ನವದೆಹಲಿ: ಭಾರತೀಯ ಕ್ರಿಕೆಟ್ ದಂತಕಥೆ ವೀರೇಂದ್ರ ಸೆಹ್ವಾಗ್ ಮತ್ತು ಅವರ ಪತ್ನಿ ಆರತಿ ಅಹ್ಲಾವತ್ 20 ವರ್ಷಗಳ ದಾಂಪತ್ಯದ ನಂತರ ಬೇರ್ಪಡುತ್ತಿದ್ದಾರೆ ಎಂದು ವರದಿಯಾಗಿದೆ.
2004 ರಲ್ಲಿ ವಿವಾಹವಾದ ಈ ದಂಪತಿಗಳು ಇನ್ಸ್ಟಾಗ್ರಾಮ್ನಲ್ಲಿ ಪರಸ್ಪರ ಅನ್ಫಾಲೋ ಮಾಡಿದ್ದಾರೆ, ಇದು ಅವರ ವೈವಾಹಿಕ ಸಂಬಂಧದ ಸ್ಥಿತಿಗೆ ಸಂಬಂಧಿಸಿದ ಊಹಾಪೋಹಗಳಿಗೆ ಕಾರಣವಾಯಿತು.ಕುಟುಂಬದ ಆಪ್ತ ಮೂಲಗಳು ಹೇಳುವಂತೆ ಇಬ್ಬರೂ ಹಲವಾರು ತಿಂಗಳುಗಳಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ ಹಾಗಾಗಿ ವಿಚ್ಛೇದನದ ಸಾಧ್ಯತೆ ಇದೆ ಎನ್ನಲಾಗಿದೆ.
ಇದನ್ನೂ ಓದಿ: ಮಹಾಕುಂಭಮೇಳ 2025: ಪ್ರಯಾಗರಾಜ್ಗೆ ರೈಲಿನಲ್ಲಿ ಹೋಗುವುದು ಹೇಗೆ? ಮಾಹಿತಿ ಇಲ್ಲಿದೆ
ಸ್ಫೋಟಕ ಬ್ಯಾಟಿಂಗ್ ಶೈಲಿಗೆ ಹೆಸರುವಾಸಿಯಾದ ವೀರೇಂದ್ರ ಮತ್ತು ಆರತಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ.ಅವರ ದೀರ್ಘಕಾಲದ ವೈವಾಹಿಕ ಸಂಬಂಧದ ಹೊರತಾಗಿಯೂ, ಇತ್ತೀಚಿನ ಬೆಳವಣಿಗೆಗಳು ದೂರವಾಗುತ್ತಿರುವ ಬಗ್ಗೆ ಸುಳಿವು ನೀಡಿವೆ.ಎರಡು ವಾರಗಳ ಹಿಂದೆ, ವೀರೇಂದ್ರ ಪಾಲಕ್ಕಾಡ್ನ ವಿಶ್ವ ನಾಗಯಕ್ಷಿ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರವಾಸದ ಫೋಟೋಗಳನ್ನು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದರು. ಆದಾಗ್ಯೂ ಆ ಪೋಸ್ಟ್ನಲ್ಲಿ ಆರತಿಯ ಬಗ್ಗೆ ಯಾವುದೇ ರೀತಿಯ ಉಲ್ಲೇಖವಿರಲಿಲ್ಲ. ಇದು ಹಲವು ರೀತಿಯ ಅನುಮಾನಗಳಿಗೆ ಎಡೆ ಮಾಡಿಕೊಟ್ಟಿತ್ತು.
ನವದೆಹಲಿ ಮೂಲದ ಆರತಿ ಅಹ್ಲಾವತ್ ದೆಹಲಿ ವಿಶ್ವವಿದ್ಯಾಲಯದ ಮೈತ್ರೇಯಿ ಕಾಲೇಜಿನಿಂದ ಕಂಪ್ಯೂಟರ್ ಸೈನ್ಸ್ನಲ್ಲಿ ಡಿಪ್ಲೊಮಾ ಪೂರ್ಣಗೊಳಿಸುವ ಮೊದಲು ಲೇಡಿ ಇರ್ವಿನ್ ಸೆಕೆಂಡರಿ ಶಾಲೆ ಮತ್ತು ಭಾರತೀಯ ವಿದ್ಯಾ ಭವನದಲ್ಲಿ ಶಿಕ್ಷಣವನ್ನು ಪಡೆದಿದ್ದರು.ವೀರೇಂದ್ರ ಅಥವಾ ಆರತಿ ಇಬ್ಬರೂ ಅಧಿಕೃತ ಘೋಷಣೆ ಮಾಡಿಲ್ಲವಾದರೂ, ಆದರೆ ಈಗ ಇಬ್ಬರೂ ಪ್ರತ್ಯೇಕತೆವಾಗಿ ವಾಸಿಸುತ್ತಿರುವುದು ಅವರ ಸಂಬಂಧವು ಮೊದಲಿನಂತಿಲ್ಲ ಎನ್ನುವುದಂತೂ ಸ್ಪಷ್ಟವಾಗಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.