'ವಿದ್ಯಾಪತಿ' ಆಗಮನಕ್ಕೆ ಮುಹೂರ್ತ ಫಿಕ್ಸ್: 'ಟಾಕ್ಸಿಕ್' ಬರಬೇಕಿದ್ದ ದಿನದಂದೇ ಬರ್ತಿದೆ ನಾಗಭೂಷಣ್ ಸಿನಿಮಾ

ಕಳೆದ ಸಂಕ್ರಾಂತಿ ಹಬ್ಬಕ್ಕೆ ವಿದ್ಯಾಪತಿ ಸಿನಿಮಾ ಅನೌನ್ಸ್ ಮಾಡಿದ್ದ ಡಾಲಿ ಧನಂಜಯ್ ಈ ಬಾರಿಯ ಸುಗ್ಗಿ ಹಬ್ಬಕ್ಕೆ  ವಿದ್ಯಾಪತಿ ಆಗಮನದ ಬಗ್ಗೆ ಮಾಹಿತಿ ಕೊಟ್ಟಿದ್ದಾರೆ. ವಿಶೇಷವಾದ ವಿಡಿಯೋ ಮೂಲಕವೇ ವಿದ್ಯಾಪತಿ ಬಿಡುಗಡೆ ದಿನಾಂಕ ಘೋಷಣೆ ಮಾಡಿದ್ದಾರೆ.

Written by - Bhavishya Shetty | Last Updated : Jan 14, 2025, 06:24 PM IST
    • ನಾಡಿನ ಎಲ್ಲೆಡೆ ಸಂಕ್ರಾಂತಿ ಸಂಭ್ರಮ ಕಳೆಗಟ್ಟಿದೆ
    • ಕಳೆದ ಸಂಕ್ರಾಂತಿ ಹಬ್ಬಕ್ಕೆ ವಿದ್ಯಾಪತಿ ಸಿನಿಮಾ ಅನೌನ್ಸ್ ಮಾಡಿದ್ದ ಡಾಲಿ ಧನಂಜಯ್
    • ವಿಶೇಷವಾದ ವಿಡಿಯೋ ಮೂಲಕವೇ ವಿದ್ಯಾಪತಿ ಬಿಡುಗಡೆ ದಿನಾಂಕ ಘೋಷಣೆ ಮಾಡಿದ್ದಾರೆ
'ವಿದ್ಯಾಪತಿ' ಆಗಮನಕ್ಕೆ ಮುಹೂರ್ತ ಫಿಕ್ಸ್: 'ಟಾಕ್ಸಿಕ್' ಬರಬೇಕಿದ್ದ ದಿನದಂದೇ ಬರ್ತಿದೆ ನಾಗಭೂಷಣ್ ಸಿನಿಮಾ title=
Vidyapati movie

ನಾಡಿನ ಎಲ್ಲೆಡೆ ಸಂಕ್ರಾಂತಿ ಸಂಭ್ರಮ ಕಳೆಗಟ್ಟಿದೆ. ಕನ್ನಡ ಚಿತ್ರರಂಗದಲ್ಲಿಯೂ ಸುಗ್ಗಿ ಸಂಭ್ರಮ ಜೋರಾಗಿದೆ. ತಾರೆಯರು ಅದ್ಧೂರಿ ಸಂಕ್ರಾಂತಿ ಸೆಲೆಬ್ರೆಟ್ ಮಾಡುತ್ತಿದ್ದಾರೆ. ಈ ಸುಗ್ಗಿ ಹಬ್ಬದ ವಿಶೇಷವಾಗಿ ಡಾಲಿ ಪಿಕ್ಚರ್ಸ್ ಸಿಹಿ ಸುದ್ದಿ ಕೊಟ್ಟಿದೆ.

ಇದನ್ನೂ ಓದಿ: ಹತ್ತಿರವಾಯಿತು ಮಹಾ ಪ್ರಳಯದ ದಿನ !ಭೂಪಟದಿಂದಲೇ ಮಾಯವಾಗಲಿದೆ ಈ ದೇಶ !ಮನೆ ಮಠ ಖಾಲಿ ಮಾಡಿ ತೆರಳುವಂತೆ ದೇಶವಾಸಿಗಳಿಗೆ ಸೂಚನೆ

ಕಳೆದ ಸಂಕ್ರಾಂತಿ ಹಬ್ಬಕ್ಕೆ ವಿದ್ಯಾಪತಿ ಸಿನಿಮಾ ಅನೌನ್ಸ್ ಮಾಡಿದ್ದ ಡಾಲಿ ಧನಂಜಯ್ ಈ ಬಾರಿಯ ಸುಗ್ಗಿ ಹಬ್ಬಕ್ಕೆ  ವಿದ್ಯಾಪತಿ ಆಗಮನದ ಬಗ್ಗೆ ಮಾಹಿತಿ ಕೊಟ್ಟಿದ್ದಾರೆ. ವಿಶೇಷವಾದ ವಿಡಿಯೋ ಮೂಲಕವೇ ವಿದ್ಯಾಪತಿ ಬಿಡುಗಡೆ ದಿನಾಂಕ ಘೋಷಣೆ ಮಾಡಿದ್ದಾರೆ.

