ಬೆಂಗಳೂರು: ಗಾನ ಗಂಧರ್ವ, ಬಹುಭಾಷಾ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ (SP Balasubrahmanyam) ಅವರಿಗೆ COVID-19 ಪಾಸಿಟಿವ್ ಬಂದಿದೆ.
ಈ ಬಗ್ಗೆ ಸ್ವತಃ ಬಾಲಸುಬ್ರಹ್ಮಣ್ಯಂ SPBalasubrahmanyam ವಿಡಿಯೋ ಬಿಡುಗಡೆ ಮಾಡಿ ದೃಢಪಡಿಸಿದ್ದಾರೆ. ಜೊತೆಗೆ ಆರೋಗ್ಯ ಸಚಿವ ಶ್ರೀರಾಮುಲು ಅವರು ಕೂಡ ದೃಢಪಡಿಸಿದ್ದಾರೆ.https://www.facebook.com/SPB/posts/3346069692117514
ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರಿಗೆ ಕೋವಿಡ್ -19 (Covid 19) ಪಾಸಿಟಿವ್ ಇರುವ ಬಗ್ಗೆ ಟ್ವೀಟ್ ಮಾಡಿರುವ ಆರೋಗ್ಯ ಸಚಿವ ಶ್ರೀರಾಮುಲು, 'ಗಾನ ಗಂಧರ್ವ ಶ್ರೀ #SPBalasubrahmanyam ಅವರಿಗೆ ಕೊರೊನ ಸೋಂಕು ದೃಢಪಟ್ಟಿದೆ. ಮದ್ರಾಸಿನಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ. ತಮ್ಮ ಆರೋಗ್ಯದ ಕುರಿತು ಯಾರೂ ಆತಂಕಪಡುವ ಅಗತ್ಯವಿಲ್ಲವೆಂದು ಸ್ವತಃ ತಿಳಿಸಿದ್ದಾರೆ. ನಮ್ಮೆಲ್ಲರ ಪ್ರೀತಿಯ ಗಾಯಕ, ಶ್ರೀಯುತ ಎಸ್ ಪಿಬಿ (SPB) ಅವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಹಾರೈಸುತ್ತೇನೆ' ಎಂದು ಹೇಳಿದ್ದಾರೆ.
ಸ್ವತಃ ವಿಡಿಯೋ ಬಿಡುಗಡೆ ಮಾಡಿರುವ ಎಸ್.ಪಿ. ಬಾಲಸುಬ್ರಹ್ಮಣ್ಯಂ SPBalasubrahmanyam ಅವರು ಕೂಡ ತನಗೆ ಯಾವುದೇ ಸಮಸ್ಯೆ ಇಲ್ಲ. ಸ್ವಲ್ಪ ಶೀತ ಇದೆ, ಬಿಟ್ಟು ಬಿಟ್ಟು ಜ್ವರ ಬರುತ್ತಿದೆ. ಜೊತೆಗೆ ಸ್ವಲ್ಪ ಆರಾಮಿಲ್ಲ ಎನಿಸತೊಡಗಿತು. ಮುನ್ನೆಚ್ಚರಿಕಾ ಕ್ರಮವಾಗಿ ಆಸ್ಪತ್ರೆಗೆ ಮದರಾಸಿನ ಆಸ್ಪತ್ರೆಯಲ್ಲಿ ದಾಖಲಾಗಿದ್ದೇನೆ. ಮೈಲ್ಡ್ COVID-19 ಗುಣ ಲಕ್ಷಣಗಳಿವೆ. ಈಗ ವಿಶ್ರಾಂತಿ ಪಡೆಯುತ್ತಿದ್ದೇನೆ. ಶೀಘ್ರವೇ ಗುಣಮುಖವಾಗಿ ಡಿಸ್ಚಾರ್ಜ್ ಆಗುತ್ತೇನೆ. ಯಾರೂ ಆತಂಕ ಪಡಬೇಡಿ, ನನ್ನನ್ನು ಈ ಸಂದರ್ಭದಲ್ಲಿ ಸಂಪರ್ಕಿಸಲು ಪ್ರಯತ್ನಿಸಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ.