವಣ್ಣನವರ ಕಾಲದಲ್ಲಿಯೇ ಅಂತರ್ಜಾತಿ ವಿವಾಹ ಪದ್ಧತಿ ಪ್ರಚಲಿತದಲ್ಲಿತ್ತು. ಅಂತರ್ಜಾತಿ ವಿವಾಹಗಳಿಗೆ ಹೆಚ್ಚಿನ ಪ್ರೋತ್ಸಾಹ ದೊರೆಯಬೇಕು. ಇದರಿಂದಾಗಿ ಸಮಾಜದಲ್ಲಿನ ಜಾತಿ ವ್ಯವಸ್ಥೆ ಅಳಿದು ಸಮಸಮಾಜ ನಿರ್ಮಾಣ ಸಾಧ್ಯವಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಅವರು ವಿಜಯನಗರ ಜಿಲ್ಲೆಯಲ್ಲಿ ಆಯೋಜಿಸಿದ್ದ ಸರ್ವ ಧರ್ಮಗಳ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.

ಸರ್ವಧರ್ಮಗಳ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಹೊಸ ಜೀವನಕ್ಕೆ ಕಾಲಿಟ್ಟಿರುವ ವಧು - ವರರಿಗೆ ಶುಭ ಹಾರೈಕೆಗಳು. ವಿವಾಹದ ಖರ್ಚು ವೆಚ್ಚಗಳನ್ನು ಭರಿಸಲಾಗದ ಬಡಕುಟುಂಬಗಳಿಗೆ ಸಾಮೂಹಿಕ ವಿವಾಹ ವರದಾನವಾಗಿದೆ. ಸರಳ ಶೈಲಿಯಲ್ಲಿ ವಿವಾಹವಾಗುವ ಪದ್ದತಿಯನ್ನು ಎಲ್ಲರೂ ಅಳವಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.

ಇದನ್ನೂ ಓದಿ: ಹುಬ್ಬಳ್ಳಿಯಿಂದ ಬಾಲಿವುಡ್ ವರೆಗೆ..ಬೆಳ್ಳಿ ಪರದೆಯ ಮೇಲೆ ಮಿಂಚಿ ಮರೆಯಾದ ಈ ಶ್ರೇಷ್ಠ ನಟಿ..!

ಜಾತ್ಯತೀತ ತತ್ವವನ್ನು ನಮ್ಮ ಸಂವಿಧಾನ ಬೋಧಿಸಿದೆ. ಇದೇ ಆಶಯವನ್ನು ವ್ಯಕ್ತಪಡಿಸಿದ ಬಸವಣ್ಣವರು, ಜಾತಿ ಆಧಾರಿತ ಸಮಾಜ ವ್ಯವಸ್ಥೆ ಸಾಧುವಲ್ಲ ಎಂದು ಪ್ರತಿಪಾದಿಸಿದ್ದರು. ‘ದಯವೇ ಧರ್ಮದ ಮೂಲವಯ್ಯ’ ಎಂದು ನುಡಿದು, ಹಲವು ಉದಾತ್ತ ತತ್ವವನ್ನು ಬೋಧಿಸಿದ ಬಸವೇಶ್ವರರನ್ನು ಸರ್ಕಾರ ‘ಸಾಂಸ್ಕೃತಿಕ ನಾಯಕ’ ಎಂದು ಘೋಷಿಸಿದೆ.

ಮನುಷ್ಯ ಹುಟ್ಟುವಾಗ ವಿಶ್ವಮಾನವನಾಗಿದ್ದು, ಜಾತಿಧರ್ಮಗಳ ಬಂಧನದದಲ್ಲಿ ಸಿಲುಕಿ ಅಲ್ಪಮಾನವನಾಗುತ್ತಾನೆ. ಆದ್ದರಿಂದ ವಿಶ್ವಮಾನವರಾಗುವ ಮೂಲಕ ಸಮಾಜಕ್ಕೆ ಕೊಡುಗೆ ನೀಡಬೇಕಾಗಿದೆ. ಹೆಣ್ಣುಮಕ್ಕಳಿಗೆ ಶಕ್ತಿತುಂಬುವ ಗ್ಯಾರಂಟಿ ಯೋಜನೆಗಳನ್ನು ಸರ್ಕಾರ ಯಶಸ್ವಿಯಾಗಿ ಜಾರಿಗೊಳಿಸಿದೆ. ಇಂದು ವಿವಾಹ ಬಂಧನಕ್ಕೊಳಗಾದ ಮಹಿಳೆಯರಿಗೂ ಸರ್ಕಾರದ ಗ್ಯಾರಂಟಿಗಳು ತಲುಪವಂತಾಗಬೇಕು.

ಆರ್ಥಿಕವಾಗಿ ದುರ್ಬಲರಾಗಿರುವ ಜನರ ಕೊಂಡುಕೊಳ್ಳುವ ಶಕ್ತಿ ಹೆಚ್ಚಬೇಕು. ಅಂತೆಯೇ ಶ್ರೀಮಂತವರ್ಗದವರೂ ಕೂಡ ಬಡವರ ಸಹಾಯಕ್ಕೆ ಮುಂದಾಗಬೇಕು, ಈ ಮೂಲಕ ಸಮಾಜದ ಋಣ ತೀರಿಸಲು ಪ್ರಯತ್ನಿಸಬೇಕು. ಡಾ. ಅಂಬೇಡ್ಕರ್ ಅವರು  ನೀಡಿರುವ ಸಂವಿಧಾನ ಎಲ್ಲರಿಗೂ ಸಮಾನ ಹಕ್ಕು ಹಾಗೂ ಸಮಾನ ಅವಕಾಶಗಳನ್ನು ನೀಡಿದೆ. ಸಂವಿಧಾನದ ಆಶಯಗಳನ್ನು ಪ್ರತಿಯೊಬ್ಬರೂ ಅರಿತಿರಬೇಕು. ಸಂವಿಧಾನ ನೀಡಿರುವ ಹಕ್ಕು ಬಾಧ್ಯತೆಗಳ ಬಗ್ಗೆ ಅರಿವು ಪಡೆದು, ಜವಾಬ್ದಾರಿಯುತ ನಾಗರಿಕನಾಗುವುದು ಅವಶ್ಯವಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

 

Trending News