ಕಾಂಗ್ರೆಸ್​ ಸದಸ್ಯತ್ವದಿಂದ ಮೊಹಮ್ಮದ್​ ಹ್ಯಾರಿಸ್ ನಳಪಾಡ್ 6 ವರ್ಷ ಉಚ್ಚಾಟನೆ

ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್​ ಹ್ಯಾರಿಸ್ ನಳಪಾಡ್​ ನನ್ನು ಬೆಂಗಳೂರು ಜಿಲ್ಲಾ ಯುವ ಕಾಂಗ್ರೆಸ್​  ಸದಸ್ಯತ್ವದಿಂದ 6 ವರ್ಷಗಳ ಕಾಲ ಉಚ್ಛಾಟಿಸಿದೆ.

Last Updated : Feb 18, 2018, 12:51 PM IST
ಕಾಂಗ್ರೆಸ್​ ಸದಸ್ಯತ್ವದಿಂದ ಮೊಹಮ್ಮದ್​ ಹ್ಯಾರಿಸ್ ನಳಪಾಡ್ 6 ವರ್ಷ ಉಚ್ಚಾಟನೆ title=

ಬೆಂಗಳೂರು: ಶಾಂತಿನಗರ ಶಾಸಕ ಎನ್​.ಎ ಹ್ಯಾರಿಸ್​ ಪುತ್ರ ಹಾಗೂ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್​ ಹ್ಯಾರಿಸ್ ನಳಪಾಡ್​ ನನ್ನು ಬೆಂಗಳೂರು ಜಿಲ್ಲಾ ಯುವ ಕಾಂಗ್ರೆಸ್​  ಸದಸ್ಯತ್ವದಿಂದ 6 ವರ್ಷಗಳ ಕಾಲ ಉಚ್ಛಾಟಿಸಿದೆ.

ಈ ಕುರಿತು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್​ ನಿರ್ಧಾರ ಕೈಗೊಂಡಿದ್ದು, ಪಕ್ಷದ ಟ್ವಿಟರ್ ಖಾತೆಯಲ್ಲಿ ಈ ನಿರ್ಧಾರವನ್ನು ತಿಳಿಸಿದ್ದಾರೆ. 

ಅಲ್ಲದೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಕೂಡ, ಈ ಪ್ರಕರಣ ಸಂಬಂಧ ಪ್ರತಿಕ್ರಿಯಿಸಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ ಬೆನ್ನಲ್ಲೇ ಪಕ್ಷವು ಈ ನಿರ್ಧಾರ ಕೈಕೊಂಡಿದೆ. 

ಇದನ್ನೂ ಓದಿ : ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ; ಶಾಸಕರ ಪುತ್ರನ ಹಲ್ಲೆ ಪ್ರಕರಣಕ್ಕೆ ಸಿಎಂ ಪ್ರತಿಕ್ರಿಯೆ

ಬೆಂಗಳೂರಿನ ಶಾಂತಿನಗರ ಶಾಸಕ ಹ್ಯಾರಿಸ್ ಅವರ ಮಗ ಮಹಮ್ಮದ್ ನಲಪಾಡ್ ಹ್ಯಾರಿಸ್ ಇಲ್ಲಿನ ಯುಬಿ ರೆಸ್ಟೋರೆಂಟ್ನಲ್ಲಿ ಶನಿವಾರ ರಾತ್ರಿ ವಿದ್ವತ್ ಎಂಬ ಯುವಕನ ಮೇಲೆ ಹಲ್ಲೆ ನಡೆಸಿದ್ದರು. ಈ ಸಂಬಂಧ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಆಗಿರುವ ಮೊಹಮ್ಮದ್ ಹ್ಯಾರಿಸ್ ನಳಪಾಡ್ ಮತ್ತು ಇತರ 10 ಮಂದಿ ವಿರುದ್ಧ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಿಸಲಾಗಿದೆ. 

ಇದನ್ನೂ ಓದಿ : ಬೆಂಗಳೂರಿನಲ್ಲಿ ಶಾಸಕನ ಪುತ್ರನಿಂದ ಯುವಕನ ಮೇಲೆ ಹಲ್ಲೆ

ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿರುವ ವಿದ್ವತ್​ ಅವರನ್ನು ಮಲ್ಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Trending News