ಅನಾರೋಗ್ಯ ನಿಮಿತ್ತ ರಾಹುಲ್ ಗಾಂಧಿ ಗೈರು: ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ  ಹುಷಾರಿಲ್ಲದ ಕಾರಣ ಅಧಿವೇಶನಕ್ಕೆ ಹಾಜರಾಗಲು ಸಾಧ್ಯವಾಗಿಲ್ಲ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

Written by - Prashobh Devanahalli | Last Updated : Jan 21, 2025, 02:07 PM IST
  • ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ
  • ಅನಾರೋಗ್ಯ ನಿಮಿತ್ತ ರಾಹುಲ್ ಗಾಂಧಿ ಗೈರು
  • ಸಿಎಂ ಸಿದ್ದರಾಮಯ್ಯ ಹೇಳಿಕೆ
ಅನಾರೋಗ್ಯ ನಿಮಿತ್ತ ರಾಹುಲ್ ಗಾಂಧಿ ಗೈರು: ಸಿಎಂ ಸಿದ್ದರಾಮಯ್ಯ  title=

ಬೆಳಗಾವಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ  ಹುಷಾರಿಲ್ಲದ ಕಾರಣ ಅಧಿವೇಶನಕ್ಕೆ ಹಾಜರಾಗಲು ಸಾಧ್ಯವಾಗಿಲ್ಲ ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಅವರು ಸಮಾವೇಶದಿಂದ ದೂರ ಎಂದು ಮಾಧ್ಯಮಗಳು ವರದಿ ಮಾಡಿವೆ. ಈ ರೀತಿ ತಿರುಚಿ ಸುದ್ದಿ ಹಾಕಿದರೆ ಪತ್ರಿಕಾ ವೃತ್ತಿಯ ಘನತೆ ಉಳಿಯುತ್ತದೆಯೇ? ಇದರಿಂದ ಏನು ಸಂದೇಶ ಹೋಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.

ಸಂಸದೆ ಪ್ರಿಯಾಂಕ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾರ್ಯಕಾರಿ ಸಮಿತಿ ಸದಸ್ಯರು, ಕಾರ್ಯದರ್ಶಿಗಳು ಆಗಮಿಸಲಿದ್ದಾರೆ ಎಂದು ಸಿಎಂ ಇದೇ ಸಂದರ್ಭದಲ್ಲಿ ತಿಳಿಸಿದರು.

ಇದನ್ನೂ ಓದಿ: ಕಾಡಿನ ಹಾದಿಯಲ್ಲಿ ಕಾಡಾನೆ ದಾಳಿ: ಓರ್ವ ಸಾವು, ಮತ್ತೋರ್ವ ಬಚಾವ್

ಇಡೀ ವರ್ಷ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಅಭಿಯಾನವನ್ನು ಮಾಡುತ್ತಿದ್ದೇವೆ. ಗಾಂಧೀಜಿಯವರ ತತ್ವಾದರ್ಶಗಳನ್ನು ಮತ್ತೆ ಪುನಸ್ಥಾಪಿಸಲು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಗಾಂಧೀಜಿ ಹಾಗು ಅವರ ವಿಚಾರಧಾರೆಗಳು ಇಡೀ ವಿಶ್ವಕ್ಕೆ ಇಂದಿಗೂ ಪ್ರಸ್ತುತ ಎಂದರು. 

ಗಾಂಧೀಜಿ ಸೌಹಾರ್ದತೆ, ಸಮಾನತೆ ಬರಬೇಕು, ಅಸ್ಪೃಶ್ಯತೆ ಹೋಗಲಾಡಿಸಲು, ಮಹಿಳೆಯರಿಗೆ ಸ್ವಾತಂತ್ರ್ಯ ಅವರ ಹಕ್ಕುಗಳ ರಕ್ಷಣೆಯಾಗಬೇಕೆಂದು ಪ್ರತಿಪಾದಿಸಿದ್ದರು. ಗಾಂಧೀಜಿ, ಬಸವಣ್ಣ, ಕನಕದಾಸರ ವಿಚಾರಗಳು ಸಂವಿಧಾನದಲ್ಲಿ ಅಡಕವಾಗಿವೆ ಎಂದರು. 

ಕಾಂಗ್ರೆಸ್ ಸಂವಿಧಾನದ ಪರವಾಗಿದೆ

ಗಾಂಧೀಜಿ, ಅಂಬೇಡ್ಕರ್ ಮತ್ತು  ಸಂವಿಧಾನವನ್ನು ವಿರೋಧಿಸುವ ಅನಾಹುತಕಾರಿ ರಾಜಕಾರಣ ನಡೆಯುತ್ತಿದೆ. ಅದ್ದರಿಂದ ಇವುಗಳ ರಕ್ಷಣೆ ಮಾಡುವುದು ಕಾಂಗ್ರೆಸ್ ನ ಜವಾಬ್ದಾರಿ. ನಾವು ಸಂವಿಧಾನದ ಪರವಾಗಿದ್ದೇವೆ. ಅವರು ಮನುವಾದದ ಪರವಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಇಂದು ಬೆಂಗಳೂರಿನ ಕೆಲವೆಡೆ ಕರೆಂಟ್ ಕಟ್: ಎಲ್ಲೆಲ್ಲಿ ಪವರ್ ಇರಲ್ಲ? ಯಾಕಿರಲ್ಲ ಅಂತಾ ತಿಳಿಯಿರಿ!

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News