ಚಾಮರಾಜನಗರ: ಏಕ ಬಳಕೆ ಪ್ಲಾಸ್ಟಿಕ್ ಕ್ಯಾರಿಬ್ಯಾಗ್, ಬಾಟಲಿ, ತಟ್ಟೆ, ಚಮಚ ಇತ್ಯಾದಿ ತ್ಯಾಜ್ಯ ಅರಣ್ಯ ಪ್ರವೇಶಿಸದಂತೆ ತಡೆಯಲು ಅರಣ್ಯದೊಳಗೆ ಸಾಗುವ ಮಾರ್ಗದಲ್ಲಿ 2 ಹಂತದ ತಪಾಸಣೆ ವ್ಯವಸ್ಥೆಯನ್ನು ಶೀಘ್ರ ಜಾರಿಗೊಳಿಸುವಂತೆ ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇದನ್ನೂ ಓದಿ: ಒಂದು ರೂಪಾಯಿ ಖರ್ಚು ಇಲ್ಲದೆ ನಿಮ್ಮ ಕಿಡ್ನಿಯಲ್ಲಿನ ಕಲ್ಲುಗಳನ್ನು ಕರಗಿಸುತ್ತೆ ʻಈʼ ಪುಟ್ಟ ಗಿಡ..!
ಬಂಡೀಪುರದಲ್ಲಿಂದು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಕೇರಳ ಮತ್ರು ತಮಿಳುನಾಡು ಸಂಪರ್ಕ ಕಲ್ಪಿಸುವ ಕೆಕ್ಕನಹಳ್ಳ, ಮೂಲೆಹೊಳೆ, ಮದ್ದೂರು ಗೇಟ್, ಮೇಲುಕಾಮನಹಳ್ಳಿ ಗೇಟ್ ಬಳಿ ಪ್ರತಿ ನಿತ್ಯ 30-35 ಕೆ.ಜಿ. ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹ ಆಗುತ್ತಿದೆ. ಪ್ರತಿ ವರ್ಷ ಈ ನಾಲ್ಕು ತಪಾಸಣಾ ಕೇಂದ್ರಗಳಲ್ಲಿ ಸುಮಾರು 11ರಿಂದ 12 ಟನ್ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹವಾಗುತ್ತಿದೆ ಎಂಬ ಮಾಹಿತಿ ಇದೆ. ಅರಣ್ಯ ಸಿಬ್ಬಂದಿ ಕಾಡಿನಲ್ಲಿ ಇಳಿದು ಪ್ಲಾಸ್ಟಿಕ್ ಸಂಗ್ರಹಿಸುವಾಗ ವನ್ಯಜೀವಿ ದಾಳಿ ಮಾಡುವ, ಹಾವು ಕಚ್ಚುವ ಅಪಾಯ ಇರುತ್ತದೆ. ಹೀಗಾಗಿ ಪ್ಲಾಸ್ಟಿಕ್ ತ್ಯಾಜ್ಯ ಅರಣ್ಯ ಪ್ರವೇಶಿಸದಂತೆ ದ್ವಾರದಲ್ಲೇ ತಡೆಯುವ ವ್ಯವಸ್ಥೆ ಮಾಡಿ ಎಂದರು.
ಅರಣ್ಯದೊಳಗೆ ಹಾದು ಹೋಗುವ ಹೆದ್ದಾರಿಗಳಲ್ಲಿ, ರಸ್ತೆಗಳಲ್ಲಿ ಸಂಚರಿಸುವ ವಾಹನಗಳಿಗೆ 2 ಹಂತದ ತಪಾಸಣೆ ವ್ಯವಸ್ಥೆ ಜಾರಿ ಮಾಡಿ, ಮೊದಲ ಹಂತದಲ್ಲಿ ಒಂದು ದೊಡ್ಡ ಬುಟ್ಟಿ ಇಟ್ಟು ಏಕ ಬಳಕೆ ಪ್ಲಾಸ್ಟಿಕ್ ಬಾಟಲಿ, ಲೋಟ, ತಟ್ಟೆ, ಕ್ಯಾರಿ ಬ್ಯಾಗ್ ಅನ್ನು ಅದರಲ್ಲಿ ಸ್ವಯಂ ಪ್ರೇರಿತವಾಗಿ ಹಾಕಲು ವಾಹನದಲ್ಲಿರುವವರಿಗೆ ತಿಳಿಸಿ. ನಂತರ ಎರಡನೇ ಹಂತದಲ್ಲಿ ವಾಹನ ತಪಾಸಣೆ ಮಾಡಿ, ವಾಹನಗಳಲ್ಲಿ ಏಕ ಬಳಕೆ ಪ್ಲಾಸ್ಟಿಕ್ ಇದ್ದರೆ ದಂಡ ವಿಧಿಸಿ ಎಂದು ಸೂಚಿಸಿದರು.
ಬೇಸಿಗೆಯಲ್ಲಿ ನೀರಿನ ಕೊರತೆ ಬಾರದಂತೆ ಕ್ರಮ ವಹಿಸಿ:
ಈ ಬಾರಿ ಮುಂಗಾರು ಮತ್ತು ಹಿಂಗಾರು ಮಳೆ ಉತ್ತಮವಾಗಿದ್ದರೂ, ವನ್ಯಜೀವಿಗಳು ಕಾಡಿನಿಂದ ನಾಡಿಗೆ ಬರುತ್ತಿರುವುದು ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಬರುವ ಬೇಸಿಗೆಯಲ್ಲಿ ಅರಣ್ಯದೊಳಗೆ ನೀರು ಮತ್ತು ಮೇವಿನ ಕೊರತೆ ಆಗದಂತೆ ಈಗಿನಿಂದಲೇ ಕ್ರಮ ವಹಿಸಿ, ನೀರು ಗುಂಡಿಗಳಲ್ಲಿ ನೀರು ಸಂಗ್ರಹಣೆಗೆ ಆದ್ಯತೆ ನೀಡಿ. ಅಗತ್ಯಬಿದ್ದರೆ ಕೊಳವೆ ಬಾವಿಗಳಿಗೆ ಸೌರ ವಿದ್ಯುತ್ ಪಂಪ್ ಅಳವಡಿಸಿ ನೀರು ಹರಿಸಿ ಎಂದು ಸೂಚಿಸಿದರು.
ಲಂಟನಾ, ಸೆನ್ನಾ ಕಳೆಗಳು ವ್ಯಾಪಕವಾಗಿ ಬೆಳೆಯುತ್ತಿದ್ದು, ಇದರಿಂದ ಸಸ್ಯಹಾರಿ ಪ್ರಾಣಿಗಳಿಗೆ ಮೇವಿನ ಕೊರತೆ ಆಗುತ್ತಿದೆ. ಈ ಕಳೆ ತೆಗೆಯಲು ಸಮಗ್ರ ಯೋಜನೆ ರೂಪಿಸಿ, ಪರಿಹಾರ ಕಂಡು ಹಿಡಿಯಿರಿ ಎಂದು ಈಶ್ವರ ಖಂಡ್ರೆ ತಿಳಿಸಿದರು.
ಇದೇ ಸಂದರ್ಭದಲ್ಲಿ ಜಿಲ್ಲೆಯ ರೈತರ ಅಹವಾಲು ಆಲಿಸಿದ ಸಚಿವರು, ಕಾನೂನಿನ ಚೌಕಟ್ಟಿನೊಳಗೆ ಸಮಸ್ಯೆಗಳ ಪರಿಹಾರಕ್ಕೆ ಪ್ರಯತ್ನಿಸುವುದಾಗಿ ಹೇಳಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