ಅಧಿವೇಶನದ ಮುನ್ನವೇ ಸಂಪುಟ ವಿಸ್ತರಣೆ ಮಾಡಲು ಬಯಸಿದ್ದೇನೆ, ಹೈಕಮಾಂಡ್ ಏನು ಹೇಳುತ್ತೆ ನೋಡೋಣ: ಬಿಎಸ್‌ವೈ

ಭಾರತೀಯ ಜನತಾ ಪಕ್ಷದ ರಾಷ್ಟ್ರಾಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ (JP Nadda) ಅವರ ಜೊತೆಗೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಶುಕ್ರವಾರ ಸಮಾಲೋಚನೆ ನಡೆಸಲಾಗಿದೆ.   

Written by - Yashaswini V | Last Updated : Sep 19, 2020, 10:20 AM IST
  • ರಾಜ್ಯ ವಿಧಾನ ಮಂಡಲದ ಅಧಿವೇಶನದ ಪ್ರಾರಂಭವಾಗುವ ಮುನ್ನವೇ ಸಂಪುಟ ವಿಸ್ತರಣೆ ಮಾಡಬೇಕು
  • ಪಕ್ಷದ ವರಿಷ್ಠರ ಅನುಮತಿ ಮತ್ತು ಸಹಮತಿ ದೊರೆತ ಕೂಡಲೇ ಸಂಪುಟ ವಿಸ್ತರಣೆ
  • ರಾಜ್ಯದ ಪ್ರಸ್ತಾವನೆಗಳಿಗೆ ಪ್ರಧಾನಿ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.
ಅಧಿವೇಶನದ ಮುನ್ನವೇ ಸಂಪುಟ ವಿಸ್ತರಣೆ ಮಾಡಲು ಬಯಸಿದ್ದೇನೆ, ಹೈಕಮಾಂಡ್ ಏನು ಹೇಳುತ್ತೆ ನೋಡೋಣ: ಬಿಎಸ್‌ವೈ title=

ನವದೆಹಲಿ: ರಾಜ್ಯ ವಿಧಾನ ಮಂಡಲದ ಅಧಿವೇಶನದ ಪ್ರಾರಂಭವಾಗುವ ಮುನ್ನವೇ ಸಂಪುಟ ವಿಸ್ತರಣೆ ಮಾಡಬೇಕು ಎಂದುಕೊಂಡಿದ್ದೇನೆ. ಆದರೆ ಹೈಕಮಾಂಡ್ ಏನು ಹೇಳುತ್ತೆ ನೋಡೋಣ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ (BS Yediyurappa) ತಿಳಿಸಿದರು.

ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮದವರ ಜೊತೆಗೆ ಮಾತನಾಡಿದ ಅವರು ಭಾರತೀಯ ಜನತಾ ಪಕ್ಷದ ರಾಷ್ಟ್ರಾಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ (JP Nadda) ಅವರ ಜೊತೆಗೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಶುಕ್ರವಾರ ಸಮಾಲೋಚನೆ ನಡೆಸಲಾಗಿದೆ. ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಜೊತೆಗೆ ಚರ್ಚಿಸಿ ಸಂಜೆ ವೇಳೆಗೆ ಸೂಚನೆ ನೀಡುವ ಸಾಧ್ಯತೆ ಇದೆ. ಪಕ್ಷದ ವರಿಷ್ಠರ ಅನುಮತಿ ಮತ್ತು ಸಹಮತಿ ದೊರೆತ ಕೂಡಲೇ ಸಂಪುಟ ವಿಸ್ತರಣೆ ಮಾಡುವುದಾಗಿ ಹೇಳಿದರು.

ಪಿಎಂ ಭೇಟಿಯನ್ನು ಕುರ್ಚಿ ಉಳಿಸಿಕೊಳ್ಳುವ ಬದಲು ರಾಜ್ಯದ ಸಮಸ್ಯೆ ಬಗ್ಗೆ ಚರ್ಚಿಸಲು ಬಳಸಿಕೊಳ್ಳಿ: ಸಿದ್ದರಾಮಯ್ಯ

ದೆಹಲಿ ಭೇಟಿ ಅತ್ಯಂತ ಯಶಸ್ವಿ:
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಶುಕ್ರವಾರ ಭೇಟಿಯಾಗಿ ರಾಜ್ಯದ ಅಭಿವೃದ್ಧಿ ಕುರಿತಂತೆ ಚರ್ಚಿಸಲಾಗಿದೆ. ರಾಜ್ಯದ ಪ್ರಸ್ತಾವನೆಗಳಿಗೆ ಪ್ರಧಾನಿ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ರಾಜ್ಯದ ಬಹುತೇಕ ಬೇಡಿಕೆಗಳಿಗೆ ಇನ್ನು ಕೆಲವೇ ದಿನಗಳಲ್ಲಿ ಹಸಿರು ನಿಶಾನೆ ದೊರೆಯಲಿದೆ ಎಂಬ ವಿಶ್ವಾಸ ತಮ್ಮಲ್ಲಿದೆ ಎಂದರು.

ಪ್ರಧಾನಿ‌ ಮೋದಿ ಭೇಟಿ ಮಾಡಿದ ಸಿಎಂ ಯಡಿಯೂರಪ್ಪ

ರಾಜ್ಯದ ವಿವಿಧ ಯೋಜನಗೆಳ ಕುರಿತು ಅನುಮೋದನೆ ಹಾಗೂ ಮಂಜೂರಾತಿಗಾಗಿ ಕೇಂದ್ರದ ಹಲವು ಸಚಿವರನ್ನೂ ಕೂಡಾ ಖುದ್ದು ಭೇಟಿಯಾಗಿ ಮನವಿ ಸಲ್ಲಿಸಲಾಗಿದೆ. ಎಲ್ಲರೂ ಕೂಡಾ ರಾಜ್ಯದ ಅಭಿವೃದ್ಧಿ ಪ್ರಸ್ತಾವನೆಗಳಿಗೆ ಉತ್ತಮವಾಗಿ ಸ್ಪಂದಿಸಿದ್ದಾರೆ. ಈ ಹಿನ್ನೆಲೆಯಲ್ಲಿ ತಮ್ಮ ದೆಹಲಿ ಭೇಟಿ ಅತ್ಯಂತ ಯಶಸ್ವಿಯಾಗಿದೆ ಎಂದು ಯಡಿಯೂರಪ್ಪ ಬಣ್ಣಿಸಿದರು.

Trending News