ಧನಂಜಯ್ ಒಡೆತನದ ಡಾಲಿ ಪಿಕ್ಚರ್ಸ್‌ನ ನಾಲ್ಕನೇ ಚಿತ್ರ ವಿದ್ಯಾಪತಿ ಏಪ್ರಿಲ್ 10ಕ್ಕೆ ತೆರೆಗೆ ಬರ್ತಿದೆ. ಈ ಚಿತ್ರದಲ್ಲಿ ಟಗರು ಪಲ್ಯದಲ್ಲಿ ನಾಯಕನಾಗಿ ಮಿಂಚಿದ್ದ ನಾಗಭೂಷಣ್ ಕರಾಟೆ ಕಿಂಗ್ ಅವತಾರವೆತ್ತಿದ್ದಾರೆ. ಕರಾಟೆ ಮಾಸ್ಟರ್ ಆಗಿ ಇಲ್ಲಿ ರಂಗಾಯಣ ರಘು ಅಭಿನಯಿಸಿದ್ದಾರೆ. ನಾಯಕಿಯಾಗಿ ಮಲೈಕಾ ಟಿ ವಸುಪಾಲ್ ನಾಗಭೂಷಣ್ ಗೆ ಜೋಡಿಯಾಗಿ ಸಾಥ್ ಕೊಟ್ಟಿದ್ದು, ಅಷ್ಟೇ ಅಲ್ಲದೇ ಬಹುದೊಡ್ಡ ತಾರಾಗಣವಿದ್ದು ನಂತರದ ದಿನಗಳಲ್ಲಿ ಅದರ ವಿವರಗಳನ್ನು ಚಿತ್ರತಂಡ ಹಂಚಿಕೊಳ್ಳಲಿದೆ.

ಇದನ್ನೂ ಓದಿ: ಈ ತರಕಾರಿಯನ್ನು ಹಸಿಯಾಗಿ ಕಚ್ಚಿ ತಿಂದರೆ ಸಾಕು ಕಂಪ್ಲೀಟ್‌ ಕಂಟ್ರೋಲ್‌ ಆಗುತ್ತೆ ಬ್ಲಡ್‌ ಶುಗರ್‌! 30 ದಿನದವರೆಗೆ ಮತ್ತೆ ಹೆಚ್ಚಾಗೋದೇ ಇಲ್ಲ

ಇಶಾಂ ಮತ್ತು ಹಸೀಂ ಖಾನ್ ವಿದ್ಯಾಪತಿ ಸಿನಿಮಾಕ್ಕೆ ಆಕ್ಷನ್ ಕಟ್ ಹೇಳುವುದರ ಜೊತೆಗೆ ಸಿನಿಮಾಗೆ ಕಥೆ  ಬರೆದು, ಸಂಕಲನದ ಜವಾಬ್ದಾರಿಯನ್ನು ತಾವೇ ನಿಭಾಯಿಸಿದ್ದಾರೆ. ಲವಿತ್ ಛಾಯಾಗ್ರಹಣ, ಡಾಸ್ಮೋಡ್ ಸಂಗೀತ ನಿರ್ದೇಶನ, ಮುರುಳಿ ನೃತ್ಯ ನಿರ್ದೇಶನ, ಸುಜಿತ್ ವೆಂಕಟರಾಮಯ್ಯ ಸಾಹಿತ್ಯ, ಅರ್ಜುನ್ ಮಾಸ್ಟರ್ ಆಕ್ಷನ್ ವಿದ್ಯಾಪತಿ ಸಿನಿಮಾಕ್ಕಿದೆ. ಆಕ್ಷನ್ ಕಾಮಿಡಿ ಕಥಾಹಂದರ ಹೊಂದಿರುವ ವಿದ್ಯಾಪತಿ ಟಾಕ್ಸಿಕ್ ಸಿನಿಮಾ ಬಿಡುಗಡೆಗೆ ಮೊದಲು‌ ನಿಗದಿಯಾಗಿದ್ದ ದಿನದಂದು ಅಂದರೆ ಏಪ್ರಿಲ್ 10ಕ್ಕೆ ಚಿತ್ರಮಂದಿರಗಳಲ್ಲಿ ದರ್ಶನ ಕೊಡಲಿದೆ.

 

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News