ತಲ್ಕೋಟ ಕ್ರೀಡಾಂಗಣದಲ್ಲಿ ಪ್ರಧಾನಿ ನರೇಂದ್ರ ಮೋದಿ 100 ಮಿಲಿಯನ್ ಮಕ್ಕಳು, ಶಿಕ್ಷಕರು ಮತ್ತು ಪೋಷಕರೊಂದಿಗೆ ಸಮಾಲೋಚನೆ ನಡೆಸಿದರು. ಈ ಸಮಯದಲ್ಲಿ, ಅವರು ವಿದ್ಯಾರ್ಥಿಗಳ ಪರೀಕ್ಷೆಗಳಿಗೆ ಸಂಬಂಧಿಸಿದ ವಿವಿಧ ವಿಷಯಗಳನ್ನು ಚರ್ಚಿಸಿದ್ದಾರೆ.
ಕಾರ್ಯಕ್ರಮದಲ್ಲಿ, ವಿದ್ಯಾರ್ಥಿಗಳು ವರ್ಣರಂಜಿತ ಕಾರ್ಯಕ್ರಮವನ್ನು ಪ್ರಸ್ತುತಪಡಿಸಿದರು. ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರಿಸಿದ ಪ್ರಧಾನಿ "ಮನಸ್ಸಿನ ಮಾತನ್ನು ನಂಬಿರಿ ಎನ್ನುತ್ತಾ ಆತ್ಮವಿಶ್ವಾಸವನ್ನು ಎಚ್ಚರಗೊಳ್ಳುವಂತೆ ಮಾತನಾಡುತ್ತಿದ್ದರು. "ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ತಮ್ಮನ್ನು ತಾವು ನಂಬಬೇಕು" ಎಂಬ ಕಿವಿ ಮಾತನ್ನು ಹೇಳಿದರು.
ತಲ್ಕೋಟ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ಪ್ರಾರಂಭವಾಗುವ ಮೊದಲು ಅಲ್ಲಿ ಪ್ರಸ್ತುತ ಪಡಿಸಲಾಗಿದ್ದ ಕಲಾಕೃತಿಗಳು ಮತ್ತು ಪೇಪರ್ಗಳ ಪ್ರದರ್ಶನಗಳನ್ನು ಮೋದಿ ವೀಕ್ಷಿಸಿದರು. ಈ ಸಂದರ್ಭದಲ್ಲಿ, ಪ್ರಧಾನಿ ಮೋದಿ ಅಲ್ಲಿಂದ ಅಧಿಕಾರಿಗಳಿಂದ ಅದರ ಬಗ್ಗೆ ಮಾಹಿತಿಯನ್ನು ಪಡೆದರು.
ತಲ್ಕೋಟ ಕ್ರೀಡಾಂಗಣದಲ್ಲಿ ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರಿಸಿದ ಪ್ರಧಾನಿ ಮೋದಿ, ಆತ್ಮವಿಶ್ವಾಸವನ್ನು ಬೆಳೆಸಿಕೊಳ್ಳುತ್ತ, ನಮ್ಮ ಮೇಲೆ ನಾವೇ ನಂಬಿಕೆ ಇಟ್ಟು ತಂದೆ-ತಾಯಿಯೊಂದಿಗೆ ಚರ್ಚಿಸುವ ಸಾಮರ್ಥ್ಯವನ್ನು ಹೇಗೆ ಬೆಳೆಸಿಕೊಳ್ಳಬೇಕು ಎಂಬುದನ್ನು ತಿಳಿಸಿದರು.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಪೋಷಕರು ತಮ್ಮ ಮಕ್ಕಳಲ್ಲಿ ಸಂಪೂರ್ಣವಾಗಿ ನಂಬಿಕೆ ಇಡಬೇಕು ಎಂದು ಹೇಳಿದರು. ಪೋಷಕರ ಭಾವನೆಗಳನ್ನು ಅರ್ಥಮಾಡಿಕೊಳ್ಳುವುದರ ಕುರಿತು ಮಾತಾಡುತ್ತಾ, ಅವರ ಮೂಲಕ ಅಪೂರ್ಣ ಕನಸುಗಳನ್ನು ಪೂರೈಸಲು ಪೋಷಕರು ಪ್ರಯತ್ನಿಸುತ್ತಿದ್ದಾರೆ ಎಂದು ಮೋದಿ ಹೇಳಿದರು. (ಫೋಟೋ ಕೃಪೆ: ANI)