Virat Kohli: ಆಸ್ಟ್ರೇಲಿಯದೊಂದಿಗೆ ಮುಕ್ತಾಯಗೊಂಡ ಬಾರ್ಡರ್ ಗವಾಸ್ಕರ್ ಸರಣಿಯಲ್ಲಿ ನಿರಾಸೆ ಅನುಭವಿಸಿದ್ದ ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ ಸದ್ಯ ತಮ್ಮ ಕುಟುಂಬದೊಂದಿಗೆ ಕಾಲ ಕಳೆಯುತ್ತಿದ್ದಾರೆ. ಆಸ್ಟ್ರೇಲಿಯಾದಲ್ಲಿ ನಡೆದ ಐದು ಟೆಸ್ಟ್‌ಗಳ ಸರಣಿಯ ನಂತರ ಅವರು ಬಿಡುವಿನ ಸಮಯವನ್ನು ಸಂಪೂರ್ಣವಾಗಿ ಬಳಸಿಕೊಳ್ಳುತ್ತಿದ್ದಾರೆ. ಅದೇ ಸಮಯದಲ್ಲಿ, ಅವರು ಆಧ್ಯಾತ್ಮಿಕ ಸ್ಥಳಗಳಿಗೆ ಮತ್ತು ಅನೇಕ ಪ್ರವಾಸಿ ಸ್ಥಳಗಳಿಗೆ ಭೇಟಿ ನೀಡುತ್ತಿದ್ದು, ಇದಕ್ಕೆ ಸಂಬಂಧ ಪಟ್ಟ ಫೋಟೋ ಹಾಗೂ ವಿಡಿಯೋಗಳು ಸಾಮಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಪತ್ನಿಯೊಂದಿಗೆ ಮುಂಬೈಗೆ ಭೇಟಿ ನೀಡಿದ್ದ ವಿರಾಟ್ ಕೊಹ್ಲಿ, ಅನುಷ್ಕಾ ಶರ್ಮಾ ಅವರೊಂದಿಗೆ ಮುಂಬೈ ಬೀದಿಗಳಲ್ಲಿ ರೌಂಡ್ಸ್ ಹಾಕಿದ್ದರು. ಇದನ್ನು ನೋಡಿದ ಅಭಿಅಮನಿಗಳು, ವಿರಾಟ್ ಕೊಹ್ಲಿ ಜೋಡಿಯೊಂದಿಗೆ, ಫೋಟೊ ಹಾಗೂ ಸೆಲ್ಫಿ ತೆಗೆದುಕೊಳ್ಳಲು ಮುಗಿದುಬಿದ್ದಿದ್ದರು, ಸದ್ಯ ಇದಕ್ಕೆ ಸಂಬಂಧ ಪಟ್ಟ ಫೋಟೋ ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಆದರೆ, ದಾರಿಯಲ್ಲಿ ಅವರು ಹೇಳಿದ ಒಂದು ಮಾತು, ಇದೀ ಇನ್‌ಟರ್ ನೆಟ್‌ನಲ್ಲಿ ಸದ್ದು ಮಾಡುತ್ತಿದೆ. "ನನ್ನನ್ನು ಯಾರೂ ಕೂಡ ತಡೆಯಬೇಡಿ,ನಾನು ಹೋಗುವ ದಾರಿಗೆ ಅಡ್ಡ ಬರಬೇಡಿ" ಎಂದು ವಿರಾಟ್ ಕೊಹ್ಲಿ ಹೇಳಿದ್ದು, ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ಬಗ್ಗೆ ಮಿಶ್ರ ಕಾಮೆಂಟ್‌ಗಳು ಕೇಳಿ ಬರುತ್ತಿದ್ದು, ವಿರಾಟ್‌ಗೆ ತುಂಬಾ ಆಟಿಟ್ಯೂಡ್ ಇದೆ, ಅದಕ್ಕೇ ಯಾರಿಗೂ ಫೋಟೋ ಕೊಡದೆ ಹೊರಟು ಹೋಗಿದ್ದಾರೆ ಅಂತಾರೆ ಕೆಲವರು. ಈ ನಡುವೆ ಕೆಲವರು ಕೊಹ್ಲಿಗೆ ಬೆಂಬಲ ನೀಡುತ್ತಿದ್ದಾರೆ. ಇಷ್ಟು ಜನರ ಜೊತೆ ಫೋಟೊ ತೆಗೆಯಲು ಆಗೊಲ್ಲ, ಪ್ರೈವಸಿಯೂ ಬೇಕು ಎನ್ನುತ್ತಾರೆ. ವಿರಾಟ್ ಕೊಹ್ಲಿ ಕೂಡ ಇತ್ತೀಚೆಗೆ ತಾವು ತುಂಬಾ ಪ್ರೀತಿಸುವ ವೃಂದಾವನಕ್ಕೆ ಭೇಟಿ ನೀಡಿದ್ದರು. ಅವರು ತಮ್ಮ ಪತ್ನಿ ಅನುಷ್ಕಾ ಶರ್ಮಾ, ಮಗಳು ವಾಮಿಕಾ ಮತ್ತು ಮಗ ಅಕೈ ಅವರೊಂದಿಗೆ ಪ್ರೇಮಾನಂದ ಮಹಾರಾಜ್ ಆಶ್ರಮಕ್ಕೆ ತೆರಳಿದರು.
ಏತನ್ಮಧ್ಯೆ, ಆಸ್ಟ್ರೇಲಿಯಾದೊಂದಿಗೆ ಕೊನೆಗೊಂಡ ಬಾರ್ಡರ್ ಗವಾಸ್ಕರ್ ಸರಣಿಯಲ್ಲಿ ಕೊಹ್ಲಿ ನಿರಾಸೆ ಅನುಭವಿಸಿದ್ದು ಗೊತ್ತೇ ಇದೆ. ಆರಂಭಿಕ ಪಂದ್ಯದಲ್ಲಿ ಶತಕ ಬಾರಿಸಿದರೂ ವಿರಾಟ್ ಒಂಬತ್ತು ಇನ್ನಿಂಗ್ಸ್‌ಗಳಲ್ಲಿ 190 ರನ್ ಗಳಿಸಲಷ್ಟೇ ಶಕ್ತರಾದರು. ಇದೀಗ ಟೀಂ ಇಂಡಿಯಾ ಶೀಘ್ರದಲ್ಲೇ ಇಂಗ್ಲೆಂಡ್ ವಿರುದ್ಧದ ಸರಣಿಗೆ ತಯಾರಿ ನಡೆಸುತ್ತಿದೆ. ವಿರಾಟ್ ಈಗಾಗಲೇ ಟಿ20ಗೆ ವಿದಾಯ ಹೇಳಿರುವುದು ಗೊತ್ತೇ ಇದೆ. ಆದರೆ, ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೆ ಅವರಿಗೆ ತಂಡದಲ್ಲಿ ಸ್ಥಾನ ನೀಡಲಾಗುವುದೇ? ಅಥವಾ ಇಲ್ಲವೇ? ಕಾದು ನೋಡಬೇಕು. ಈ ಸರಣಿಯ ನಂತರ, ಫೆಬ್ರವರಿ 19 ರಿಂದ ಪ್ರಾರಂಭವಾಗುವ ಚಾಂಪಿಯನ್ಸ್ ಟ್ರೋಫಿಯಲ್ಲಿ ಟೀಂ ಇಂಡಿಯಾ ಆಡಲಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.