ಗೃಹಲಕ್ಷ್ಮೀ ಯೋಜನೆಯಂತೆ ಮೋದಿ ಸರ್ಕಾರದಿಂದಲೂ ಮನೆಯೊಡತಿಗೆ ಹಣ: 2025ರ ಬಜೆಟ್ ನಲ್ಲಿ ಘೋಷಣೆ ಸಾಧ್ಯತೆ!

Modi Govt: ಫೆಬ್ರವರಿ 1ನೇ ತಾರೀಖು ಬಜೆಟ್ ಮಂಡನೆಯಾಗಲಿದ್ದು ಕರ್ನಾಟಕದ ಅತ್ಯಂತ ಯಶಸ್ವಿ ಗೃಹಲಕ್ಷ್ಮೀ ಯೋಜನೆ ಮಾದರಿಯಲ್ಲಿ ಕೇಂದ್ರ ಸರ್ಕಾರವೂ ನೇರವಾಗಿ ಮಹಿಳೆಯರಿಗೆ ಹಣ ನೀಡುವ ಯೋಜನೆಯೊಂದನ್ನು ಘೋಷಿಸಬಹುದು ಎಂದು ಹೇಳಲಾಗುತ್ತಿದೆ.

Written by - Yashaswini V | Last Updated : Jan 17, 2025, 02:09 PM IST
  • ಕರ್ನಾಟಕದದ ಗೃಹಲಕ್ಷ್ಮೀ ಯೋಜನೆ ಅತ್ಯಂತ ಯಶಸ್ವಿ ಯೋಜನೆಗಳಲ್ಲಿ ಒಂದಾಗಿದ್ದು ಇಡೀ ದೇಶಾದ್ಯಂತ ವಿಶೇಷ ಮನ್ನಣೆ ಗಳಿಸುತ್ತಿದೆ.
  • ಪ್ರತಿ ಚುನಾವಣೆಯಲ್ಲೂ ಕರ್ನಾಟಕದ ಗ್ಯಾರಂಟಿ ಯೋಜನೆಗಳ ಬಗ್ಗೆ, ಅದರಲ್ಲೂ ಮಹಿಳೆಯರಿಗೆ ಪ್ರತಿ ತಿಂಗಳು 2 ಸಾವಿರ ರೂ. ಕೊಡುವ ಗೃಹಲಕ್ಷ್ಮೀ ಯೋಜನೆ ಬಗ್ಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.
  • ರಾಜಕೀಯವಾಗಿ ಮಹಿಳಾ ಮತದಾರರು ಇತ್ತೀಚಿನ ವರ್ಷಗಳಲ್ಲಿ ಮಹತ್ವದ ಪಾತ್ರ ನಿರ್ವಹಿಸುತ್ತಿರುವುದು ಸಾಬೀತಾಗಿದೆ.
ಗೃಹಲಕ್ಷ್ಮೀ ಯೋಜನೆಯಂತೆ ಮೋದಿ ಸರ್ಕಾರದಿಂದಲೂ ಮನೆಯೊಡತಿಗೆ ಹಣ: 2025ರ ಬಜೆಟ್ ನಲ್ಲಿ ಘೋಷಣೆ ಸಾಧ್ಯತೆ! title=

Modi Govt: ಬಹುನಿರೀಕ್ಷಿತ ಕೇಂದ್ರ ಸರ್ಕಾರದ ಬಜೆಟ್ ಮಂಡನೆಗೆ ದಿನಗಣನೆ ಶುರುವಾಗಿದೆ. ಫೆಬ್ರವರಿ 1ನೇ ತಾರೀಖು ಬಜೆಟ್ ಮಂಡನೆಯಾಗಲಿದ್ದು ಹಲವು ರೀತಿಯ ನಿರೀಕ್ಷೆಗಳು ಹುಟ್ಟಿಕೊಂಡಿವೆ. ರಾಜ್ಯ ಸರ್ಕಾರದ ಅತ್ಯಂತ ಯಶಸ್ವಿ ಗೃಹಲಕ್ಷ್ಮೀ ಯೋಜನೆ ಮಾದರಿಯಲ್ಲಿ ಕೇಂದ್ರ ಸರ್ಕಾರವೂ ನೇರವಾಗಿ ಮಹಿಳೆಯರಿಗೆ ಹಣ ನೀಡುವ ಯೋಜನೆಯನ್ನು ಘೋಷಣೆ ಮಾಡಬಹುದು ಎಂದು ಹೇಳಲಾಗುತ್ತಿದೆ.

