ಬೆಂಗಳೂರು : ಭಾರತ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು ಬೀಡಿ, ಸುಣ್ಣದ ಕಲ್ಲು, ಡೊಲೊಮೈಟ್, ಕಬ್ಬಿಣ, ಕ್ರೋಮ್, ಮ್ಯಾಂಗನೀಸ್ ಅದಿರಿನ ಗಣಿಗಳು ಹಾಗೂ ಚಲನಚಿತ್ರ ಕ್ಷೇತ್ರದಲ್ಲಿ ಕೆಲಸ ಮಾಡುವ ಕಾರ್ಮಿಕರ ಮಕ್ಕಳಿಗೆ 2020-21 ನೇ ಸಾಲಿನ ಶಿಕ್ಷಣಕ್ಕಾಗಿ ಆರ್ಥಿಕ ನೆರವು ನೀಡಲು ಆನ್ಲೈನ್ನಲ್ಲಿ ಅರ್ಜಿ ಆಹ್ವಾನಿಸಿದೆ.
1 ನೇ ತರಗತಿಯಿಂದ ಪದವಿ, ಸ್ನಾತಕೋತ್ತರ ಪದವಿ ವರೆಗಿನ ವಿದ್ಯಾಥಿಗಳು, ವೃತ್ತಿಪರ ಮತ್ತು ಸಾಮಾನ್ಯ ಶಿಕ್ಷಣ ಕೊರ್ಸುಗಳನ್ನು ಪಡೆಯುತ್ತಿರುವವರು ನ್ಯಾಷನಲ್ ಸ್ಕಾಲರ್ಶಿಪ್ ಪೋರ್ಟಲ್ನಲ್ಲಿ https://schoolarships.gov.in ಆನ್ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬಹುದು.
ಮೆಟ್ರಿಕ್ ಪೂರ್ವ ತರಗತಿಗಳ ವಿದ್ಯಾರ್ಥಿಗಳು ಅಕ್ಟೋಬರ್ 31 ರೊಳಗೆ, ಮೆಟ್ರಿಕ್ ನಂತರದ ವಿದ್ಯಾರ್ಥಿಗಳು ನವೆಂಬರ್ 15 ರೊಳಗೆ ಅರ್ಜಿ ಸಲ್ಲಿಸಬಹುದು.ಹೆಚ್ಚಿನ ವಿವರಗಳಿಗೆ helpdesk@msp.gov.in ಇ-ಮೇಲ್ ಅಥವಾ ಸಹಾಯವಾಣಿ ಸಂಖ್ಯೆ-0120-6619540 ಸಂಪರ್ಕಿಸಬಹುದು.