ಬೆಂಗಳೂರು: ನಗರದಲ್ಲಿ ಇದೇ ಮೊದಲ ಬಾರಿಗೆ ಸಿಸಿಬಿ (CCB) ಪೊಲೀಸರು ಬೃಹತ್ ಡ್ರಗ್ಸ್ ಜಾಲವನ್ನು ಪತ್ತೆ ಮಾಡಿದ್ದು ಎರಡು ಕ್ವಿಂಟಾಲ್ ಗಾಂಜಾ ವಶಪಡಿಸಿಕೊಂಡಿದ್ದಾರೆ. ಈ ಡ್ರಗ್ಸ್ ಜಾಲದಲ್ಲಿ ಕರ್ನಾಟಕದ ಖ್ಯಾತ ಸಂಗೀತಗಾರರೊಬ್ಬರು ಮತ್ತು ಚಿತ್ರನಟರು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ.
ಈ ಡ್ರಗ್ಸ್ ಜಾಲಕ್ಕೆ ಸಂಬಂಧಿಸಿದಂತೆ ನ್ಯಾರ್ಕೊಟಿಕ್ಸ್ ಕಂಟ್ರೋಲ್ ಬ್ಯೂರೋ (National Control Bureau) ಕರ್ನಾಟಕದ ಖ್ಯಾತ ಸಂಗೀತಗಾರರೊಬ್ಬರು ಮತ್ತು ಚಿತ್ರನಟರನ್ನು ವಿಚಾರಣೆಗೆ ಒಳಪಡಿಸುತ್ತಿದೆ. ಸಂಗೀತಗಾರ ಮತ್ತು ಚಿತ್ರನಟರನ್ನು ವಿಚಾರಣೆ ನಡೆಸುತ್ತಿರುವ ಬಗ್ಗೆ ನ್ಯಾರ್ಕೊಟಿಕ್ಸ್ ಕಂಟ್ರೋಲ್ ಬ್ಯೂರೋ (National Control Bureau) ಟ್ವೀಟ್ ಮಾಡಿ ಸ್ಪಷ್ಟಪಡಿಸಿದೆ.
ನಗರದಲ್ಲಿ ರಾಜಾರೋಷವಾಗಿ ಲಾರಿಯಲ್ಲೇ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಗಳ ಬೆನ್ನಟ್ಟಿದ ಸಿಸಿಬಿ ತಂಡ ಏಕಕಾಲದಲ್ಲಿ 204 ಕೆಜಿ ಗಾಂಜಾ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದೆ.
ನಗರದಲ್ಲಿ ಇದೇ ಮೊದಲ ಬಾರಿಗೆ ಇಷ್ಟು ಪ್ರಮಾಣದ ಗಾಂಜಾ ವಶಕ್ಕೆ ಪಡೆಯಲಾಗಿದ್ದು ಅದರ ಮೌಲ್ಯವನ್ನು ಬರೋಬ್ಬರಿ ಒಂದು ಕೋಟಿಗೂ ಹೆಚ್ಚು ಬೆಲೆಬಾಳಲಿದೆ ಎಂದು ಅಂದಾಜಿಸಲಾಗಿದೆ.
ಸಿಸಿಬಿ ಇನ್ಸ್ಪೆಕ್ಟರ್ ಬೊಳೆತ್ತಿನ್ ಹಾಗೂ ವಿರುಪಾಕ್ಷಪ್ಪ ನೇತೃತ್ವದಲ್ಲಿ ಕಾರ್ಯಚರಣೆ ಆರಂಭಿಸಿದ ತಂದ
ಸಮೀರ್, ಕೈಸರ್ ಪಾಷಾ, ಇಸ್ಮಾಯಿಲ್ ಎಂಬುವವರನ್ನು ಬಂಧಿಸಿದ್ದು ಬಂಧಿತ ಆರೋಪಿಗಳಿಂದ ಒಂದು ಲಾರಿ, ಒಂದು ಕಾರು, ಮೂರು ಮೊಬೈಲ್ ಸೇರಿದಂತೆ 204 ಕೆಜಿ ಗಾಂಜಾ ವಶಕ್ಕೆ ಪಡೆದಿದೆ.