ಬೆಂಗಳೂರು: ಕರ್ನಾಟಕ ನಾಮಕರಣ, ಹಾವನೂರು ಕಮಿಷನ್, ಭೂ ಸುಧಾರಣೆ, ಮಲ ಹೊರುವ ಪದ್ಧತಿ ನಿಷೇಧ, ಜೀತ ಪದ್ಧತಿ ನಿರ್ಮೂಲನೆ ಹಾಗೂ ಶೋಷಿತ ಸಮುದಾಯಕ್ಕೆ ರಾಜಕೀಯ ಆಸರೆ ಒದಗಿಸಿದ ಮಹಾನ್ ನಾಯಕ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು (D Devaraj Urs) ಅವರ ಜನ್ಮದಿನದ ಸಂದರ್ಭದಲ್ಲಿ ವಿನಮ್ರವಾಗಿ ಸ್ಮರಿಸಿಕೊಳ್ಳುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಹೇಳಿದ್ದಾರೆ.
ಕರ್ನಾಟಕ ನಾಮಕರಣ, ಹಾವನೂರು ಕಮಿಷನ್, ಭೂ ಸುಧಾರಣೆ, ಮಲ ಹೊರುವ ಪದ್ಧತಿ ನಿಷೇಧ, ಜೀತ ಪದ್ಧತಿ ನಿರ್ಮೂಲನೆ ಹಾಗೂ ಶೋಷಿತ ಸಮುದಾಯಕ್ಕೆ ರಾಜಕೀಯ ಆಸರೆ ಒದಗಿಸಿದ ಮಹಾನ್ ನಾಯಕ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಜನ್ಮದಿನದ ಸಂದರ್ಭದಲ್ಲಿ ವಿನಮ್ರವಾಗಿ ಸ್ಮರಿಸಿಕೊಳ್ಳುತ್ತೇನೆ.
1/3— H D Kumaraswamy (@hd_kumaraswamy) August 20, 2020
ಟ್ವೀಟ್ ಮೂಲಕ ದೇವರಾಜ ಅರಸು ಅವರ ಜನ್ಮದಿನಕ್ಕೆ ಶುಭಾಶಯ ಕೋರಿರುವ ಎಚ್.ಡಿ. ಕುಮಾರಸ್ವಾಮಿ, 'ತಮಗೆ ದಕ್ಕಿದ ರಾಜಕೀಯ ಪರಮಾಧಿಕಾರವನ್ನು ತಳಸಮುದಾಯದ ಅಭಿವೃದ್ಧಿಗೆ ಕ್ರಾಂತಿಕಾರಿ ನಿರ್ಧಾರ ತೆಗೆದುಕೊಳ್ಳುವ ಮೂಲಕ ರಾಜಕೀಯ ಇಚ್ಛಾಶಕ್ತಿ ಪ್ರದರ್ಶಿಸಿದ ಅರಸು ಅವರ ಕಾರ್ಯ ವೈಖರಿ ಅನುಕರಣೀಯ' ಎಂದಿದ್ದಾರೆ.
'ಹಿಂದುಳಿದ ವರ್ಗಗಳ ಹರಿಕಾರ' ಡಿ. ದೇವರಾಜ್ ಅರಸ್ ಅವರ ಜನ್ಮದಿನ
ಇನ್ನೊಂದು ಟ್ವೀಟ್ ನಲ್ಲಿ 'ಶೋಷಿತ ಸಮುದಾಯಕ್ಕೆ ನ್ಯಾಯ ಒದಗಿಸುವ ಭರದಲ್ಲಿ ಇತರ ಸಮುದಾಯಗಳ ಮೇಲೆ ಸವಾರಿ ಮಾಡದ ರಾಜಕೀಯ ಸೂಕ್ಷ್ಮ ಪ್ರಜ್ಞೆ ಅರಸು ಅವರಲ್ಲಿ ನಾನು ಕಂಡಿದ್ದೇನೆ. ಸಾಮಾಜಿಕ, ಆರ್ಥಿಕ ಸುಧಾರಣೆಗಳ ಹರಿಕಾರ ಅರಸು ಸದಾ ಸ್ಮರಣೀಯರು' ಎಂದು ಅಭಿಪ್ರಾಯಪಟ್ಟಿದ್ದಾರೆ.
ಶೋಷಿತ ಸಮುದಾಯಕ್ಕೆ ನ್ಯಾಯ ಒದಗಿಸುವ ಭರದಲ್ಲಿ ಇತರ ಸಮುದಾಯಗಳ ಮೇಲೆ ಸವಾರಿ ಮಾಡದ ರಾಜಕೀಯ ಸೂಕ್ಷ್ಮ ಪ್ರಜ್ಞೆ ಅರಸು ಅವರಲ್ಲಿ ನಾನು ಕಂಡಿದ್ದೇನೆ. ಸಾಮಾಜಿಕ, ಆರ್ಥಿಕ ಸುಧಾರಣೆಗಳ ಹರಿಕಾರ ಅರಸು ಸದಾ ಸ್ಮರಣೀಯರು.
3/3— H D Kumaraswamy (@hd_kumaraswamy) August 20, 2020