ಬೆಂಗಳೂರು: ಕೊರೋನಾ ಸೋಂಕು ಹಾಗೂ ನೆರೆ ಹಾವಳಿಯಿಂದ ತತ್ತರಿಸಿರುವ ಜನತೆಯ ಮೇಲೆ ಕನಿಷ್ಠ ಒಂದು ವರ್ಷ ವಿದ್ಯುತ್ ದರ ಏರಿಕೆಯ ಬರೆ ಹಾಕಬಾರದು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ (HD Kumaraswamy) ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಕೊರೋನಾ ಸೋಂಕು ಹಾಗೂ ನೆರೆ ಹಾವಳಿಯಿಂದ ತತ್ತರಿಸಿರುವ ಜನತೆಯ ಮೇಲೆ ಕನಿಷ್ಠ ಒಂದು ವರ್ಷ ವಿದ್ಯುತ್ ದರ ಏರಿಕೆಯ ಬರೆ ಹಾಕಬಾರದು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸುತ್ತೇನೆ.
1/3— H D Kumaraswamy (@hd_kumaraswamy) November 5, 2020
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, 'ಕೊರೋನಾ ಸೋಂಕು ತಗುಲಿದ ನಂತರ ಜನರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಎಲ್ಲಾ ವಲಯಗಳು ನಷ್ಟದ ಸುಳಿಗೆ ಸಿಲುಕಿವೆ. ಜನತೆ ಉದ್ಯೋಗ, ವೇತನ ಇಲ್ಲದೆ ಕಂಗಾಲಾಗಿದ್ದಾರೆ. ವಿದ್ಯುತ್ ದರ ಏರಿಕೆಯನ್ನು ಮುಂದೂಡುವುದು ಒಳಿತು' ಎಂದು ಸಲಹೆ ನೀಡಿದ್ದಾರೆ.
ಕೊರೋನಾ ಸೋಂಕು ತಗುಲಿದ ನಂತರ ಜನರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಎಲ್ಲಾ ವಲಯಗಳು ನಷ್ಟದ ಸುಳಿಗೆ ಸಿಲುಕಿವೆ. ಜನತೆ ಉದ್ಯೋಗ, ವೇತನ ಇಲ್ಲದೆ ಕಂಗಾಲಾಗಿದ್ದಾರೆ. ವಿದ್ಯುತ್ ದರ ಏರಿಕೆಯನ್ನು ಮುಂದೂಡುವುದು ಒಳಿತು.
2/3— H D Kumaraswamy (@hd_kumaraswamy) November 5, 2020
ಇದಲ್ಲದೆ ಪ್ರತಿ ಯೂನಿಟ್ಗೆ 20 ಪೈಸೆಯಿಂದ 50 ಪೈಸೆವರೆಗೆ, ಸರಾಸರಿ 40 ಪೈಸೆ ಹೆಚ್ಚಳ ಮಾಡಿರುವುದು ಜನರಿಗೆ ಮತ್ತಷ್ಟು ಹೊರೆಯಾಗಲಿದೆ. ಒಂದು ವರ್ಷ ಕಾಲ ದರ ಏರಿಕೆ ನಿರ್ಧಾರವನ್ನು ಸರ್ಕಾರ ಕೈಬಿಡಬೇಕು ಎಂದು ಆಗ್ರಹಿಸುತ್ತೇನೆ ಎಂದು ಕುಮಾರಸ್ವಾಮಿ ಮತ್ತೊಂದು ಟ್ವೀಟ್ ಮಾಡಿದ್ದಾರೆ.
ಪ್ರತಿ ಯೂನಿಟ್ಗೆ 20 ಪೈಸೆಯಿಂದ 50 ಪೈಸೆ ವರೆಗೆ, ಸರಾಸರಿ 40 ಪೈಸೆ ಹೆಚ್ಚಳ ಮಾಡಿರುವುದು ಜನರಿಗೆ ಮತ್ತಷ್ಟು ಹೊರೆಯಾಗಲಿದೆ. ಒಂದು ವರ್ಷ ಕಾಲ ದರ ಏರಿಕೆ ನಿರ್ಧಾರವನ್ನು ಸರ್ಕಾರ ಕೈಬಿಡಬೇಕು ಎಂದು ಆಗ್ರಹಿಸುತ್ತೇನೆ.
3/3— H D Kumaraswamy (@hd_kumaraswamy) November 5, 2020