ಕರ್ನಾಟಕದಲ್ಲಿ ರಾಜ್ಯ ಸರ್ಕಾರ ತಂದಿರುವ ಗೃಹಲಕ್ಷ್ಮೀ ಯೋಜನೆ ಅತ್ಯಂತ ಯಶಸ್ವಿ ಯೋಜನೆಗಳಲ್ಲಿ ಒಂದಾಗಿದ್ದು ಇಡೀ ದೇಶಾದ್ಯಂತ ವಿಶೇಷ ಮನ್ನಣೆ ಗಳಿಸುತ್ತಿದೆ. ಪ್ರತಿ ಚುನಾವಣೆಯಲ್ಲೂ ಕರ್ನಾಟಕದ ಗ್ಯಾರಂಟಿ ಯೋಜನೆಗಳ ಬಗ್ಗೆ ಚರ್ಚೆಯಾಗುತ್ತಿದೆ. ಅದರಲ್ಲೂ ನೇರವಾಗಿ ಮಹಿಳೆಯರ ಬ್ಯಾಂಕ್ ಖಾತೆಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ಹಾಕುವ ಗೃಹಲಕ್ಷ್ಮೀ ಯೋಜನೆ ಬಗ್ಗೆ ಅಪಾರ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಇದೇ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮುಂಬರುವ ಬಜೆಟ್ ನಲ್ಲಿ ಮಹಿಳೆಯರಿಗೆ ನೇರವಾಗಿ ಹಣ ಕೊಡುವ ಯೋಜನೆಯನ್ನು ಘೋಷಣೆ ಮಾಡಬಹುದು ಎನ್ನುವ ಮಾತುಗಳು ಕೇಳಿಬರುತ್ತಿವೆ.

ಇದನ್ನೂ ಓದಿ- Free Electricity Bill: ಕೇಂದ್ರ ಸರಕಾರದಿಂದ ಬಂಪರ್ ಆಫರ್: 300 ಯೂನಿಟ್ ಉಚಿತ ವಿದ್ಯುತ್, 78,000 ರೂ.ವರೆಗೆ ಸಬ್ಸಿಡಿ!

ಸ್ವತಃ ಮಹಿಳೆಯಾಗಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಾಲಾ ಸೀತಾರಾಮನ್ ಅವರು ಕರ್ನಾಟಕದ ಗೃಹಲಕ್ಷ್ಮೀ ಯೋಜನೆಯ ಮಾದರಿಯಲ್ಲಿ ದೇಶದ ಮಹಿಳೆಯರಿಗೆ ಪ್ರತಿ ತಿಂಗಳು ಹಣ ಸಿಗುವಂತಹ ಮಹತ್ವದ ಯೋಜನೆಯೊಂದನ್ನು ಪ್ರಕಟಿಸಬಹುದು ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಅವರು ಗಂಭೀರವಾಗಿ ಅಧ್ಯಯನ ನಡೆಸಿದ್ದಾರೆ ಎಂದು ಕೇಂದ್ರ ಹಣಕಾಸು ಇಲಾಖೆ ಮೂಲಗಳು ಹೇಳುತ್ತವೆ. 

ಇದನ್ನೂ ಓದಿ- ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ನಡುವೆಯೇ ಕಾರು, ಬೈಕ್ ಖರೀದಿಸುವವರಿಗೆ ಮತ್ತೊಂದು ಶಾಕ್!

ರಾಜಕೀಯವಾಗಿ ಕೂಡ ಮಹಿಳಾ ಮತದಾರರು ಇತ್ತೀಚಿನ ವರ್ಷಗಳಲ್ಲಿ ಮಹತ್ವದ ಪಾತ್ರ ನಿರ್ವಹಿಸುತ್ತಿರುವುದು ಸಾಬೀತಾಗಿದೆ. ಮಹಿಳಾ ಮತದಾರರ ಮನಗೆಲ್ಲದ ರಾಜಕೀಯ ಪಕ್ಷ ಮತ್ತು ನಾಯಕ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಕೂಡ ಕೇಂದ್ರ ಸರ್ಕಾರ ನೇರವಾಗಿ ಪ್ರತಿ ತಿಂಗಳು ಮನೆಯೊಡತಿಗೆ ಹಣ ಹಾಕುವ ಯೋಜನೆಯನ್ನು 2025ರ ಬಜೆಟ್ ನಲ್ಲಿ ಘೋಷಣೆ ಮಾಡಬಹುದು ಎಂದು ತಿಳಿದುಬಂದಿದೆ.

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News